ಮಂಗಳೂರು | ವಕ್ಫ್‌ ತಿದ್ದುಪಡಿ ಮಸೂದೆ ಖಂಡಿಸಿ ಎಸ್‌ಐಒ ವಿದ್ಯಾರ್ಥಿಗಳ ಪ್ರತಿಭಟನೆ

Date:

ಸಂಸತ್ತಿನಿಂದ ಇತ್ತೀಚೆಗೆ ಪಾರಿತಗೊಂಡ ವಕ್ಫ್‌ ತಿದ್ದುಪಡಿ ಮಸೂದೆಯ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ(ಎಸ್‌ಐಒ)ದಿಂದ ಶನಿವಾರ ಬೆಳಿಗ್ಗೆ ಮಂಗಳೂರು ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದರು.

- Advertisement -

ಪ್ರತಿಭಟನೆಯಲ್ಲಿ ವಿವಿಧ ಸಾಮಾಜಿಕ ಮುಖಂಡರು ಹಾಗೂ ಸಂಘಟನೆಯ ಮುಖಂಡರು ಪಾಲ್ಗೊಂಡು, ಈ ವಿಧೇಯಕವು ಸಂವಿಧಾನ ಪರ ಮೌಲ್ಯಗಳಿಗೆ ವಿರುದ್ಧವಾಗಿದ್ದು, ಅಲ್ಪಸಂಖ್ಯಾತರನ್ನು ಗುರಿಯಾಗಿಸುವುದೆಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಎಸ್‌ಐಒ ಕರ್ನಾಟಕ ರಾಜ್ಯ ಕಾರ್ಯದರ್ಶಿ ಅಸಿಫ್ ಡಿ ಕೆ ಮಾತನಾಡಿ, “ಇದು ಕೇವಲ ಕಾನೂನು ಪ್ರಶ್ನೆಯಲ್ಲ. ಇದು ಮುಸ್ಲಿಮರ ಆಸ್ತಿಗಳ ಮೇಲೆ ಕಣ್ಣಿಟ್ಟು ನಮ್ಮ ಅಸ್ತಿತ್ವದ ಮೇಲೆ ದಾಳಿ ಮಾಡುವ ಪ್ರಯತ್ನ. ವಕ್ಫ್‌ ಬೋರ್ಡ್‌ನಲ್ಲಿ ಮುಸ್ಲಿಮೇತರರಿಗೆ ಏನು ಕೆಲಸ? ಮುಸ್ಲಿಮರ ಸಾಂವಿಧಾನಿಕ ಹಕ್ಕನ್ನು ಪಡೆದುಕೊಳ್ಳುವುದಕ್ಕೆ ಎಲ್ಲ ಸಂಘಟನೆಗಳನ್ನು ಒಟ್ಟು ಸೇರಿಸಿ ಎಸ್‌ಐಒ ಪ್ರತಿಭಟನೆಯನ್ನು ಮುಂದುವರಿಸಲಿದೆ” ಎಂದರು.

ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಮಾತನಾಡಿ, “ಈ ಹಿಂದೆ ವಕ್ಫ್‌ ಕಾನೂನಿಗೆ ತಂದ ತಿದ್ದುಪಡಿಗಳಿಗೆ ಮುಸ್ಲಿಮರು ವಿರೋಧ ವ್ಯಕ್ತಪಡಿಸಿರಲಿಲ್ಲ. ಆದರೆ ಇದೀಗ ಮುಸ್ಲಿಮರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಪ್ರಯತ್ನ ನಡೆಯುತ್ತಿದೆ. ಮಡಿಲ ಮಾಧ್ಯಮಗಳು ಅದಕ್ಕೆ ಬೆಂಬಲ ನೀಡುತ್ತಿವೆ. ಇದು ಮುಸ್ಲಿಂ ಸಮುದಾಯದ ಹಿತಾಸಕ್ತಿಗೆ ವಿರುದ್ಧವಾಗಿದೆ” ಎಂದು ಹೇಳಿದರು.

