ಮಂಗಳೂರು | ಜ.14ರಂದು ರಸ ಬೈ ರಾಗ ಸಂಗೀತ ಕಚೇರಿ

Date:

ಮಂಗಳೂರಿನ ಸ್ವರಾಲಯ ಸಾಧನಾ ಫೌಂಡೇಶನ್ ವತಿಯಿಂದ ಸಂಕ್ರಾಂತಿ ಹಬ್ಬದ ವಿಶೇಷವಾಗಿ ಸ್ವರ ಸಂಕ್ರಾಂತಿ ಉತ್ಸವದಲ್ಲಿ ಖ್ಯಾತ ಕಲಾವಿದರಾದ ರಂಜನಿ ಗಾಯತ್ರಿ ಅವರ ರಸ ಬೈ ರಾಗ' ಸಂಗೀತ ಕಛೇರಿ ಹಾಗೂಸ್ವರ ಸಾಧನಾ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜ.14ರಂದು ನಡೆಯಲಿದೆ.

- Advertisement -

ಮಧ್ಯಾಹ್ನ 2 ಗಂಟೆಯಿಂದ ಕಲಾ ಶಾಲೆ ವಿದ್ಯಾರ್ಥಿಗಳಿಂದ ವಯಲಿನ್ ಪ್ರಸ್ತುತಿ ನಡೆಯಲಿದ್ದು, ಮಧ್ಯಾಹ್ನ 3.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭ ಮೂವರು ಹಿರಿಯ ಸಾಧಕರಿಗೆ `ಸ್ವರ ಸಾಧನಾ 25′ ಪ್ರಶಸ್ತಿ ಪ್ರದಾನ ನಡೆಯಲಿದೆ. ನಿಡಸೋಸಿ ಶ್ರೀ ದುರದುಂದೀಶ್ವರ ಮಠದ ಜಗದ್ಗುರು ಶ್ರೀ ನಿಜಲಿಂಗೇಶ್ವರ ಸ್ವಾಮೀಜಿ ಹಾಗೂ ಬಾಳೆಕುದ್ರು ಮಠದ ಶ್ರೀಮದ್ ಜಗದ್ಗುರು ಶ್ರೀ ವಾಸುದೇವ ಸದಾಶಿವಾಶ್ರಮ ಮಹಾಸ್ವಾಮಿ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಹಾಗೂ ಸ್ವರ ರತ್ನ ವಿದ್ವಾನ್ ವಿಠಲ್ ರಾಮಮೂರ್ತಿ ಭಾಗವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೇವಾ: ಸಂಗೀತ ಲೋಕದ ‘ತೇನಿಸೈ ತೆಂಡ್ರಲ್’

ಅಪಾರ ಶ್ರಮ, ನಿರಂತರ ಅಧ್ಯಯನ ಹಾಗೂ ಸತತ ಪ್ರಯತ್ನಗಳಿಂದ ಸಂಗೀತ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ ನೀಡಿ, ಭಾರಿ ಜನಪ್ರಿಯತೆ ಗಳಿಸಿದರೂ ಸದಾ ವಿನಯ ಮತ್ತು ಸರಳತೆ ದೇವಾ ಅವರಲ್ಲಿ ಎದ್ದು ಕಾಣುತ್ತಿತ್ತು. ಇಂತಹ...

ಜಿರಳೆ ಪ್ರತಿಕೃತಿ ದಹನದ ನೆಪದಲ್ಲಿ ಯುವ ದನಿಯನ್ನು ಹತ್ತಿಕ್ಕುವ...

ದೆಹಲಿಯ ಪೀತಾಂಪುರದಲ್ಲಿ ಮಂಗಳವಾರ ನಡೆದ ದಸರಾ ಆಚರಣೆಯು ಈ ಬಾರಿ ಧಾರ್ಮಿಕ ಶ್ರದ್ಧೆಗಿಂತ ಹೆಚ್ಚಾಗಿ ಆಡಳಿತಾರೂಢ ಬಿಜೆಪಿ ಸರ್ಕಾರದ ಅಹಂಕಾರ ಮತ್ತು ಯುವಜನ ವಿರೋಧಿ ಮನಸ್ಥಿತಿಯ ನೇರ ಪ್ರದರ್ಶನವಾಗಿ ಮಾರ್ಪಟ್ಟಿತು. ರಾವಣ, ಕುಂಭಕರ್ಣ...

