ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಯುವಕನಿಗೆ 1 ವರ್ಷ ಸಾದಾ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ಮಂಗಳೂರು ಹೆಚ್ಚುವರಿ ಜಿಲ್ಲಾ ನ್ಯಾಯಾಲಯ (ಪೋಕ್ಸೋ ಎಫ್‌ಟಿಎಸ್‌ಸಿ-1) ತೀರ್ಪು ನೀಡಿದೆ.
ದೇಶದಲ್ಲಿ ಬಿಎನ್‌ಎಸ್ (ಭಾರತೀಯ ನ್ಯಾಯ ಸಂಹಿತೆ) ಕಾನೂನು ಜಾರಿಗೆ ಬಂದ ಬಳಿಕ ನೋಂದಣಿಯಾದ ಪೋಕ್ಸೋ ಪ್ರಕರಣದ ಮೊದಲ ತೀರ್ಪು ಇದಾಗಿದ್ದು, ಕೇವಲ ಮೂರುವರೆ ತಿಂಗಳಲ್ಲಿ ತೀರ್ಪು ಪ್ರಕಟವಾಗಿದೆ. ಮೆಕ್ಯಾನಿಕ್ ಆಗಿ ಕೆಲಸ ಮಾಡಿಕೊಂಡಿದ್ದ 24 ವರ್ಷದ ಯುವಕನೇ ಶಿಕ್ಷೆಗೀಡಾದ ಅಪರಾಧಿ.
2024ರ ಅಕ್ಟೋಬರ್ ತಿಂಗಳಿನಲ್ಲಿ ಹಲವು ಬಾರಿ ಬೈಕ್‌ನಿಂದ ಬಂದು ಅಡ್ಡಗಟ್ಟಿ ಲೈಂಗಿಕ ಕಿರುಕುಳ ನೀಡಿದ್ದನು. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 12ರಡಿ ಪೋಕ್ಸೋ ಮತ್ತು ಬಿಎನ್‌ಎಸ್ 78ರ ಅಡಿ ಪ್ರಕರಣ ದಾಖಲಾಗಿತ್ತು.
ಈ ಸುದ್ದಿ ಓದಿದ್ದೀರಾ?: ಮಂಗಳೂರು | ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದು ಜೀವ ಉಳಿಸಿದ ವೆನ್ಲಾಕ್ ಆಸ್ಪತ್ರೆಯ ವೈದ್ಯರು
ವಿಚಾರಣೆ ನಡೆಸಿದ ನ್ಯಾಯಾಲಯವು ಅಪರಾಧಿಗೆ 1 ವರ್ಷ ಸಜೆ ಮತ್ತು 10 ಸಾವಿರ ದಂಡ ವಿಧಿಸಿದೆ. ದಂಡ ತೆರಲು ತಪ್ಪಿದರೆ ಹೆಚ್ಚುವರಿ 2 ತಿಂಗಳು ಶಿಕ್ಷೆ ಅನುಭವಿಸಬೇಕು. ಸಂತ್ರಸ್ತ ವಿದ್ಯಾರ್ಥಿನಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ 1 ಲಕ್ಷ ರೂ. ಪರಿಹಾರ ನೀಡಬೇಕೆಂದು ನ್ಯಾಯಾಲಯ ನಿರ್ದೇಶನ ನೀಡಿದೆ.
