ಮಂಗಳೂರು | ಇಡಿ ಅಧಿಕಾರಿಗಳ ಸೋಗಿನಲ್ಲಿ ಬೀಡಿ ಉದ್ಯಮಿ ಮನೆಗೆ ದಾಳಿ ಪ್ರಕರಣ: ಮತ್ತೋರ್ವನ ಬಂಧನ

Date:

Advertisements

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಖ್ಯಾತ ಬೀಡಿ ಉದ್ಯಮಿಯೋರ್ವರ ಮನೆಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಸೋಗಿನಲ್ಲಿ ದಾಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ವಿಟ್ಲದ ಬೋಳಂತೂರಿನ ಸಮೀಪ ನಾರ್ಶದ ಸಿಂಗಾರಿ ಬೀಡಿ ಉದ್ಯಮಿ ಸುಲೈಮಾನ್ ಹಾಜಿ ಎಂಬವರ ಮನೆಯಲ್ಲಿ ಕಳೆದ ಡಿಸೆಂಬರ್‌ನಲ್ಲಿ ಇಡಿ ಅಧಿಕಾರಿಗಳ ಸೋಗಿನಲ್ಲಿ ದರೋಡೆ ನಡೆಸಿದ ತಂಡದ ಇನ್ನೋರ್ವ ಸದಸ್ಯನನ್ನು ಪೊಲೀಸರು ಮುಂಬೈಯಲ್ಲಿ ಬಂಧಿಸಿ ಕರೆತಂದಿದ್ದಾರೆ.

ಕೇರಳ ಮೂಲದ ಸಚಿನ್ ಸೆರೆಯಾಗಿರುವ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಂಧನವಾದ ಬೆನ್ನಿಗೆ ತೀವ್ರ ಅಸ್ವಸ್ಥನಾಗಿರುವ ಹಿನ್ನೆಲೆಯಲ್ಲಿ ಆರೋಪಿಯನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಒಳರೋಗಿಯಾಗಿ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಆರೋಪಿ ಅಪಸ್ಮಾರ ಮತ್ತು ತಲೆನೋವಿನಿಂದ ಬಳಲುತ್ತಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Advertisements

ಈ ಪ್ರಕರಣಕ್ಕೆ ಸಂಬಂಧಿಸಿ ಕೆಲದಿನಗಳ ಹಿಂದೆ ಕೇರಳದ ಕೊಟ್ಟಾಯಂನ ಅನಿಲ್ ಫೆರ್ನಾಂಡಿಸ್‌ ಎಂಬಾತನನ್ನು ಬಂಧಿಸಿ ಅವನಿಂದ ದರೋಡೆ ಬಳಸಿದ ಎರ್ಟಿಗಾ ಕಾರನ್ನು ವಶಪಡಿಸಿಕೊಳ್ಳಲಾಗಿತ್ತು.

singari beedi

ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಈ ಪ್ರಕರಣದ ತನಿಖೆ ಬಹಳ ನಿಧಾನಗತಿಯಲ್ಲಿ ಸಾಗುತ್ತಿರುವ ಕುರಿತು ಅನೇಕ ಅನುಮಾನಗಳು ಸಾರ್ವಜನಿಕರ ಮನಸ್ಸಿನಲ್ಲಿ ಇವೆ. ಆರು ಮಂದಿಯ ತಂಡ ಈ ಕೃತ್ಯ ಎಸಗಿದ್ದು, ಇನ್ನೂ ನಾಲ್ಕು ಮಂದಿಯ ಬಂಧನವಾಗಬೇಕಾಗಿದೆ.

ಕಳೆದ ಡಿ. 3ರಂದು ರಾತ್ರಿ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾರ್ಶದಲ್ಲಿರುವ ಸುಲೈಮಾನ್ ಹಾಜಿಯವರ ಬಂಗಲೆಗೆ ಇ.ಡಿ. ಅಧಿಕಾರಿಗಳ ಸೋಗಿನಲ್ಲಿ ಬಂದಿದ್ದ ತಂಡ ಅಕ್ರಮ ಆಸ್ತಿ ಸಂಪಾದಿಸಿದ ಕುರಿತು ಪರಿಶೋಧನೆ ಮಾಡಬೇಕಿದೆ ಎಂದು ಹೇಳಿ ಎರಡೂವರೆ ತಾಸು ಜಾಲಾಡಿತ್ತು.

