ಮಂಗಳೂರು | ವೆನ್ಲಾಕ್‌ನ ಪಾರದರ್ಶಕ ವ್ಯವಸ್ಥೆಗೆ ಪೋರ್ಟಲ್: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

Date:

Advertisements

“ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ 176 ವರ್ಷಗಳ ಇತಿಹಾಸವಿದ್ದು, ರಾಜ್ಯಾದ್ಯಂತ ನಂಬಿಕೆ ಉಳಿಸಿಕೊಂಡಿದೆ. ಇಲ್ಲಿಯ ವಾತಾವರಣ, ಗುಣಮಟ್ಟದ ಸೇವೆ ಕಾಪಾಡುವುದು ನಮ್ಮ ಜವಾಬ್ದಾರಿ. ಈ ನಿಟ್ಟಿನಲ್ಲಿ ಪಾರದರ್ಶಕ ವ್ಯವಸ್ಥೆಗಾಗಿ ಹೊಸ ಪೋರ್ಟಲ್ ಜಾರಿಗೆ ಮಾಡಲಿದ್ದೇವೆ” ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು.

ಮಂಗಳೂರು ನಗರದ ವೆನ್ಲಾಕ್ ಮಕ್ಕಳ ಆಸ್ಪತ್ರೆ ಸಭಾಂಗಣದಲ್ಲಿ ಸೋಮವಾರ ಮಂಗಳೂರಿನ ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವೆನ್ಲಾಕ್ ಆಸ್ಪತ್ರೆಯ ಒಳರೋಗಿಗಳ ಜೊತೆಗಾರರಿಗೆ ರಾತ್ರಿಯ ಊಟ ನೀಡುವ ಕಾರುಣ್ಯ ಯೋಜನೆಯ ಏಳನೇ ಮತ್ತು ಪುತ್ತೂರಿನಲ್ಲಿ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಬಸ್‌ನಲ್ಲಿ ಕಂಪ್ಯೂಟರ್ ಶಿಕ್ಷಣ ನೀಡುವ ಕ್ಲಾಸ್ ಆನ್ ವ್ಹೀಲ್ ಯೋಜನೆಯ ಪ್ರಥಮ ವಾರ್ಷಿಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ವೆನ್ಲಾಕ್ ಆಸ್ಪತ್ರೆಯ ಹೊಸ ಕಟ್ಟಡಕ್ಕೆ ಸ್ಥಳಾಂತರ ಸೇರಿದಂತೆ ಸೇವೆ ಹೆಚ್ಚಿಸುವ ನಿಟ್ಟಿನಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ಸಹಕಾರ ನೀಡುತ್ತಿದ್ದಾರೆ. ಇಲ್ಲಿಯ ರೋಗಿಗಳ ಸಹವರ್ತಿಗಳ ಹಸಿವನ್ನು ಮನಗಂಡು ಕಾರುಣ್ಯ ಯೋಜನೆ ಆರಂಭಿಸಿರುವುದು ಮತ್ತು ಸರಕಾರಿ ಶಾಲೆಗಳ ಮಕ್ಕಳೂ ಕಂಪ್ಯೂಟರ್ ಕಲಿಯಲೆಂದು ಎಂಫ್ರೆಂಡ್ಸ್ ಸೇವೆ ನೀಡುತ್ತಿರುವುದು ಎಲ್ಲರಿಗೂ ಮಾದರಿ. ಇದು ನಮ್ಮ ಜವಾಬ್ದಾರಿಯನ್ನೂ ಹೆಚ್ಚಿಸಿದೆ ಎಂದು ಅವರು ಹೇಳಿದರು.

Advertisements
22 2

ಎಂಫ್ರೆಂಡ್ಸ್ ಟ್ರಸ್ಟ್ ಚೇರ್‌ಮೆನ್ ಝಕರಿಯಾ ಜೋಕಟ್ಟೆ ಅಧ್ಯಕ್ಷತೆ ವಹಿಸಿ, “ನನಗೆ ಎರಡು ಸಾವಿರ ರೂ. ವೇತನ ಇದ್ದಾಗಲೂ 10 ರೂ. ದಾನ ಮಾಡುತ್ತಿದ್ದೆ. ಮಾಡಿದ ದಾನ ಎಲ್ಲೂ ಹೋಗುವುದಿಲ್ಲ. ಜನರು ಊಟ ಮಾಡಿ ತೇಗುವುದೇ ನಮಗೆ ಸಿಗುವ ಆಶೀರ್ವಾದ. ಮನಸ್ಸಾರೆ ದಾನ ಮಾಡಿದರೆ ನಮ್ಮ ಸಂಪತ್ತು ವೃದ್ಧಿಯಾಗುತ್ತದೆ ವಿನಃ ಖಾಲಿಯಾಗುವುದಿಲ್ಲ ಎನ್ನುವುದಕ್ಕೆ ನಾನೇ ಉದಾಹರಣೆ” ಎಂದರು.

