ಮಂಗಳೂರು | ಅಸ್ಪೃಶ್ಯತೆ, ಅಸಮಾನತೆ ಜೀವಂತವಾಗಿರಿಸಿರುವುದೇ ಆರ್‌ಎಸ್‌ಎಸ್‌ ಸಾಧನೆ: ಯೋಗೇಶ್ ಜಪ್ಪಿನಮೊಗರು

Date:

Advertisements

ಅಸ್ಪೃಶ್ಯತೆ, ಅಸಮಾನತೆ ಜೀವಂತವಾಗಿರಿಸಿರುವುದೇ ಆರ್‌ಎಸ್‌ಎಸ್‌ನ 100 ವರ್ಷದ ಸಾಧನೆ ಎಂದು ದಲಿತ ಹಕ್ಕುಗಳ ಸಮಿತಿಯ ಮಾರ್ಗದರ್ಶಕರಾದ ಯೋಗೇಶ್ ಜಪ್ಪಿನಮೊಗರು ಅಭಿಪ್ರಾಯಿಸಿದರು.

ಮಂಗಳೂರು ನಗರದ ತಣ್ಣೀರುಬಾವಿಯಲ್ಲಿ ನಡೆದ ದಲಿತ ಚೈತನ್ಯ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಇಡೀ ದೇಶದಲ್ಲಿ ದಲಿತ ಸಮುದಾಯದ ವಿರುದ್ಧ ಸವರ್ಣೀಯರನ್ನು ಎತ್ತಿ ಕಟ್ಟಿರುವುದು ಸಂಘ ಪರಿವಾರದ ಹಿಡನ್ ಅಜೆಂಡಾದ ಭಾಗವಾಗಿದೆ. ದಲಿತರನ್ನು ಶೈಕ್ಷಣಿಕವಾಗಿ ಆರ್ಥಿಕವಾಗಿ ಮಾತ್ರವಲ್ಲದೆ ರಾಜಕೀಯವಾಗಿಯೂ ಮುಗಿಸುವ ಎಲ್ಲ ಪ್ರಯತ್ನಗಳನ್ನು ಆರ್ ಎಸ್ ಎಸ್ ಸ್ವಾತಂತ್ರ್ಯ ಪೂರ್ವದಿಂದಲೇ ಮಾಡಿಕೊಂಡು ಬಂದಿದೆ” ಎಂದು ತಿಳಿಸಿದರು.

“ಡಾ. ಬಿ ಆರ್ ಅಂಬೇಡ್ಕರ್ ಅವರನ್ನು ಹಾಗೂ ಸಂವಿಧಾನದ ದ್ವೇಷಿಯಾಗಿರುವ ಸಂಘಪರಿವಾರ ಇದ್ದಕ್ಕಿದ್ದಂತೆ ಸಂವಿಧಾನವನ್ನು ಅಪ್ಪಿಕೊಳ್ಳುವ ಸಂವಿಧಾನ್ ಸನ್ಮಾನ್ ಕಾರ್ಯಕ್ರಮದ ಮೂಲಕ ನಾಟಕವಾಡುತ್ತಿದ್ದಾರೆ. ಪ್ರಸ್ತುತ ದಲಿತ ಸಮುದಾಯವು ಸುಶಿಕ್ಷಿತರಾಗಿ ಜಾಗ್ರತಗೊಳ್ಳುತ್ತಿದ್ದು ಸಂಘ ಪರಿವಾರದ ದುರುದ್ದೇಶಗಳು ಹಾಗೂ ಮುಖವಾಡಗಳು ಕಳಚಿ ಬೀಳುತ್ತಿದೆ ಎಂದು ದಲಿತ ಹಕ್ಕುಗಳ ಸಮಿತಿಯ ಮಾರ್ಗದರ್ಶಕ ಯೋಗೇಶ್ ಜಪ್ಪಿನಮೊಗರು ತಿಳಿಸಿದರು.

