ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವೇಷ ಹರಡುವುದಕ್ಕೆ ಕುಖ್ಯಾತಿ ಪಡೆದಿರುವ ಸಂಘಪರಿವಾರದ ಮುಖಂಡ ಶರಣ್ ಪಂಪ್ವೆಲ್ ಅವರನ್ನು ಮಂಗಳೂರು ಪೊಲೀಸರು ವಶಕ್ಕೆ ತೆಗೆದುಕೊಂಡಿರುವುದಾಗಿ ವರದಿಯಾಗಿದೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮುಸ್ಲಿಂ ಪಿಕಪ್ ಚಾಲಕ ಅಬ್ದುಲ್ ರಹಮಾನ್ ಅವರನ್ನು ದುಷ್ಕರ್ಮಿಗಳ ತಂಡವು ತಲವಾರಿನಿಂದ ದಾಳಿ ನಡೆಸಿ ಹತ್ಯೆ ನಡೆಸಿದ. ಅದರ ಬೆನ್ನಲ್ಲೇ ಶರಣ್ ಪಂಪ್ ವೆಲ್ ಅವರನ್ನು ಮಂಗಳೂರು ನಗರ ಪೊಲೀಸರು ವಶಕ್ಕೆ ತೆಗೆದುಕೊಂಡಿರುವುದಾಗಿ ತಿಳಿದು ಬಂದಿದೆ.
ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿಯಾಗಿರುವ ಶರಣ್ ಪಂಪ್ವೆಲ್ ಅವರನ್ನು ಮಂಗಳೂರು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಪೊಲೀಸರು ಇನ್ನಷ್ಟೇ ಹೆಚ್ಚಿನ ಮಾಹಿತಿ ನೀಡಬೇಕಿದೆ.