ಮಾಜಿ ಮೇಯರ್ ಅಶ್ರಫ್ ಮಾತನಾಡಿ, “ಅಲ್ಪಸಂಖ್ಯಾತರನ್ನು ಗುರಿಯಾಗಿಸುವ ಈ ರೀತಿಯ ಕ್ರಮಗಳು ನಮ್ಮ ಸಂವಿಧಾನಾತ್ಮಕ ಮೌಲ್ಯಗಳಿಗೆ ವಿರುದ್ದವಾಗಿವೆ. ನಾವು ಇದನ್ನು ಒಪ್ಪುವುದಿಲ್ಲ. ಸುಪ್ರೀಂ ಕೋರ್ಟ್‌ನಲ್ಲಿ ಈಗಾಗಲೇ ಈ ಮಸೂದೆ ವಿರುದ್ಧ ಅರ್ಜಿ ಸಲ್ಲಿಸಲಾಗಿದೆ. ನ್ಯಾಯಕ್ಕಾಗಿ ಹೋರಾಟ ಮುಂದುವರಿಸುತ್ತೇವೆ. ಮಂಗಳೂರಿನಲ್ಲಿ ಇನ್ನೂ ದೊಡ್ಡ ಮಟ್ಟದ ಹೋರಾಟ ಮಾಡುತ್ತೇವೆ” ಎಂದು ಎಚ್ಚರಿಕೆ ನೀಡಿದರು.

ಎಸ್‌ಐಒ 1

ಯುನಿವೆಫ್ ಕರ್ನಾಟಕದ ಅಧ್ಯಕ್ಷ ರಫಿಉದ್ದೀನ್ ಕುದ್ರೋಳಿ ಮಾತನಾಡಿ, “ನಮ್ಮ ಹೋರಾಟ ಹಿಂದೂ-ಮುಸ್ಲಿಂ ಹೋರಾಟವಲ್ಲ. ನಮ್ಮ ಹೋರಾಟ ಹಿಂದೂಗಳ ವಿರುದ್ಧವಲ್ಲ. ನಮ್ಮ ಹೋರಾಟ ಸಂವಿಧಾನ ನೀಡಿರುವಂತಹ ಹಕ್ಕುಗಳನ್ನು ಪಡೆದುಕೊಳ್ಳುವುದಕ್ಕಾಗಿದೆ. ಈ ಮಸೂದೆ ಮುಸ್ಲಿಮರ ಹಿತಕ್ಕೆ ವಿರುದ್ಧವಾಗಿದೆ. ಇದು ಮುಸ್ಲಿಮರ ಜಮೀನು ಕಬಳಿಸುವ ಯತ್ನವಾಗಿದೆ” ಎಂದು ಹೇಳಿದರು.

ಇಕ್ರಾ ಅರಬಿಕ್ ಇನ್ಸ್‌ಟಿಟ್ಯೂಟ್‌ ಪ್ರಾಂಶುಪಾಲ ಫರ್ಹಾನ್ ನದ್ವಿ ಮಾತನಾಡಿ, “ನಮ್ಮ ಪೂರ್ವಜರು ಅಲ್ಲಾಹನನ್ನು ಸಂತೃಪ್ತಪಡಿಸಲು, ಮುಸ್ಲಿಮರ ಸಬಲೀಕರಣಕ್ಕಾಗಿ ದಾನ ಮಾಡಿದ ಜಮೀನು ವಕ್ಫ್‌. ಅಲ್ಲದೆ ಯಾರಿಂದಲೋ ಕಬಳಿಸಿದ ಜಮೀನಲ್ಲ. ಯಾರಿಂದಲೋ ಕಬಳಿಸಿದ ಜಮೀನು ವಕ್ಫ್‌ ಆಗಲು ಸಾಧ್ಯವೂ ಇಲ್ಲ. ಧರ್ಮವೆಂಬ ಗೋಡೆಯನ್ನು ಬದಿಗಿಟ್ಟು ಎಲ್ಲ ಭಾರತೀಯರು ನಮ್ಮ ಜತೆಗೆ ಕೈ ಜೋಡಿಸಬೇಕೆಂದು ಕೇಳುತ್ತೇವೆ. ಇಂದು ಮುಸ್ಲಿಮರು ಗುರಿಯಾಗಿದ್ದರೆ, ನಾಳೆ ಎಲ್ಲ ಶೋಷಿತ ದಮನಿತ ವರ್ಗಗಳು ಹೆಜ್ಜೆ ಹೆಜ್ಜೆಯಾಗಿ ಗುರಿಯಾಗುತ್ತವೆ” ಎಂದರು.

