ಮಂಗಳೂರು | ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ; ಓರ್ವ ಕಾರ್ಮಿಕನ ರಕ್ಷಣೆ, ಮತ್ತೊಬ್ಬನಿಗಾಗಿ ಶೋಧ

Date:

ನಿರ್ಮಾಣ ಹಂತದ ಕಟ್ಟಡದ ಸಮೀಪ ಮಣ್ಣು ಕುಸಿದ ಪರಿಣಾಮ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಬಲ್ಮಠದ ಸಮೀಪ ನಡೆದಿದೆ.

- Advertisement -

ಕಾಮಗಾರಿ ವೇಳೆ ಏಕಾಏಕಿ ಮಣ್ಣು ಕುಸಿದಿದ್ದು, ಕೆಲಸದಲ್ಲಿ ನಿರತರಾಗಿದ್ದ ಇಬ್ಬರು ಕಾರ್ಮಿಕರು ಮಣ್ಣಿನ ಅಡಿ ಸಿಲುಕಿದ್ದರು. ಮಣ್ಣಿನಡಿ ಸಿಲುಕಿದ್ದ ಓರ್ವ ಕಾರ್ಮಿಕನನ್ನು ರಕ್ಷಣೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

mangalore

ರಕ್ಷಿಸಲ್ಪಟ್ಟ ಕಾರ್ಮಿಕನನ್ನು ರಾಜ್ ಕುಮಾರ್ (18) ಎಂದು ಗುರುತಿಸಲಾಗಿದ್ದು, ಮತ್ತೋರ್ವ ಕಾರ್ಮಿಕ ಉತ್ತರ ಪ್ರದೇಶದ ಚಂದನ್ ಕುಮಾರ್(30) ಅವರನ್ನು ರಕ್ಷಿಸಲು ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ಪಡೆಯ ಅಧಿಕಾರಿಗಳು ಪ್ರಯತ್ನಿಸುತ್ತಿರುವುದಾಗಿ ವರದಿಯಾಗಿದೆ. ಕಾರ್ಯಾಚರಣೆಗೆ ಮಳೆ ಅಡ್ಡಿಯಾಗಿರುವುದಾಗಿ ತಿಳಿದುಬಂದಿದೆ.

ಈಗಾಗಲೇ ರಕ್ಷಿಸಲ್ಪಟ್ಟ ಕಾರ್ಮಿಕ ರಾಜ್ ಕುಮಾರ್‌ನನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಂಕ್ರೀಟ್ ಗೋಡೆಗೆ ರಂಧ್ರ ತೆಗೆದ ರಕ್ಷಣಾ ತಂಡ

ಮಣ್ಣಿನಡಿಯಲ್ಲಿ ಸಿಲುಕಿರುವ ಮತ್ತೋರ್ವ ಕಾರ್ಮಿಕ ಚಂದನ್ ಕುಮಾರ್ ಅವರನ್ನು ರಕ್ಷಣಾ ತಂಡ ಪತ್ತೆ ಹಚ್ಚಿದ್ದು, ಕಾಂಕ್ರೀಟ್ ಗೋಡೆಗೆ ರಂಧ್ರ ತೆಗೆದು ರಕ್ಷಿಸುವಲ್ಲಿ ನಿರತವಾಗಿರುವುದಾಗಿ ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸೇರಿದಂತೆ ಪ್ರಮುಖ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...