ಕ್ಲಾಸ್ ಆನ್ ವ್ಹೀಲ್ ಯೋಜನೆಯ ನಿರ್ವಹಣೆಗೆ ಮಾಸಿಕ ಒಂದು ಲಕ್ಷ ರೂ. ಬೇಕಾಗುತ್ತದೆ. ದಾನಿಗಳ ನೆರವಿನಿಂದ ಅದನ್ನು ಭರಿಸಲಾಗುತ್ತದೆ. ಮುಂದೆ ಜೀವನಪೂರ್ತಿ ತಾನು ಕೊಡುಗೆ ನೀಡುವುದಾಗಿ ಝಕರಿಯಾ ಜೋಕಟ್ಟೆ ಘೋಷಿಸಿದರು. ಅದರ ಲಾಂಛನವನ್ನು ಇದೇ ವೇಳೆ ಬಿಡುಗಡೆ ಮಾಡಲಾಯಿತು.

ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕ ಡಾ.ಡಿ.ಎಸ್. ಶಿವಪ್ರಕಾಶ್, ಪ್ರೊಬೆಷನರಿ ಐಎಎಸ್ ಅಧಿಕಾರಿ ಪಿ.ಶ್ರವಣ್ ಕುಮಾರ್ ಮುಖ್ಯ ಅತಿಥಿಯಾಗಿದ್ದರು.

33 9

ಕಾರುಣ್ಯ ಯೋಜನೆಗೆ ಜನವರಿ ತಿಂಗಳ ವೆಚ್ಚ 2.25 ಲಕ್ಷ ರೂ. ದೇಣಿಗೆ ನೀಡಿದ ದುಬಾಯಿಯ ಬ್ಲೂ ರೋಯಲ್ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ರೊನಾಲ್ಡ್ ಮಾರ್ಟಿಸ್ ಮತ್ತು ಝಕರಿಯಾ ಜೋಕಟ್ಟೆ ಅವರನ್ನು ಸನ್ಮಾನಿಸಲಾಯಿತು.

ಇದನ್ನು ಓದಿದ್ದೀರಾ? ಹಳ್ಳಿಗಳನ್ನು ನಾಶ ಮಾಡಿ ಅಭಿವೃದ್ಧಿ ಸಾಧಿಸುತ್ತೇವೆ ಎನ್ನುವುದು ಮನುಷ್ಯತ್ವ ವಿರೋಧಿ: ಸಾಹಿತಿ ಎಸ್‌ ಜಿ ಸಿದ್ದರಾಮಯ್ಯ

ಕಾರುಣ್ಯ ಯೋಜನೆಯಲ್ಲಿ ಸ್ವಯಂಸೇವಕರಾಗಿ ಸೇವೆ ಸಲ್ಲಿಸುತ್ತಿರುವ ಸಿ.ಎಚ್.ಇಬ್ರಾಹೀಂ ಮತ್ತು ಮನ್ಸೂರ್ ಅವರನ್ನು ಸನ್ಮಾನಿಸಲಾಯಿತು. ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಶುಭ ಹಾರೈಸಿದರು.

ಎಂಫ್ರೆಂಡ್ಸ್ ಟ್ರಸ್ಟ್ ಅಧ್ಯಕ್ಷ ಸುಜಾಹ್ ಮುಹಮ್ಮದ್ ಸ್ವಾಗತಿಸಿದರು. ಕಾರುಣ್ಯ ಯೋಜನೆಯ ಮುಖ್ಯಸ್ಥ ಮುಹಮ್ಮದ್ ಹನೀಫ್ ಗೋಳ್ತಮಜಲು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರಿಫ್ ಪಡುಬಿದ್ರಿ ವಂದಿಸಿದರು. ಕ್ಲಾಸ್ ಆನ್ ವ್ಹೀಲ್ ಯೋಜನೆ ಮುಖ್ಯಸ್ಥ ರಶೀದ್ ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

Download Eedina App Android / iOS

X