Advertisements

ಮುಂದುವರೆದು ಮಾತನಾಡಿದ ಅವರು, ಲೋಕಸಭಾ ಚುನಾವಣಾ ಸಂದರ್ಭದಲ್ಲಿ 400 ಸೀಟುಗಳನ್ನು ಗೆಲ್ಲುವುದಾಗಿಯೂ ಸಂವಿಧಾನವನ್ನು ಬದಲಿಸುವುದಾಗಿಯೂ ಹೇಳಿರುವ ಬಿಜೆಪಿ ಈಗ ಸಂವಿಧಾನ ಸನ್ಮಾನ್ ಕಾರ್ಯಕ್ರಮವನ್ನು ನವೆಂಬರ್ 26ರಿಂದ ಜನವರಿ 26ರವರೆಗೆ ರೂಪಿಸಿರುವುದು ಸಂಘ ಪರಿವಾರದ ದುಷ್ಟ ಆಲೋಚನೆಯ ಭಾಗವಾಗಿದೆ. ದಲಿತ ವರ್ಗವನ್ನು ಮನುಷ್ಯರನ್ನಾಗಿ ಕಾಣದ ಸಂಘ ಪರಿವಾರ ಸಂವಿಧಾನದೊಳಗೆ ಮನುಸ್ಮೃತಿಯನ್ನು ತುರುಕಿಸುವ ಕೆಲಸವನ್ನು ಮಾಡುವುದಕ್ಕಾಗಿಯೇ ಸಂವಿಧಾನ ಸನ್ಮಾನ ಕಾರ್ಯಕ್ರಮ ಮಾಡುತ್ತಿದೆ ಎಂದರು.

ಶಿಭಿರಾರ್ಥಿಗಳನ್ನು ಉದ್ದೇಶಿಸಿ ಡಿ ಎಚ್ ಎಸ್ ನ ಜಿಲ್ಲಾ ಸಮಿತಿ ಕಾರ್ಯದರ್ಶಿ ಕೃಷ್ಣತಣ್ಣೀರುಬಾವಿ ಮಾತನಾಡುತ್ತಾ, ಅಂಬೇಡ್ಕರ್ ಅವರ ಚಿಂತನೆಗಳು ಮಾತ್ರವೇ ದಲಿತರನ್ನು ಮತ್ತು ಶೋಷಿತ ವಿಭಾಗವನ್ನು ಬಂಧಮುಕ್ತಗೊಳಿಸಲಿದೆ. ಆದ್ದರಿಂದ ಎಲ್ಲರೂ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ಕೊಡುವ ಅವಶ್ಯಕತೆ ಇದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಡಿ ಎಚ್ ಎಸ್ ನ ಜಿಲ್ಲಾ ಮುಖಂಡರಾದ ರಾಧಾಕೃಷ್ಣ ಬೊಂಡಂತಿಲ, ಚಂದ್ರಶೇಖರ್ ಕಿನ್ಯಾ, ಮನೋಜ್, ಸುಧಾಕರ್ ರವರು ಉಪಸ್ಥಿತರಿದ್ದರು.

ಇದನ್ನು ಓದಿದ್ದೀರಾ? ತಿರುಮಲ ದೇವಾಲಯ ಪ್ರವೇಶಿಸಿದ ದಲಿತರು; ಅಧಿಕಾರಿಗಳ ಸಮ್ಮುಖದಲ್ಲಿ ಮುಕ್ತ ಅವಕಾಶಕ್ಕೆ ಒಪ್ಪಿದ ಗ್ರಾಮಸ್ಥರು

ಬೇಬಿ ತಣ್ಣೀರುಬಾವಿ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದರು. ಸುನೀತಾ ಕೃಷ್ಣರವರು ಕಾರ್ಯದರ್ಶಿಯಾಗಿಯೂ ಸುನಿಲ್ ರವರು ಖಜಾಂಚಿಯಾಗಿಯೂ ಆಯ್ಕೆ ಮಾಡಲಾಯಿತು. 9 ಜನರ ಪದಾಧಿಕಾರಿಗಳು ಸೇರಿದಂತೆ ಒಟ್ಟು 17 ಜನರ ಸಮಿತಿಯನ್ನು ಈ ಸಂದರ್ಭದಲ್ಲಿ ರಚಿಸಲಾಯಿತು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X