ಇಡಿ ಅಧಿಕಾರಿಗಳ ಸೋಗಿನಲ್ಲಿ ಮಂಗಳೂರಿನ ವಿಟ್ಲ ಬೋಳಂತೂರಿನ ಉದ್ಯಮಿಯೊಬ್ಬರ ಮನೆಯಲ್ಲಿ ಲಕ್ಷಾಂತರ ಹಣ ದೋಚಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೇರಳದ ಕೊಲ್ಲಂ ಜಿಲ್ಲೆಯ ನಿವಾಸಿ ಅನಿಲ್ ಫರ್ನಾಂಡಿಸ್ (49) ಬಂಧಿತ ಆರೋಪಿ.
ಅಂತರಾಜ್ಯ ದರೋಡೆಕೋರ ಅನಿಲ್‌ನಿಂದ ಸುಮಾರು ₹5 ಲಕ್ಷ ನಗದು, ಕೃತ್ಯಕ್ಕೆ ಬಳಸಿದ್ದ ಎರ್ಟಿಗಾ ಕಾರು, ನಕಲಿ ನಂಬರ್ ಪ್ಲೇಟ್‌ನ್ನು ವಶಕ್ಕೆ ಪಡೆಯಲಾಗಿದೆ.
ಈ ಸುದ್ದಿ ಓದಿದ್ದೀರಾ?:ಮಂಗಳೂರು | ಬ್ಯಾಂಕ್ ದರೋಡೆ ಪ್ರಕರಣ: ತಪ್ಪಿಸಿಕೊಳ್ಳಲೆತ್ನಿಸಿದ ಆರೋಪಿಗೆ ಪೊಲೀಸರಿಂದ ಗುಂಡೇಟು
ಜನವರಿ 03 ರಂದು ರಾತ್ರಿ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶ ಎಂಬಲ್ಲಿ ಉದ್ಯಮಿಯೊಬ್ಬರ ಮನೆಗೆ 6 ಜನ ಅಪರಿಚಿತರು ನುಗ್ಗಿ, ಮನೆಯ ಶೋಧ ನಡೆಸಿ, ಸುಮಾರು 30 ಲಕ್ಷ ನಗದನ್ನು ದೋಚಿ ಪರಾರಿಯಾಗಿದ್ದರು. ಘಟನೆ ಕುರಿತು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಆರೋಪಿಗಳ ಪತ್ತೆಗಾಗಿ ನಾಲ್ಕು ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ಇದೀಗ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದ್ದು, ಉಳಿದ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
