ಮಂಗಳೂರು | ಅ.12ರಂದು ಎಸ್‌ಐಓ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನ

Date:

ವಿದ್ಯಾರ್ಥಿ ಸಂಘಟನೆಯಾದ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್‌ ಆಫ್ ಇಂಡಿಯಾ (ಎಸ್‌ಐಓ) ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ‘ಬದಲಾವಣೆಯ ಚಿಂತನೆಯನ್ನು ಮರು ಪರಿಶೀಲಿಸೋಣ’ ಎಂಬ ಧ್ಯೇಯ ವಾಕ್ಯದೊಂದಿಗೆ ಅ.12(ನಾಳೆ)ರ ಶನಿವಾರದಂದು ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಆಸಿಫ್ ಡಿ.ಕೆ. ತಿಳಿಸಿದ್ದಾರೆ.

- Advertisement -

ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಸಮ್ಮೇಳನವು ಅ.12ರಂದು ಸಂಜೆ 4ಕ್ಕೆ ತೊಕ್ಕೊಟ್ಟು ಯೂನಿಟಿ ಹಾಲ್ ಬಳಿಯಲ್ಲಿರುವ ಮೈದಾನದಲ್ಲಿ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಾಳೆ ಜಿಎಸ್‌ಟಿ ಮಂಡಳಿ ಸಭೆ: ಅಧಿಕಾರ ಹಂಚಿಕೆಯ ಅಸಮತೋಲನ;...

ಜಿಎಸ್‌ಟಿ ಮಂಡಳಿಯು ದೇಶದ 'ಸಹಕಾರ ಒಕ್ಕೂಟ ವ್ಯವಸ್ಥೆ'ಗೆ ಒಂದು ಉದಾಹರಣೆಯಾಗಿದ್ದರೂ, ಮತದಾನದ ಪ್ರಕ್ರಿಯೆಯಲ್ಲಿ ಕೇಂದ್ರಕ್ಕಿರುವ ಮೇಲುಗೈ ರಾಜ್ಯಗಳ ಸ್ವಾಯತ್ತತೆಗೆ ಧಕ್ಕೆ ತರುತ್ತಿದೆ ಎಂಬುದು ಸ್ಪಷ್ಟ. ಜಿಎಸ್‌ಟಿ ಜಾರಿಗೆ ಬಂದ ನಂತರ ರಾಜ್ಯಗಳು ತಮ್ಮ...

ತನ್ನ ಕಾದಂಬರಿಗಳ ಪಾತ್ರಗಳಂತೆಯೇ ಜೀವಿಸಿದ್ದ ಜನಪ್ರಿಯ ಕಾದಂಬರಿಕಾರ ಜೆಫ್ರಿ...

ಜನಪ್ರಿಯ ಕಾದಂಬರಿಕಾರ ಜೆಫ್ರಿ ಆರ್ಚರ್, ತಮ್ಮ 86ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಸೇನೆ, ಪೊಲೀಸ್, ದೈಹಿಕ ಶಿಕ್ಷಣ ಶಿಕ್ಷಕ, ರಾಜಕಾರಣಿ, ಕಾದಂಬರಿಕಾರ... ಅವರ ಬದುಕೇ ಕಾದಂಬರಿಯ ಕಥಾವಸ್ತುವಾಗಿತ್ತು. ತಮ್ಮ ಬದುಕಿನ ಕೊನೆಯ ದಿನವೂ ಅವರು...

ಚುನಾವಣಾ ಆಯೋಗವು ತಾನೇ ಹಾಕಿಕೊಂಡ ಗಂಟುಗಳನ್ನು ಬಿಡಿಸಿಕೊಳ್ಳಬಲ್ಲದೇ? ಇದೇ...

SIR ನಡೆಸುವ ನಿರ್ಧಾರ ಸರ್ವಾನುಮತದಿಂದ ಕೂಡಿತ್ತು ಎಂದು ಜನ ನಂಬಬೇಕಾದರೆ, ಆಯೋಗವು ಸಂಬಂಧಿಸಿದ ಸಭೆಯ ಅಧಿಕೃತ ನಡಾವಳಿಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಬೇಕು. ಆ ಮೂಲಕ ಚುನಾವಣಾ ಆಯೋಗವು ತಾನೇ ಸೃಷ್ಟಿಸಿಕೊಂಡಿರುವ ಗೋಜಲುಗಳಿಂದ ಬಿಡಿಸಿಕೊಳ್ಳಬೇಕು. ಭಾರತೀಯ...
ಎಸ್‌ಐಓ

