ಮಂಗಳೂರು | ಬಂಜಾರ ಸಮುದಾಯ ಸಂಘಟನೆಯಲ್ಲಿ ಸಂತ ಸೇವಾಲಾಲ್ ಪಾತ್ರ ಅಪಾರ: ಉಳ್ಳಾಲ್

Date:

Advertisements

ಬಂಜಾರ (ಲಂಬಾಣಿ) ಸಮುದಾಯದ ಸಂಘಟನೆಯಲ್ಲಿ ಸಂತ ಸೇವಾಲಾಲರ ಪಾತ್ರ ಅಪಾರವಾದದ್ದು. ಲಂಬಾಣಿ ಸಮಾಜಕ್ಕೆ ಸವಲತ್ತುಗಳನ್ನು ಒದಗಿಸುವಲ್ಲಿ ಅವರು ನೀಡಿದ ಕೊಡುಗೆ ಅಪಾರ ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್‌ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕರಾವಳಿ ಶ್ರೀ ಸೇವಾಲಾಲ್ ಬಂಜಾರ ಸಂಘದ ಸಹಕಾರದೊಂದಿಗೆ ನಿನ್ನೆ ನಡೆದ ಶ್ರೀ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಉತ್ತಮ ಸಮಾಜದ ನಿರ್ಮಾಣದಲ್ಲಿ ಹಾಗೂ ಸಮುದಾಯವನ್ನು ಗುರುತಿಸುವಲ್ಲಿ ಸೇವಾಲಾಲರ ಕೊಡುಗೆ ಅಪಾರವಾದದ್ದು. ಅವರ ಆಶಯದಂತೆ ಪ್ರತಿಯೊಬ್ಬರೂ ಸಂಘಟಿತರಾದರೆ ಮಾತ್ರ ಸಮುದಾಯ ಇನ್ನಷ್ಟು ಬಲಿಷ್ಠಗೊಳ್ಳುತ್ತದೆ” ಎಂದು ಅಭಿಪ್ರಾಯಪಟ್ಟರು.

ವಿಶೇಷ ಉಪನ್ಯಾಸ ನೀಡಿದ ಪೆರ್ಮುದೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಮೇಶ್ ರಾಥೋಡ್, “ಈ ನಾಡಿನಲ್ಲಿ ತನ್ನದೇ ಆದಂತಹ ಒಂದು ಸಂಸ್ಕೃತಿ ಪರಂಪರೆಯನ್ನು ಮುಂದುವರಿಸಿಕೊಂಡು ಬಂದ ಸಮುದಾಯಗಳಲ್ಲಿ ಬಂಜಾರ ಸಮುದಾಯವೂ ಕೂಡ ಒಂದು. ಬಂಜಾರ ಸಮುದಾಯಕ್ಕೆ ಸೇವಾಲಾಲ್ ಮಹತ್ತರ ಕೊಡುಗೆ ನೀಡಿದ್ದಾರೆ. ಸಮಾಜ ಸುಧಾರಕ ಶಕ್ತಿಪುರುಷ ಸಂತ ಸೇವಾಲಾಲ್ ಬಡವರ ಸೇವೆಗಾಗಿ ಶ್ರಮಿಸಿ, ಮೂಢನಂಬಿಕೆ ಕೆಟ್ಟ ವಿಚಾರಗಳ ವಿರುದ್ಧ ಧ್ವನಿ ಎತ್ತಿದವರು. ಬಂಜಾರ ಸಮುದಾಯದ ಶ್ರೇಯಸ್ಸಿಗಾಗಿ ಅಸ್ಪೃಶ್ಯತೆ, ಜಾತಿ ಪದ್ಧತಿ ವಿರುದ್ಧ ಹೋರಾಟ ಮಾಡಿದ್ದರು. ಬಂಜಾರ ಸಮುದಾಯಕ್ಕೆ ಶಿಕ್ಷಣದ ಮಹತ್ವವನ್ನು ಅರ್ಥ ಮಾಡಿಸುವಲ್ಲಿ ಸೇವಾಲಾಲ್‌ರ ಪಾತ್ರ ಅಪಾರ. ಭವ್ಯ ಸಂಸ್ಕೃತಿ ಹೊಂದಿರುವ ಬಂಜಾರ ಸಮುದಾಯದವರು ಇತ್ತೀಚಿಗೆ ಕೇವಲ ವ್ಯಾಪಾರದ ಕಡೆಗೆ ಗಮನಹರಿಸುತ್ತಿದ್ದಾರೆ. ವ್ಯಾಪಾರದ ಜೊತೆಗೆ ಸಂಸ್ಕೃತಿಯನ್ನು ಉಳಿಸಲು ಹೆಚ್ಚಿನ ಗಮನ ಕೊಡುವುದು ಅಗತ್ಯವಾಗಿದೆ. ಸಂಘಟನಾತ್ಮಕವಾಗಿ ಸಮುದಾಯ ಇನ್ನಷ್ಟು ಬೆಳವಣಿಗೆಯಾಗಬೇಕು” ಎಂದು ತಿಳಿಸಿದರು.

Advertisements
WhatsApp Image 2025 02 16 at 6.35.40 PM

ಈ ಸುದ್ದಿ ಓದಿದ್ದೀರಾ?: ಮಂಗಳೂರು | ಅಸ್ಪೃಶ್ಯತೆ ವಿರುದ್ಧ, ಬಂಜಾರ ಸಮುದಾಯದ ಶ್ರೇಯಸ್ಸಿಗಾಗಿ ಸೇವಾಲಾಲ್ ಹೋರಾಟ ಅಪಾರ: ಸದಾಶಿವ ಉಳ್ಳಾಲ್

ಕಾರ್ಯಕ್ರಮದಲ್ಲಿ ಕರಾವಳಿ ಶ್ರೀ ಸೇವಾಲಾಲ್ ಬಂಜಾರ ಸಂಘದ ಅಧ್ಯಕ್ಷ ರಾಜಪ್ಪ, ಕರಾವಳಿ ಶ್ರೀ ಸೇವಾಲಾಲ್ ಬಂಜಾರ ಸಂಘದ ಗೌರವಾಧ್ಯಕ್ಷ ಜಯಪ್ಪ ಲಮಾಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ, ಬಬಿತಾ ಹಾಗೂ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X