ಸಾಲಿಡಾರಿಟಿ ಯೂಥ್ ಮೂಮೆಂಟ್‌ ಜಿಲ್ಲಾಧ್ಯಕ್ಷ ಅಸ್ಲಂ ಉಪ್ಪಿನಂಗಡಿ ಮಾತನಾಡಿ, “ಈ ವಿಧೇಯಕವು ದೇಶದ ನಿಜವಾದ ಸಮಸ್ಯೆಗಳಿಂದ ಜನರ ಗಮನವನ್ನು ತಿರುಗಿಸಲು ಸರ್ಕಾರದ ಯತ್ನವಾಗಿದೆ. ಅಲ್ಪಸಂಖ್ಯಾತರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳುವುದಾದರೆ ನಾವು ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆ. ವಿದ್ಯಾರ್ಥಿಗಳು ಮತ್ತು ಯುವಕರು ಬೀದಿಗಿಳಿದರೆ ವಿಜಯವು‌ ನಿಶ್ಚಿತವಾಗಿದೆ. ನಾವು ಶಾಂತಿಯುತ ಹಾಗೂ ಪ್ರಜಾಪ್ರಭುತ್ವದ ಮಾರ್ಗದಲ್ಲಿ ಹೋರಾಟವನ್ನು ಮುಂದುವರಿಸುತ್ತೇವೆ” ಎಂದು ಎಚ್ಚರಿಸಿದರು. ‌

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಯುವಜನರು ವಿದೇಶದಲ್ಲಿ ಉದ್ಯೋಗ ಹುಡುಕಲು ಕೌಶಲ್ಯ ಸಹಕಾರಿ: ಸಚಿವ ಶರಣಪ್ರಕಾಶ್ ಪಾಟೀಲ್

ಜಮಾಅತೆ ಇಸ್ಲಾಮಿ ಹಿಂದ್ ಮಂಗಳೂರು ನಗರಾಧ್ಯಕ್ಷ ಕೆ ಎಂ ಅಶ್ರಫ್ ಮಾತನಾಡಿ, “ಬಹುಸಂಸ್ಕೃತಿ ಹೊಂದಿರುವ ದೇಶಗಳಲ್ಲಿ ಕಂಡುಬರುವ ಪ್ರಗತಿ ಏಕಸಂಸ್ಕೃತಿ ದೇಶಗಳಲ್ಲಿಲ್ಲ. ಇಂದಿನ ಸರ್ಕಾರದಲ್ಲಿರುವ ಪಕ್ಷ ಮತ್ತು ಅದರ ಮಾತೃ ಸಂಘಟನೆ ಭಾರತದ ಬಹುಸಂಸ್ಕೃತಿಗೆ ವಿರುದ್ಧವಾಗಿದೆ. ಒಂದು ಸಮುದಾಯವನ್ನು ವೈರಿಗಳಂತೆ ಮಾಡಿ ಅವರನ್ನು ಗುರಿಯಾಗಿಸಿ ಸರ್ಕಾರ ಕಾನೂನು ತರುತ್ತಿದೆ. ಮುಸ್ಲಿಮರಿಗೆ ತಮ್ಮ ಧರ್ಮದನುಸಾರ ನಡೆದುಕೊಳ್ಳುವ ಅಧಿಕಾರವನ್ನು ಸಂವಿಧಾನ ನೀಡಿದೆ. ಈ ವಕ್ಫ್‌ ಮಸೂದೆಯು ಆ ಅಧಿಕಾರಗಳಿಗೆ ವಿರುದ್ಧವಾಗಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕೃಷಿ ಮೇಳದಿಂದ ರೈತರ ಬದುಕಿಗೆ ಆತ್ಮಸ್ಥೈರ್ಯ ತುಂಬಲಿ: ಕೋಟ ಶ್ರೀನಿವಾಸ ಪೂಜಾರಿ

ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಮೌಲ್ಯವರ್ಧನೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು...

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...