ಮಂಗಳೂರು | ಡಿಜಿಟಲ್ ಯುಗದಲ್ಲಿ ಭದ್ರತಾ ಕ್ರಮಗಳು ಅತ್ಯವಶ್ಯ: ಪ್ರೊ. ಆಲ್ವಿನ್ ರೋಶನ್ ಪಾಯಸ್

Date:

ಭಾರತವು ಡಿಜಿಟಲ್ ತಂತ್ರಜ್ಞಾನದಲ್ಲಿ ಬಹಳಷ್ಟು ಸಾಧಿಸಿದೆ. ಜತೆಗೆ ಅದರ ಉಪಯೋಗಗಳು ಹಲವು ಕ್ಷೇತ್ರಗಳಲ್ಲಿ ಜನಪ್ರಿಯವಾಗಿವೆ. ಆದರೆ ಅವಶ್ಯಕವಾಗಿರುವ ಭದ್ರತಾ ಕ್ರಮಗಳನ್ನು ಜನಸಾಮಾನ್ಯರು ತಿಳಿಯದಿರುವುದರಿಂದ ವಂಚನೆಗಳು ಮಿತಿಮೀರುತ್ತಿವೆ ಎಂದು ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯ(ಎನ್‌ಐಟಿಕೆ)ದ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರೊ. ಡಾ| ಆಲ್ವಿನ್ ರೋಶನ್ ಪಾಯಸ್ ಹೇಳಿದರು.

- Advertisement -

ಮಂಗಳೂರಿನ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ನಡೆದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಎನ್‌ಐಟಿಕೆ ಸುರತ್ಕಲ್, ಸೈಬರ್ ಸೆಕ್ಯೂರಿಟಿ ರಿಸರ್ಚ್ ಲ್ಯಾಬ್‌, ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಹಕಾರದೊಂದಿಗೆ ಶಾಲಾ ಕಾಲೇಜುಗಳಲ್ಲಿ ʼಸೈಬರ್ ಸೆಕ್ಯೂರಿಟಿ ಮತ್ತು ಕ್ರಿಪ್ಟೋಗ್ರಫಿʼ ಕಾರ್ಯಾಗಾರಗಳನ್ನು ಏರ್ಪಡಿಸಿ ಭದ್ರತೆಯ ಹಲವು ಮಜಲುಗಳನ್ನು ಪರಿಚಯಿಸುವ ಪ್ರಯತ್ನ ಮಾಡುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಎನ್‌ಐಟಿಕೆ ಸಹಾಯಕ ಪ್ರೊಫೆಸರ್ ಡಾ| ಮಹೇಂದ್ರ ಪ್ರತಾಪ್ ಸಿಂಗ್ ಮಾತನಾಡಿ, “ಮುಂದಿನ ವರ್ಷದಿಂದ ಸಂಸ್ಥೆಗಳಲ್ಲಿ ನಡೆಸುವ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರ ಮೂಲಕ ತಂತ್ರಜ್ಞಾನವು ಎಲ್ಲರನ್ನು ತಲುಪುವ ಹಾಗೂ ಸಂಬಂಧಿತ ಆರ್ಥಿಕ ಅಪರಾಧಗಳನ್ನು ತಡೆಗಟ್ಟುವ ಪ್ರಯತ್ನ ಮಾಡಬೇಕು” ಎಂದರು.

WhatsApp Image 2025 01 31 at 4.26.09 AM 1

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕೇಂದ್ರದ ನಿರ್ದೇಶಕ ಡಾ. ಕೆ ವಿ ರಾವ್ ಮಾತನಾಡಿ, “ಎನ್‌ಐಟಿಕೆ ಮತ್ತು ಭಾರತ ಸರ್ಕಾರದ ಈ ಯೋಜನೆಯು ಆರ್ಥಿಕ ಕ್ಷೇತ್ರದಲ್ಲಿ ಸೈಬರ್ ವಂಚಕರ ಹಾವಳಿಯನ್ನು ತಡೆಗಟ್ಟುವ ಒಂದು ಉತ್ತಮ ಪ್ರಯತ್ನ. ಡಿಜಿಟಲ್ ವಿಜ್ಞಾನ ತಂತ್ರಜ್ಞಾನವನ್ನು ವಿಫುಲವಾಗಿ ಅನುಸರಿಸುತ್ತಿರುವ ಎಲ್ಲಾ ಕ್ಷೇತ್ರಗಳಲ್ಲಿ ಭದ್ರತಾ ಕ್ರಮಗಳ ಬಗ್ಗೆ ಅಗತ್ಯ ಕ್ರಮ ಕೈಗೊಂಡಲ್ಲಿ ಆರ್ಥಿಕ ಅಪರಾಧಗಳನ್ನು ತಡೆಯಬಹುದು. ಇದಕ್ಕಾಗಿ ಎಲ್ಲರೂ ಕೈಜೋಡಿಸಬೇಕೆಂದು” ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ?: ಮಂಗಳೂರು | ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ದ.ಕ. ಜಿಲ್ಲಾಧ್ಯಕ್ಷರಾಗಿ ಎಂ. ದಿವಾಕರ್ ರಾವ್ ಬೋಳೂರು ಆಯ್ಕೆ

ಬಳಿಕ ಎನ್‌ಐಟಿಕೆ ವಿದ್ಯಾರ್ಥಿಗಳಿಂದ ಪ್ರಾತ್ಯಕ್ಷಿಕೆಗಳು ನಡೆದವು. ಕೇಂದ್ರದ ವೈಜ್ಞಾನಿಕ ಅಧಿಕಾರಿ ವಿಘ್ನೇಶ್ ಭಟ್, ಇನೋವೇಶನ್ ಹಬ್‌ನ ಮೆಂಟರ್ ಅಂಬಿಕಾ, ಶೈಕ್ಷಣಿಕ ಸಹಾಯಕಿ ರಶ್ಮಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...