ಮಂಗಳೂರು | ಬಜೆಟ್‌ನಲ್ಲಿ ಬಂಟರ ಅಭಿವೃದ್ಧಿ ನಿಗಮ ಸ್ಥಾಪನೆ ಘೋಷಿಸದಕ್ಕೆ ಆಕ್ರೋಶ

Date:

ಬಂಟರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ರಾಜ್ಯ ಬಜೆಟ್‌ನಲ್ಲಿ ಭರವಸೆಯನ್ನು ಈಡೇರಿಸದೆ, ಸಮುದಾಯನ್ನು ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಜಾಗತಿಕ ಬಂಟರ ಸಂಘ ಆಕ್ರೋಶ ವ್ಯಕ್ತಪಡಿಸಿದೆ.

- Advertisement -

ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಾಗತಿಕ ಬಂಟರ ಸಂಘದ ಅಧ್ಯಕ್ಷ, ಐಕಳ ಹರೀಶ್ ಶೆಟ್ಟಿ, “ತಕ್ಷಣವೇ ಬಂಟರ ಅಭಿವೃದ್ಧಿ ನಿಗಮವನ್ನು ಸ್ಥಾಪನೆ ಮಾಡಿ 500 ಕೋಟಿ ರೂಪಾಯಿ ಅನುದಾನ ನೀಡಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಳಿ ನಿಯೋಗ ತೆರಳಿ ಬಂಟರ ನಿಗಮ ಸ್ಥಾಪನೆ ಹಾಗೂ ಬಂಟರ ಮೀಸಲಾತಿಯನ್ನು 3ಬಿ ಯಿಂದ 2ಎಗೆ ಬದಲಾಯಿಸಲು ಒತ್ತಾಯಿಸಿದ್ದೇವು, ಅದರೆ, ಅದು ಈಡೇರಲಿಲ್ಲ. ಬಳಿಕ ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ರಮಾನಾಥ ರೈ ಹಾಗೂ ಮಿಥುನ್ ರೈ ಜೊತೆ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಆಗ್ರಹ ಮಾಡಿದ್ದೇವು.

ಈ ಆಗ್ರಹದ ಹಿನ್ನೆಲೆಯಲ್ಲಿ ಕಳೆದ ಅಕ್ಟೋಬರ್ ತಿಂಗಳಲ್ಲಿ ಉಡುಪಿಯಲ್ಲಿ ನಡೆದ ವಿಶ್ವ ಬಂಟರ ಸಮ್ಮೇಳನದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಜೆಟ್‌ನಲ್ಲಿ ಬಂಟರ ನಿಗಮ ಸ್ಥಾಪನೆ ಹಾಗೂ ನಿಗಮಕ್ಕೆ ಅನುದಾನ ನೀಡುವ ಬಗ್ಗೆ ಪ್ರಕಟಿಸುವುದಾಗಿ ಸಭೆಯಲ್ಲಿ ಘೋಷಣೆ ಮಾಡಿದ್ದರು ಎಂದು ಐಕಳ ಹರೀಶ್ ಶೆಟ್ಟಿ ನೆನಪಿಸಿದರು.

ಈ ಘೋಷಣೆಯ ಮರುದಿನ ದಕ್ಷಿಣ ಕನ್ನಡ ಜಿಲ್ಲೆಯ ಬಂಟ ಸಮುದಾಯದ  ಕಾಂಗ್ರೆಸ್ ನಾಯಕರು ಪತ್ರಿಕಾ ಜಾಹೀರಾತು ನೀಡಿ ಮುಖ್ಯಮಂತ್ರಿಗೆ ಅಭಿನಂದನೆ ಸಲ್ಲಿಸಿದ್ದರು. ಆದರೆ, ಈ ಅಭಿನಂದನೆ ಸಲ್ಲಿಸಿದ ಕಾಂಗ್ರೆಸ್ ನಾಯಕರು ಈಗ ಯಾಕೆ  ಮಾತನಾಡುವುದಿಲ್ಲ ಎಂದು ಹರೀಶ್ ಶೆಟ್ಟಿ ಪ್ರಶ್ನೆ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷವು ಕಳೆದ ಚುನಾವಣೆಯಲ್ಲಿ ತನ್ನ ಕರಾವಳಿ ಪ್ರಣಾಳಿಕೆಯಲ್ಲಿ ಬಂಟರ ನಿಗಮ ಸ್ಥಾಪನೆ ಬಗ್ಗೆ ಭರವಸೆ ನೀಡಿತ್ತು. ಆದರೆ ಭರವಸೆ ಈಡೇರಿಸಿಲ್ಲ. ಈ ಕೂಡಲೇ ಬಂಟರ ನಿಗಮ ಸ್ಥಾಪನೆಯ ಲಿಖಿತ ಆದೇಶವನ್ನು ಪ್ರಕಟಿಸಬೇಕು ಎಂದು ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಸಂಘದ ಮುಖಂಡರಾದ ಕರ್ನಿರೆ ವಿಶ್ವನಾಥ ಶೆಟ್ಟಿ, ಜಯಕರ ಶೆಟ್ಟಿ ಇಂದ್ರಾಳಿ, ಚಂದ್ರಹಾಸ ಶೆಟ್ಟಿ, ಬಾಳ ಜಗನ್ನಾಥ ಶೆಟ್ಟಿ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...

ಧಾರವಾಡ | ಗ್ರಂಥಾಲಯದಲ್ಲಿ ಎಐ ಬಳಕೆ ಇತಿ-ಮಿತಿ ಇರಲಿ: ವಿಶ್ರಾಂತ ಕುಲಪತಿ ಪ್ರೊ. ಬಿ.ಡಿ.ಕುಂಬಾರ

"ಗ್ರಂಥಾಲಯದಲ್ಲಿ ಎಐ ಅಳವಡಿಕೆ ಮಾಡಿಕೊಳ್ಳುವದು ಒಳ್ಳೆಯದು. ಆದರೆ ಇದು ಮನುಷ್ಯನ ಸೃಜನಶೀಲತೆ...

ಯಾದಗಿರಿ | ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸಿಡಬ್ಲ್ಯೂ‌ಎಫ್‌ಐ, ಸಿಐಟಿಯು ಆಗ್ರಹ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ...

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...