ಮಂಗಳೂರು | ಪ್ಯಾಲೆಸ್ತೀನ್ ಪರ ಶಾಂತಿಯುತ ಪ್ರತಿಭಟನೆ ನಡೆಸಿದವರ ಮೇಲೆ ಎಫ್‌ಐಆರ್‌ ದಾಖಲಿಸಿದ ಪೊಲೀಸರು!

Date:

Advertisements

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆಯೋ ಅಥವಾ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆಯೋ ಎಂಬ ಅನುಮಾನವು ಪ್ರಗತಿಪರ ವಲಯದಲ್ಲಿ ಕೇಳಿಬರತೊಡಗಿದೆ. ಇದಕ್ಕೆ ಕಾರಣ, ಮಂಗಳೂರಿನಲ್ಲಿ ಇತ್ತೀಚೆಗೆ ಪ್ಯಾಲೆಸ್ತೀನ್ ಪರ ಶಾಂತಿಯುತ ಪ್ರತಿಭಟನೆ ನಡೆಸಿದವರ ಮೇಲೆ ಮಂಗಳೂರು ನಗರ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿರುವುದು.

ಪ್ಯಾಲೆಸ್ತೀನ್ ಮೇಲಿನ ದಾಳಿ ವಿರೋಧಿಸಿ, ಕದನ ವಿರಾಮಕ್ಕೆ ಒತ್ತಾಯಿಸಿ ಮಂಗಳೂರಿನಲ್ಲಿ ಎಡಪಕ್ಷಗಳ ವತಿಯಿಂದ ನ.4ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಒಂದು ವಾರಕ್ಕೆ ಮುಂಚಿತವಾಗಿಯೆ ಪ್ರತಿಭಟನೆಯ ಮಾಹಿತಿ ನೀಡಿ, ಧ್ವನಿವರ್ಧಕ ಬಳಕೆಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಲಾಗಿದ್ದರೂ, ಕಾನೂನು ಸುವ್ಯವಸ್ಥೆ ಡಿಸಿಪಿ ಪ್ರತಿಭಟನೆಗೆ ಅನುಮತಿ ನಿರಾಕರಿಸಿ ಸಿಪಿಐಎಂ ಕಚೇರಿಗೆ ನೋಟಿಸ್ ಜಾರಿಗೊಳಿಸಿದ್ದರು.

ಕಾನೂನು ಸುವ್ಯವಸ್ಥೆಯ ಕಾರಣವನ್ನು ಮುಂದೊಡ್ಡಿದ್ದರು‌. ಆದರೂ, ಪ್ರತಿಭಟನೆ ರದ್ದುಗೊಳಿಸಲು ನಿರಾಕರಿಸಿದ್ದ ಎಡಪಕ್ಷಗಳ ನಾಯಕರು, ಧ್ವನಿ ವರ್ಧಕ ಬಳಸದೆ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು‌. ‘ಅದಕ್ಕೂ ಅವಕಾಶ ಇಲ್ಲ, ಪ್ರತಿಭಟನೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ’ ಎಂದು ಪೊಲೀಸ್ ಅಧಿಕಾರಿಗಳು ಎಚ್ಚರಿಸಿದ್ದರು.

Advertisements
mangalore 3

ಈ ಎಚ್ಚರಿಕೆಗೆ ಮಣಿಯದ ಎಡಪಕ್ಷಗಳು ಪ್ರತಿಭಟನಾ ಸಭೆಯನ್ನು ತೀರ್ಮಾನದಂತೆ ನಡೆಸಿದರು. ಪೊಲೀಸ್ ಇಲಾಖೆಯ ಈ ನಡೆಯನ್ನು, ಪ್ಯಾಲೆಸ್ತೀನ್ ನಾಗರಿಕರ ಮೇಲಿನ ಬರ್ಬರ ದಾಳಿಯ ವಿರುದ್ಧ ಪ್ರತಿಭಟಿಸುವ ಹಕ್ಕನ್ನು ನಿರಾಕರಿಸುವ ನಿಲುವನ್ನು ಸಭೆಯಲ್ಲಿ ಬಲವಾಗಿ ಖಂಡಿಸಿದ್ದರು.

ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಮಂಗಳೂರು ದಕ್ಷಿಣ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಪ್ರವೀಣ್ ಕೆ ಎಂಬುವವರು 14 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

“ಅಕ್ರಮಕೂಟ ಕಟ್ಟಿಕೊಂಡು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದ್ದು, 11 ಮಂದಿಯ ಹೆಸರನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಎಲ್ಲರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಉಲ್ಲೇಖಿಸಿದ್ದಾರೆ.

ಎಫ್‌ಐಆರ್‌ನಲ್ಲಿ ನಾಗೇಶ್ ಕೋಟ್ಯಾನ್, ವಸಂತ ಆಚಾರಿ, ಯಾಧವ ಶೆಟ್ಟಿ, ಸಂತೋಷ್ ಬಜಾಲ್, ಸುಕುಮಾರ್ ರಾವ್, ಇಮ್ತಿಯಾಜ್, ಮುನೀರ್ ಕಾಟಿಪಳ, ಸುನಿಲ್ ಕುಮಾರ್ ಬಜಾಲ್, ಯೋಗೀಶ್ ಜಪ್ಪಿನಮೊಗರು, ಹಯವದನ ರಾವ್, .ಸೀತಾರಾಮ ಬೆರಿಂಜ ಹಾಗೂ ಇತರರ ಹೆಸರನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಒಂದು ಕಡೆ ಕಾಂಗ್ರೆಸ್ ಪಕ್ಷವು ಇಸ್ರೇಲ್ ನಡೆಯನ್ನು ಖಂಡಿಸಿ, ಹೇಳಿಕೆ ನೀಡುತ್ತಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಪ್ಯಾಲೆಸ್ತೀನ್ ಪರವಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದರೆ ಎಫ್‌ಐಆರ್ ದಾಖಲಾಗುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆಯೋ ಅಥವಾ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆಯೋ ಎಂಬ ಅನುಮಾನವು ಪ್ರಗತಿಪರ ಚಿಂತಕರು ಪ್ರಶ್ನಿಸುತ್ತಿದ್ದಾರೆ. ಮಂಗಳೂರು ಪೊಲೀಸರು ಕಾಂಗ್ರೆಸ್ ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿಲ್ಲವೇ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.

ಪಾಲೆಸಿfನ್
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X