ಮಂಗಳೂರು | ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಮತ್ತೆ ಮೂವರು ಆರೋಪಿಗಳ ಬಂಧನ

Date:

Advertisements

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿಮ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ ಮೇ 1ರಂದು ನಡೆದಿದ್ದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಅಜರುದ್ದೀನ್ ಅಲಿಯಾಸ್ ಅಜರ್ ಅಜ್ಜು, ಅಬ್ದುಲ್ ಖಾದರ್ ಅಲಿಯಾಸ್ ನೌಫಲ್ (24) ಹಾಗೂ ವಾಮಂಜೂರು ನೌಷಾದ್ ಅಲಿಯಾಸ್ ಚೊಟ್ಟೆ ನೌಷದ್ ಎಂದು ಗುರುತಿಸಲಾಗಿದೆ. ಇದರೊಂದಿಗೆ ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಈ ಹಿಂದೆ ಪೊಲೀಸರು ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದರು.

ಪೊಲೀಸರ ಪ್ರಕಾರ, ಆರೋಪಿ ಅಜರುದ್ದೀನ್ ಕೊಲೆಯಾದ ಸುಹಾಸ್ ಶೆಟ್ಟಿಯ ಚಲನವಲನಗಳ ಬಗ್ಗೆ ಮಾಹಿತಿಯನ್ನು ನೀಡಿ ಕೃತ್ಯಕ್ಕೆ ಸಹಕರಿಸಿದ್ದಾನೆ. ಈತನ ವಿರುದ್ಧ ಈ ಹಿಂದೆ ಮೂರು ಕಳವು ಪ್ರಕರಣಗಳು ದಾಖಲಾಗಿವೆ. ಮತ್ತೋರ್ವ ಆರೋಪಿ ಅಬ್ದುಲ್ ಖಾದರ್ ಕೊಲೆ ನಡೆದ ನಂತರ ಆರೋಪಿಗಳು ಪರಾರಿಯಾಗಲು ಸಹಾಯ ಮಾಡಿದ್ದನು.

Advertisements

ಪ್ರಮುಖ ಆರೋಪಿಯಾದ ನೌಷದ್ ಸುಹಾಸ್ ಶೆಟ್ಟಿಯ ಕೊಲೆಗೆ ಸಂಚು ರೂಪಿಸಿ ಕೊಲೆ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದನು. ಈತನ ವಿರುದ್ಧ ಕೊಲೆ, ಕೊಲೆ ಯತ್ನ, ದರೋಡೆಗೆ ಸಂಚು ಸೇರಿದಂತೆ ಆರು ಪ್ರಕರಣಗಳು ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅಜರುದ್ದೀನ್‌ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಉಳಿದ ಇಬ್ಬರು ಆರೋಪಿಗಳಾದ ಅಬ್ದುಲ್ ಖಾದರ್ ಮತ್ತು ನೌಷದ್‌ನನ್ನು ಹೆಚ್ಚಿನ ವಿಚಾರಣೆಗಾಗಿ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.

ಈ ಕೊಲೆ ಪ್ರಕರಣದ ತನಿಖೆ ಇನ್ನೂ ಮುಂದುವರಿದಿದ್ದು, ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪತ್ತೆ ಕಾರ್ಯವನ್ನು ಮುಂದುವರಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X