ಮಂಗಳೂರು | ಶಕ್ತಿ ಯೋಜನೆ ರಾಜ್ಯ ಸರ್ಕಾರದ ಹೊಸ ಮೈಲಿಗಲ್ಲು: ಐವನ್‌ ಡಿಸೋಜಾ

Date:

ಮಹಿಳಾ ಸ್ವಾವಲಂಬನೆ ಮತ್ತು ನಾರಿ ಶಕ್ತಿಯನ್ನು ಎತ್ತಿ ಹಿಡಿಯುವಲ್ಲಿ ಶಕ್ತಿ ಯೋಜನೆಯು ಜಗತ್ತಿನಲ್ಲೇ ಅತ್ಯಂತ ಮಾದರಿ ಯೋಜನೆಯಾಗಿದೆ. ಈ ಮೂಲಕ ರಾಜ್ಯ ಸರ್ಕಾರದ ಸಾಧನೆಗಳ ಹೊಸ ಮೈಲಿಗಲ್ಲು ಸೃಷ್ಠಿಯಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಐವನ್ ಡಿಸೋಜಾ ಹೇಳಿದರು.

- Advertisement -

ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ  ಮಹಿಳೆಯರ ಉಚಿತ ಬಸ್ ಪ್ರಯಾಣಿಸುವ  ಶಕ್ತಿ ಯೋಜನೆಯ ಹೊಸ ಮೈಲಿಗಲ್ಲು ತಲುಪಿದ್ದು, 500 ಕೋಟಿ ಮಹಿಳಾ ಪ್ರಯಾಣಿಕರು ಸಂಚರಿಸಿ ಹೊಸ ದಾಖಲೆ ತಲುಪಿದೆ. ಈ ಹಿನ್ನೆಲೆ ಮಂಗಳೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬಸ್‍ಗಳಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಿ ಮಹಿಳಾ ಪ್ರಯಾಣಿಕರಿಗೆ ಸಿಹಿ ಮತ್ತು ಹೂ ಹಂಚಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಶಕ್ತಿ ಯೋಜನೆ ಮೂಲಕ ಮಹಿಳೆಯರ ಹಣಕಾಸು ಸಾಮಥ್ಯವನ್ನು ಹೆಚ್ಚಿಸಿ ಅವರ ಪರಾವಲಂಬನೆಯನ್ನು ತಪ್ಪಿಸಿದೆ. ಇದರಿಂದ ರಾಜ್ಯದ ಹಲವಾರು ಕುಟುಂಬಗಳ ಸ್ಥಿತಿ ಉತ್ತಮಗೊಂಡು ಮಹಿಳೆಯರು ಧಾರ್ಮಿಕ, ಪ್ರವಾಸ ಮತ್ತು ಕೆಲಸದ ಸ್ಥಳಗಳಿಗೆ ನೆಮ್ಮದಿಯಿಂದ ಸಂಚರಿಸಬಹುದು” ಎಂದು ಹೇಳಿದರು.

“ಮಧ್ಯಮ ವರ್ಗದ ದುಡಿಯುವ ಮಹಿಳೆಯರು ದಿನನಿತ್ಯ ಒಂದು ಜಿಲ್ಲೆಯಿಂದ ಇನ್ನೊಂದು ಜಿಲ್ಲೆಗೆ ಪ್ರಯಾಣಿಸಬೇಕಾಗುತ್ತದೆ. ಹಾಗೆಯೇ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿನಿಯರು ತಮ್ಮ ಉಜ್ವಲ ಭವಿಷ್ಯಕ್ಕಾಗಿ ವಿದ್ಯಾಭ್ಯಾಸ ಪಡೆಯಲು ದೂರದ ಶಾಲಾ-ಕಾಲೇಜುಗಳಿಗೆ ಪ್ರಯಾಣಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಶಕ್ತಿ ಯೋಜನೆಯು ಕಡಿಮೆ  ಆದಾಯವನ್ನು ಹೊಂದಿರುವ ಮಹಿಳೆಯರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಬಹಳ ಉಪಯುಕ್ತವಾಗಿದೆ” ಎಂದರು.

2023ರ ಜೂನ್ 11 ರಂದು ಶಕ್ತಿ ಯೋಜನೆ ಜಾರಿಗೆ ಬಂದಿದ್ದು, 2 ವರ್ಷಗಳ ಅವಧಿಗಳಲ್ಲಿ ರಾಜ್ಯಾದ್ಯಂತ ಕೆಎಸ್‌ಆರ್‌ಟಿಸಿ ಸಾಮಾನ್ಯ ಸಾರಿಗೆ ಬಸ್ಸುಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ವಿತರಣೆ ಮಾಡಿದ ಉಚಿತ ಪ್ರಯಾಣದ ಟಿಕೆಟ್‍ಗಳ ಸಂಖ್ಯೆ 500 ಕೋಟಿ ತಲುಪಿದೆ.

ಇದನ್ನೂ ಓದಿ: ಮಂಗಳೂರು | ಅನುಮತಿ ಪಡೆಯದೆ ಡಿಜೆ ಬಳಕೆ; FIR ದಾಖಲು

ಈ ಸಂದರ್ಭದಲ್ಲಿ ಮಂಗಳೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುರೇಂದ್ರ ಕಂಬಳಿ, ಮುಲ್ಕಿ ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಅಲ್ವಿನ್ ಕುಟಿನೋ, ಮಾಜಿ ಶಾಸಕರಾದ ಜೆ.ಆರ್ ಲೋಬೊ, ಹರೀಶ್ ಕುಮಾರ್, ಮುಖಂಡರಾದ ಪದ್ಮರಾಜ್ , ಶಶಿಧರ ಹೆಗ್ಡೆ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಅಲೆಸ್ಟರ್ ಕುನ್ಹಾ, ಶಾಂತಲಾ ಗಟ್ಟಿ, ತಾಲ್ಲೂಕು ಸದಸ್ಯರಾದ ನೀತಾ, ವಿದ್ಯಾ, ಜಯಂತಿ, ರಿತೇಶ್, ನವಾಜ್, ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...