ಮಂಗಳೂರು | ವೆನ್ಲಾಕ್‌ನ ಪಾರದರ್ಶಕ ವ್ಯವಸ್ಥೆಗೆ ಪೋರ್ಟಲ್: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

Date:

“ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ 176 ವರ್ಷಗಳ ಇತಿಹಾಸವಿದ್ದು, ರಾಜ್ಯಾದ್ಯಂತ ನಂಬಿಕೆ ಉಳಿಸಿಕೊಂಡಿದೆ. ಇಲ್ಲಿಯ ವಾತಾವರಣ, ಗುಣಮಟ್ಟದ ಸೇವೆ ಕಾಪಾಡುವುದು ನಮ್ಮ ಜವಾಬ್ದಾರಿ. ಈ ನಿಟ್ಟಿನಲ್ಲಿ ಪಾರದರ್ಶಕ ವ್ಯವಸ್ಥೆಗಾಗಿ ಹೊಸ ಪೋರ್ಟಲ್ ಜಾರಿಗೆ ಮಾಡಲಿದ್ದೇವೆ” ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು.

- Advertisement -

ಮಂಗಳೂರು ನಗರದ ವೆನ್ಲಾಕ್ ಮಕ್ಕಳ ಆಸ್ಪತ್ರೆ ಸಭಾಂಗಣದಲ್ಲಿ ಸೋಮವಾರ ಮಂಗಳೂರಿನ ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವೆನ್ಲಾಕ್ ಆಸ್ಪತ್ರೆಯ ಒಳರೋಗಿಗಳ ಜೊತೆಗಾರರಿಗೆ ರಾತ್ರಿಯ ಊಟ ನೀಡುವ ಕಾರುಣ್ಯ ಯೋಜನೆಯ ಏಳನೇ ಮತ್ತು ಪುತ್ತೂರಿನಲ್ಲಿ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಬಸ್‌ನಲ್ಲಿ ಕಂಪ್ಯೂಟರ್ ಶಿಕ್ಷಣ ನೀಡುವ ಕ್ಲಾಸ್ ಆನ್ ವ್ಹೀಲ್ ಯೋಜನೆಯ ಪ್ರಥಮ ವಾರ್ಷಿಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

ರಾಷ್ಟ್ರೀಯವಾದ ಹೊಟ್ಟೆ ತುಂಬಿಸುವುದಿಲ್ಲ; ಟ್ರಂಪ್‌ಗೆ ಅಮೆರಿಕನ್ನರು ಕಲಿಸಿದ ಪಾಠ...

ಬೆಲೆ ಏರಿಕೆ, ದುಬಾರಿ ಜೀವನ, ಕುಸಿಯುತ್ತಿರುವ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕ ಅನಿಶ್ಚಿತತೆ—ಇವು ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣಾ ವಿಷಯಗಳಾಗಿದ್ದವು. ಇದು ರಾಷ್ಟ್ರೀಯತೆಯ ಆವೇಶ, ಬಲಿಷ್ಠ ನಾಯಕತ್ವವೆಂಬ ಪ್ರಚಾರ ಹಾಗೂ ರಾಜಕೀಯ...

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...

ವೆನ್ಲಾಕ್ ಆಸ್ಪತ್ರೆಯ ಹೊಸ ಕಟ್ಟಡಕ್ಕೆ ಸ್ಥಳಾಂತರ ಸೇರಿದಂತೆ ಸೇವೆ ಹೆಚ್ಚಿಸುವ ನಿಟ್ಟಿನಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ಸಹಕಾರ ನೀಡುತ್ತಿದ್ದಾರೆ. ಇಲ್ಲಿಯ ರೋಗಿಗಳ ಸಹವರ್ತಿಗಳ ಹಸಿವನ್ನು ಮನಗಂಡು ಕಾರುಣ್ಯ ಯೋಜನೆ ಆರಂಭಿಸಿರುವುದು ಮತ್ತು ಸರಕಾರಿ ಶಾಲೆಗಳ ಮಕ್ಕಳೂ ಕಂಪ್ಯೂಟರ್ ಕಲಿಯಲೆಂದು ಎಂಫ್ರೆಂಡ್ಸ್ ಸೇವೆ ನೀಡುತ್ತಿರುವುದು ಎಲ್ಲರಿಗೂ ಮಾದರಿ. ಇದು ನಮ್ಮ ಜವಾಬ್ದಾರಿಯನ್ನೂ ಹೆಚ್ಚಿಸಿದೆ ಎಂದು ಅವರು ಹೇಳಿದರು.

22 2

ಎಂಫ್ರೆಂಡ್ಸ್ ಟ್ರಸ್ಟ್ ಚೇರ್‌ಮೆನ್ ಝಕರಿಯಾ ಜೋಕಟ್ಟೆ ಅಧ್ಯಕ್ಷತೆ ವಹಿಸಿ, “ನನಗೆ ಎರಡು ಸಾವಿರ ರೂ. ವೇತನ ಇದ್ದಾಗಲೂ 10 ರೂ. ದಾನ ಮಾಡುತ್ತಿದ್ದೆ. ಮಾಡಿದ ದಾನ ಎಲ್ಲೂ ಹೋಗುವುದಿಲ್ಲ. ಜನರು ಊಟ ಮಾಡಿ ತೇಗುವುದೇ ನಮಗೆ ಸಿಗುವ ಆಶೀರ್ವಾದ. ಮನಸ್ಸಾರೆ ದಾನ ಮಾಡಿದರೆ ನಮ್ಮ ಸಂಪತ್ತು ವೃದ್ಧಿಯಾಗುತ್ತದೆ ವಿನಃ ಖಾಲಿಯಾಗುವುದಿಲ್ಲ ಎನ್ನುವುದಕ್ಕೆ ನಾನೇ ಉದಾಹರಣೆ” ಎಂದರು.