ಪಶ್ಚಿಮ ಪದವೀಧರರ ಕ್ಷೇತ್ರ: ಭದ್ರಕೋಟೆ ಮರುಹಿಡಿಯಲು ಕಾಂಗ್ರೆಸ್ ಯತ್ನ;...

ಪಶ್ಚಿಮ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣಾ ಕಾವು ಗರಿಗೆದರಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳ ನಡುವೆ ಜಿದ್ದಾಜಿದ್ದಿಗೆ ವೇದಿಕೆ ಸಜ್ಜಾಗಿದೆ. ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಪಶ್ಚಿಮ ಪದವೀಧರರ ಕ್ಷೇತ್ರವೀಗ ಬಿಜೆಪಿಯ...

ಪ್ರಸಿದ್ಧ ಮೃದಂಗ ವಾದಕ ನೈಬಿ ಪ್ರಭಾಕರ ಶೃಂಗೇರಿ ಮತ್ತು ಸಂಗೀತ ಕ್ಷೇತ್ರದ ಸಾಧಕಿ ಸಾವಿತ್ರಿ ಪ್ರಭಾರ್ಕಯ ದಂಪತಿ, ಭರತನಾಟ್ಯ ಕ್ಷೇತ್ರದ ಸಾಧಕಿ, ಮಂಗಳೂರಿನ ಸನಾತನ ನಾಟ್ಯಾಲಯದ ನೃತ್ಯಗುರು ಶಾರದಾ ಮಣಿಶೇಖರ್ ಹಾಗೂ ಮೃದಂಗದ ಸಾಧಕರಾದ ವಿದ್ವಾನ್ ಕುಂಜೂರು ಎಚ್.ರವಿಕುಮಾರ್ ಅವರಿಗೆ ಸ್ವರ ಸಾಧನಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.

ಸಂಜೆ 5 ಗಂಟೆಯಿಂದ `ರಸ ಬೈ ರಾಗ’ ಕಚೇರಿ ನಡೆಯಲಿದ್ದು, ವಯೊಲಿನ್‌ನಲ್ಲಿ ವಿದ್ವಾನ್ ವಿಠ್ಠಲ್ ರಂಗಲ್, ಮೃದಂಗದಲ್ಲಿ ವಿದ್ವಾನ್ ಸಾಯಿ ಗಿರಿಧರ್, ಘಟಂನಲ್ಲಿ ವಿದ್ವಾನ್ ಎಸ್.ಕೃಷ್ಣ ಸಹಕರಿಸಲಿದ್ದಾರೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.23ರಂದು ‘ಊರೂರೂ ಜಂತರ್ ಮಂತರ್’ ಉಡುಪಿಯಲ್ಲೂ ಪ್ರತಿಭಟನೆ ಮತ್ತು ಜಾಥಾ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಮತದಾರರ...

ಉಡುಪಿಯಲ್ಲಿ ನವೀಕೃತ ಆಭರಣ ಜ್ಯುವೆಲ್ಲರ್ಸ್ ಮಳಿಗೆ ಅ. 21ರಂದು ಪುನರಾರಂಭ

ಉಡುಪಿ ನಗರದ ಸಿಬಿ ರಸ್ತೆಯಲ್ಲಿರುವ ಆಭರಣ ಜ್ಯುವೆಲ್ಲರ್ಸ್‌ನ ಮೂಲ ಮಳಿಗೆಯನ್ನು ಆಧುನಿಕ...

ಉಡುಪಿ | ಉಚ್ಚಿಲ ದಸರಾ ಶೋಭಾಯಾತ್ರೆ: ಅ. 21ರಂದು ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಉಡುಪಿ-ಉಚ್ಚಿಲ ದಸರಾ 2026ರ ಅಂಗವಾಗಿ...

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...