ಸಮಾವೇಶವನ್ನು ಜಮಾಅತೆ ಇಸ್ಲಾಮೀ ಹಿಂದ್ ಕೇರಳ ಉಪಾಧ್ಯಕ್ಷ ವಿ.ಟಿ.ಅಬ್ದುಲ್ಲಾ ಕೋಯ ತಂಙಳ್ ಉದ್ಘಾಟಿಸಲಿದ್ದಾರೆ. ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಆಫ್ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷ ರಮೀಝ್ ಇ.ಕೆ. ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಮಂಗಳೂರು | ಮುಮ್ತಾಝ್ ಅಲಿ ಪ್ರಕರಣ: ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಹಕ್ಕೊತ್ತಾಯ ಸಭೆ

ಅತಿಥಿಗಳಾಗಿ ಕೆಪಿಸಿಸಿ ವಕ್ತಾರ, ಸಾಮಾಜಿಕ ಕಾರ್ಯಕರ್ತರಾದ ನಿಕೇತ್ ರಾಜ್ ಮೌರ್ಯ, ಎಸ್‌ಐಓ ಕರ್ನಾಟಕ ರಾಜ್ಯಾಧ್ಯಕ್ಷ ಝೀಶಾನ್‌ ಅಖಿಲ್ ಸಿದ್ದೀಕಿ, ಜಮಾಅತೆ ಇಸ್ಲಾಮೀ ಹಿಂದ್ ಕೇರಳ ಮುಖಂಡರಾದ ಸಲೀಂ ಮಂಬಾಡ್, ಜಮಾಅತೆ ಇಸ್ಲಾಮೀ ಕರ್ನಾಟಕ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞಿ ಭಾಗವಹಿಸಲಿದ್ದಾರೆ ಎಂದವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾರ್ಯದರ್ಶಿಗಳಾದ ಮುಹಮ್ಮದ್ ಮುಸ್ತಫಾ, ಸಲ್ವಾನ್‌, ಮಂಗಳೂರು ನಗರಾಧ್ಯಕ್ಷ ಮುಂಝಿರ್ ಅಹ್ಸನ್, ಸಮ್ಮೇಳನ ಸಂಚಾಲಕ ಹುನೈನ್ ಹುಸೇನ್ ಉಪಸ್ಥಿತರಿದ್ದರು.

WhatsApp Image 2024 10 10 at 10.15.01 PM
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಾಳೆ ಜಿಲ್ಲೆಗೆ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ನಾಳೆ (ಅಕ್ಟೋಬರ್ 8ರಂದು) ರಾಯಚೂರು ಹಾಗೂ...

ಮಂಗಳೂರು | 350 ಪೊಲೀಸ್ ಠಾಣೆಗಳಲ್ಲಿ ಹುಡುಕಿದರೂ ‘ಲವ್ ಜಿಹಾದ್’ ದೂರು ಸಿಗಲಿಲ್ಲ : ಎಂ.ಜಿ. ಹೆಗಡೆ

‘ಲವ್ ಜಿಹಾದ್’ ಕುರಿತು ಕಳೆದ ಎರಡು ದಶಕಗಳಿಂದ ನಡೆಯುತ್ತಿರುವ ಚರ್ಚೆ, ಪ್ರಚಾರ...

ಕಲಬುರಗಿ | ಹಳೆಯ ನೆನಪುಗಳಿಗೆ ಮರುಜೀವ: ಹಳೆಯ ವಿದ್ಯಾರ್ಥಿಗಳ ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮ

ಅಫಜಲಪುರ ತಾಲ್ಲೂಕಿನ ಮಾಶಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ...

ಯಾದಗಿರಿ | ಸಂಚಾರ ನಿಯಮ ಪಾಲನೆಗೆ ಜಾಗೃತಿ: ಹೆಲ್ಮೆಟ್, ಪರವಾನಗಿ, ವಿಮೆ ಕಡ್ಡಾಯ

ನಗರದ ಸೇರಿದಂತೆ ತಾಲ್ಲೂಕಿನ ಭೀಮರಾಯನಗುಡಿ ಹಾಗೂ ಗೋಗಿ ಗ್ರಾಮಗಳಲ್ಲಿ ಸಂಚಾರ ನಿಯಮಗಳ...