ಕ್ಲಾಸ್ ಆನ್ ವ್ಹೀಲ್ ಯೋಜನೆಯ ನಿರ್ವಹಣೆಗೆ ಮಾಸಿಕ ಒಂದು ಲಕ್ಷ ರೂ. ಬೇಕಾಗುತ್ತದೆ. ದಾನಿಗಳ ನೆರವಿನಿಂದ ಅದನ್ನು ಭರಿಸಲಾಗುತ್ತದೆ. ಮುಂದೆ ಜೀವನಪೂರ್ತಿ ತಾನು ಕೊಡುಗೆ ನೀಡುವುದಾಗಿ ಝಕರಿಯಾ ಜೋಕಟ್ಟೆ ಘೋಷಿಸಿದರು. ಅದರ ಲಾಂಛನವನ್ನು ಇದೇ ವೇಳೆ ಬಿಡುಗಡೆ ಮಾಡಲಾಯಿತು.

ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕ ಡಾ.ಡಿ.ಎಸ್. ಶಿವಪ್ರಕಾಶ್, ಪ್ರೊಬೆಷನರಿ ಐಎಎಸ್ ಅಧಿಕಾರಿ ಪಿ.ಶ್ರವಣ್ ಕುಮಾರ್ ಮುಖ್ಯ ಅತಿಥಿಯಾಗಿದ್ದರು.

33 9

ಕಾರುಣ್ಯ ಯೋಜನೆಗೆ ಜನವರಿ ತಿಂಗಳ ವೆಚ್ಚ 2.25 ಲಕ್ಷ ರೂ. ದೇಣಿಗೆ ನೀಡಿದ ದುಬಾಯಿಯ ಬ್ಲೂ ರೋಯಲ್ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ರೊನಾಲ್ಡ್ ಮಾರ್ಟಿಸ್ ಮತ್ತು ಝಕರಿಯಾ ಜೋಕಟ್ಟೆ ಅವರನ್ನು ಸನ್ಮಾನಿಸಲಾಯಿತು.

ಇದನ್ನು ಓದಿದ್ದೀರಾ? ಹಳ್ಳಿಗಳನ್ನು ನಾಶ ಮಾಡಿ ಅಭಿವೃದ್ಧಿ ಸಾಧಿಸುತ್ತೇವೆ ಎನ್ನುವುದು ಮನುಷ್ಯತ್ವ ವಿರೋಧಿ: ಸಾಹಿತಿ ಎಸ್‌ ಜಿ ಸಿದ್ದರಾಮಯ್ಯ

ಕಾರುಣ್ಯ ಯೋಜನೆಯಲ್ಲಿ ಸ್ವಯಂಸೇವಕರಾಗಿ ಸೇವೆ ಸಲ್ಲಿಸುತ್ತಿರುವ ಸಿ.ಎಚ್.ಇಬ್ರಾಹೀಂ ಮತ್ತು ಮನ್ಸೂರ್ ಅವರನ್ನು ಸನ್ಮಾನಿಸಲಾಯಿತು. ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಶುಭ ಹಾರೈಸಿದರು.

ಎಂಫ್ರೆಂಡ್ಸ್ ಟ್ರಸ್ಟ್ ಅಧ್ಯಕ್ಷ ಸುಜಾಹ್ ಮುಹಮ್ಮದ್ ಸ್ವಾಗತಿಸಿದರು. ಕಾರುಣ್ಯ ಯೋಜನೆಯ ಮುಖ್ಯಸ್ಥ ಮುಹಮ್ಮದ್ ಹನೀಫ್ ಗೋಳ್ತಮಜಲು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರಿಫ್ ಪಡುಬಿದ್ರಿ ವಂದಿಸಿದರು. ಕ್ಲಾಸ್ ಆನ್ ವ್ಹೀಲ್ ಯೋಜನೆ ಮುಖ್ಯಸ್ಥ ರಶೀದ್ ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ದಲಿತರ ಮೇಲಿನ ಹಲ್ಲೆ ಖಂಡಿಸಿ ನ. 8ರಂದು ‘ತಿಡಿಗೋಳ ಚಲೋ’ ಬೈಕ್ ರ್ಯಾಲಿ

ಸಿಂಧನೂರು ತಾಲೂಕಿನ ತಿಡಿಗೋಳ ಗ್ರಾಮದಲ್ಲಿ ದಲಿತರ ಮೇಲೆ ನಡೆದ ಸಾಮೂಹಿಕ ಹಲ್ಲೆ...

ನಂಜನಗೂಡು ಕಾಡಂಚಿನಲ್ಲಿ ಹುಲಿ ಆತಂಕ: ಮೂರು ದಿನಗಳಲ್ಲಿ ಎರಡು ದಾಳಿ, ಒಬ್ಬರು ಸಾವು

ಕಾಡಂಚಿನ ಗ್ರಾಮಗಳಲ್ಲಿ ಮನುಷ್ಯರು ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ಮತ್ತೊಮ್ಮೆ ಭೀಕರ...

ಬೆಳಗಾವಿ |ಹೋರಾಟಕ್ಕೆ ಮೊದಲ ಹಂತದ ಜಯ: ತಾತ್ಕಾಲಿಕವಾಗಿ ಚಳವಳಿ ಹಿಂಪಡೆದ ರೈತರು

ಕಬ್ಬು ಬೆಳೆಗಾರರ ನಿರಂತರ ಹೋರಾಟಕ್ಕೆ ಮೊದಲ ಹಂತದ ಜಯ ದೊರೆತಿದೆ. ಪ್ರತಿ...