ಇದನ್ನು ಓದಿದ್ದೀರಾ? ರಾಜ್ಯ ಬಜೆಟ್ | ವಿದ್ಯಾರ್ಥಿಗಳಿಗೆ ಹೆಚ್ಚಿನ ಶೈಕ್ಷಣಿಕ ಅನುದಾನ ಒದಗಿಸುವಂತೆ ಎಸ್‌ಐಓ ಆಗ್ರಹ

ವಂಚಕರು ಮನೆಯಿಂದ ಹೊರಡುವಾಗ, ‘ನಮ್ಮ ಜೊತೆ ಹಿಂದಿನಿಂದ ಬನ್ನಿ ತನಿಖೆ ಪೂರ್ಣಗೊಂಡ ಬಳಿಕ ಮೊಬೈಲ್ ಹಿಂತಿರುಗಿಸುತ್ತೇವೆ’ ಎಂದು ಹೇಳಿದ್ದಾರೆ. ಮಾತು ನಂಬಿದ ಉದ್ಯಮಿ ಕಾರಿನಲ್ಲಿ ಹಾಗೂ ಅವರ ಪುತ್ರ ಸ್ಕೂಟರ್‌ನಲ್ಲಿ ಹಿಂಬಾಲಿಸಿದ್ದಾರೆ.

ನಾರ್ಶದಿಂದ ಬೋಳಂತೂರು ರಸ್ತೆ ಮೂಲಕ ಕಲ್ಲಡ್ಕದ ಕಡೆಗೆ ಕಾರು ಸಂಚರಿಸಿದೆ. ಬೋಳಂತೂರು ಸಮೀಪಿಸುತ್ತಿದ್ದಂತೆ ಹಿಂಬಾಲಿಸಲು ಸಾಧ್ಯವಾಗದಷ್ಟು ವೇಗವಾಗಿ ವಂಚಕರ ಕಾರು ಮುಂದೆ ಸಾಗಿದೆ. ಕಾರು ಕಾಣದೇ ಇದ್ದಾಗ ಉದ್ಯಮಿ ಪುತ್ರ ಕರೆ ಮಾಡಿದ್ದಾರೆ. ಆಗ ಮೊಬೈಲ್ ಸ್ವಿಚ್‌ಆಫ್ ಆಗಿದೆ. ಆಗ ಏನೋ ಮೋಸ ನಡೆದಿರುವುದು ಅರಿವಿಗೆ ಬಂದಿದೆ. ಬಳಿಕ ನಕಲಿ ಇ.ಡಿ.ಅಧಿಕಾರಿಗಳ ಕೃತ್ಯ ಎಂದು ಗೊತ್ತಾಗಿತ್ತು.

ಪ್ರಕರಣ ನಡೆದು ಎರಡು ತಿಂಗಳು ಕಳೆದರೂ ಇನ್ನೂ ಎಲ್ಲ ಆರೋಪಿಗಳ ಬಂಧನವಾಗಿಲ್ಲ. ಅದರ ಬಳಿಕ ಕಳೆದ ಜನವರಿಯಲ್ಲಿ ನಡೆದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣವನ್ನು ಪೊಲೀಸರು ನಾಲ್ಕೇ ದಿನದಲ್ಲಿ ಭೇದಿಸಿ ಎಲ್ಲ ಆರೋಪಿಗಳನ್ನು ಬಂಧಿಸಿದ್ದಾರೆ. ನಾರ್ಶದ ದರೋಡೆ ಪ್ರಕರಣ ಇಷ್ಟು ಜಟಿಲವಾದದ್ದೇಕೆ ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ.

ಖದೀಮರು 30 ಲಕ್ಷ ರೂ. ದೋಚಿ ಪರಾರಿಯಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X