ಮಂಗಳೂರು | ಫುಟ್ಬಾಲ್ ಕ್ರೀಡಾಂಗಣಕ್ಕೆ ಪೂರಕ ಸೌಲಭ್ಯಕ್ಕೆ ರೂ.75 ಲಕ್ಷ: ಶಾಸಕ ಕಾಮತ್

Date:

Advertisements

ಮಂಗಳೂರು ನಗರದ ನೆಹರು ಮೈದಾನದ ಫುಟ್‍ಬಾಲ್ ಕ್ರೀಡಾಂಗಣಕ್ಕೆ ಪೂರಕ ಸೌಲಭ್ಯಗಳನ್ನು ಒದಗಿಸಲು ರೂ.75 ಲಕ್ಷ ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ ಎಂದು ಮಂಗಳೂರು ಶಾಸಕ ಡಿ. ವೇದವ್ಯಾಸ್ ಕಾಮತ್ ಹೇಳಿದ್ದಾರೆ.

ಅವರು ಸೋಮವಾರ ಸ್ವಾತಂತ್ರ್ಯೋತ್ಸವದ ಅಂಗವಾಗಿ ನಡೆಯುತ್ತಿರುವ ಶಾಲಾ-ಕಾಲೇಜು ಮಟ್ಟದ 27ನೇ ಇಂಡಿಪೆಂಡೆನ್ಸ್ ಕಪ್ ಫುಟ್‍ಬಾಲ್ ಪಂದ್ಯಾಟವನ್ನು ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಉದ್ಘಾಟಿಸಿ ಮಾತನಾಡಿದರು.

ಇದನ್ನೂ ಓದಿ: ಮಂಗಳೂರು | ಇಂದು ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರ; ಬಂದ್ ಯಶಸ್ವಿಗೊಳಿಸಲು ಸಂಘಟನೆ ಕರೆ

Advertisements

ಸ್ಮಾರ್ಟ್‍ಸಿಟಿ ಯೋಜನೆಯಲ್ಲಿ ಈಗಾಗಲೇ ಫುಟ್‍ಬಾಲ್ ಕ್ರೀಡಾಂಗಣಕ್ಕೆ ಟರ್ಫ್ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಕ್ರೀಡಾಪಟುಗಳ ಬಳಕೆಗೆ ಲಭ್ಯವಾಗಲಿದೆ.  ಕ್ರೀಡಾಂಗಣಕ್ಕೆ ಪೆವಿಲಿಯನ್, ಶೌಚಾಲಯ ಸೇರಿದಂತೆ ಇನ್ನಿತರ ಪೂರಕ ಸೌಲಭ್ಯಗಳನ್ನು ಒದಗಿಸಲು ಯುವಜನ ಮತ್ತು ಕ್ರೀಡಾ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚಿಸಿದ್ದು, ಅನುದಾನ ಒದಗಿಸುವ ಭರವಸೆ ನೀಡಿದ್ದಾರೆ ಎಂದರು. ಮಂಗಳೂರಿನ ಫುಟ್‍ಬಾಲ್ ಪ್ರಿಯರ ಬಹುಕಾಲದ ಕನಸಾಗಿದ್ದ ಟರ್ಫ್ ಕೋರ್ಟ್ ನಿರ್ಮಾಣ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕೈಗೆತ್ತಿಕೊಳ್ಳಲಾಗಿದೆ.

ಇದನ್ನೂ ಓದಿ: ಮಂಗಳೂರು | ಕಾಣಿಕೆ ಹುಂಡಿಯಿಂದ ಹಣ ಕಳವು: ಮೂವರ ಬಂಧನ

ಇದರಿಂದ ಅಂತರಾಷ್ಟ್ರೀಯ ಮಟ್ಟದ ಸೌಲಭ್ಯ ಕ್ರೀಡಾಪಟುಗಳಿಗೆ ದೊರಕಲಿದೆ ಎಂದು ಹೇಳಿದರು. ಸಮಾರಂಭದಲ್ಲಿ ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಗೋಪಿನಾಥ್, ಅನಿವಾಸಿ ಉದ್ಯಮಿ ಝಕರಿಯಾ ಬಜ್ಪೆ ಮಾತನಾಡಿದರು.  ಸ್ಮಾರ್ಟ್‍ಸಿಟಿ ಜನರಲ್ ಮ್ಯಾನೇಜರ್ ಅರುಣ್ ಪ್ರಭಾ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಅಧಿಕಾರಿ ಪ್ರದೀಪ್ ಡಿಸೋಜಾ, ಜಿಲ್ಲಾ ವಾರ್ತಾಧಿಕಾರಿ ಬಿ. ಎ ಖಾದರ್ ಶಾ, ಮಾಜಿ ಕಾರ್ಪೊರೇಟರ್ ಅಬ್ದುಲ್ ಲತೀಫ್, ಹಿರಿಯ ಫುಟ್‍ಬಾಲ್ ಆಟಗಾರ ಲಕ್ಷ್ಮಣ್ ಬೆಂಗ್ರೆ, ಫುಟ್‍ಬಾಲ್ ಅಸೋಸಿಯೇಷನ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X