ಮಂಗಳೂರು | ಪತ್ರಕರ್ತರಿಗೆ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ: ಫಲಿತಾಂಶ ಪ್ರಕಟ

Date:

Advertisements

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮದ ಪ್ರಯುಕ್ತ ಪತ್ರಿಕಾ ಛಾಯಾಗ್ರಾಹಕರಿಗಾಗಿ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ.

ಹುಬ್ಬಳ್ಳಿಯ ಕನ್ನಡ ಪ್ರಭ ಪತ್ರಿಕೆಯ ಛಾಯಾಗ್ರಾಹಕ ಈರಪ್ಪ ನಾಯ್ಕರ್ ಅವರ ಚಿತ್ರ ಪ್ರಥಮ ಸ್ಥಾನ ಪಡೆದಿದೆ. ಮೈಸೂರಿನ ಕನ್ನಡಪ್ರಭ ಪತ್ರಿಕೆಯ ಛಾಯಾಗ್ರಾಹಕ ಎಂ.ಎಸ್. ಬಸವಣ್ಣ ಅವರು ದ್ವಿತೀಯ, ಮೈಸೂರಿನ ದ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಪ್ರಿನ್ಸಿಪಾಲ್ ಫೋಟೋಗ್ರಾಪರ್ ಉದಯಶಂಕರ್ ಅವರು ತೃತೀಯ ಪಡೆದುಕೊಂಡಿದ್ದಾರೆ.

1001650855
ದ್ವಿತೀಯ ಸ್ಥಾನ ಪಡೆದ ಫೋಟೋ

ಬೆಂಗಳೂರಿನ ಪ್ರಜಾವಾಣಿಯ ಹಿರಿಯ ಛಾಯಾಗ್ರಾಹಕ ಎಂ.ಎಸ್. ಮಂಜುನಾಥ್ ಮತ್ತು ಇಂದ್ರಕುಮಾರ್ ದಸ್ತೇನವರ ಚಿತ್ರ ತೀರ್ಪುಗಾರರ ಮೆಚ್ಚುಗೆಯ ಬಹುಮಾನಕ್ಕೆ ಪಾತ್ರವಾಗಿದೆ

Advertisements

ಆಗಸ್ಟ್ 6ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿರುವ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪತ್ರಕರ್ತರ ಸಂಘ ತಿಳಿಸಿದೆ.

IMG 20250805 WA1634
ಪ್ರಥಮ ಸ್ಥಾನ ಪಡೆದ ಫೋಟೋ

    ಸುದ್ದಿ ಚಿತ್ರ ವಿಭಾಗದಲ್ಲಿ ಸ್ಪರ್ಧೆಗೆ ಛಾಯಾಚಿತ್ರ ಆಹ್ವಾನಿಸಲಾಗಿತ್ತು. ಪ್ರಥಮ ಬಹುಮಾನ 10 ಸಾವಿರ ರೂ. ಮತ್ತು ನಗದು ಫಲಕ, ದ್ವಿತೀಯ ಬಹುಮಾನ 5 ಸಾವಿರ ರೂ. ನಗದು ಮತ್ತು ಫಲಕ ಹಾಗೂ ತೃತೀಯ ಬಹುಮಾನ 3 ಸಾವಿರ ರೂ. ನಗದು ಮತ್ತು ಫಲಕ ನೀಡಲಾಗುವುದು ಛಾಯಾಚಿತ್ರ ಸ್ಪರ್ಧಾ ವಿಭಾಗದ ಸಂಚಾಲಕ ಸತೀಶ್ ಇರಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಈದಿನ 1
    ಈ ದಿನ ಡೆಸ್ಕ್
    + posts

    ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

    ಪೋಸ್ಟ್ ಹಂಚಿಕೊಳ್ಳಿ:

    LEAVE A REPLY

    Please enter your comment!
    Please enter your name here

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

    ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

    ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

    ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

    ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

    ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

    ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

    ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

    Download Eedina App Android / iOS

    X