ಮಂಗಳೂರು | ತುಳು ಭಾಷೆಗಾಗಿ ಹೋರಾಟ, ತ್ಯಾಗಕ್ಕೂ ಸಿದ್ದ : ಸಾಹಿತಿ ಕೆ.ಟಿ. ಆಳ್ವ

Date:

Advertisements

ತುಳು ಭಾಷೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ, ನನ್ನ ಈ ಇಳೀ ವಯಸ್ಸಿನಲ್ಲೂ ನಾನು ತುಳು ಭಾಷೆಯ ಸಲುವಾಗಿ ಯಾವುದೇ ಹೋರಾಟ, ತ್ಯಾಗಕ್ಕೂ ಸಿದ್ಧ ಎಂದು ಹಿರಿಯ ಗಾಂಧಿವಾದಿ, ನಿವೃತ್ತ ಉಪನ್ಯಾಸಕ, ತುಳು ಬರಹಗಾರ ಕೆ.ಟಿ. ಆಳ್ವ ಅವರು ಹೇಳಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ನೀಡಲಾದ ಚಾವಡಿ ತಮ್ಮನ ಗೌರವನ್ನು ಸ್ವೀಕರಿಸಿ ತಿಮ್ಮಣ್ಣ ಆಳ್ವರು ಮಾತನಾಡಿದರು. ತೊಂಬತ್ತೆರಡರ ವಯಸ್ಸಿನ ಕೆ.ಟಿ. ಆಳ್ವರಿಗೆ ಅಕಾಡೆಮಿಯ ಚಾವಡಿ ತಮ್ಮನ ಗೌರವವನ್ನು ಮುಡಿಪು ಪಜೀರ್‌ನ ತಿಮ್ಮಣ್ಣ ಆಳ್ವರ ನಿವಾಸದಲ್ಲಿ ಪ್ರಧಾನ ಮಾಡಲಾಯಿತು. ಮುಡಿಪು ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳ ಬಳಗದ ಸಹಭಾಗಿತ್ವದಲ್ಲಿ ಕಾರ್ಯಕ್ರಮ ನಡೆಯಿತು.

ತುಳು ಭಾಷೆಯ ಬಗ್ಗೆ ಜನ ಸಾಮಾನ್ಯರ ಕೈಗೆಟಕುವಂತಹ ಶಬ್ದಕೋಶವೊಂದನ್ನು ಹೊರ ತರಲು ಅಕಾಡೆಮಿ ಮುಂದಾಗಬೇಕೆಂದು ತಿಮ್ಮಣ್ಣ ಆಳ್ವರು ಅಭಿಪ್ರಾಯಪಟ್ಟರು.

Advertisements

ಯಾವುದೇ ಸನ್ಮಾನ, ಪುರಸ್ಕಾರವನ್ನು ಜೀವನದಲ್ಲಿ ಎಂದೂ ಬಯಸದ ನನ್ನನ್ನು ತುಳು ಅಕಾಡೆಮಿ ಚಾವಡಿ ತಮ್ಮನದ ಮೂಲಕ ಗೌರವಿಸಿರುವುದು ನನ್ನ ಯೋಗ ಭಾಗ್ಯವೆಂಬ ಕೃತಜ್ಞತೆಯ ಭಾವವನ್ನು
ಮೂಡಿಸಿದೆ ಎಂದು ಕೆ.ಟಿ. ಆಳ್ವರು ಅನಿಸಿಕೆ ಹಂಚಿಕೊಂಡರು.

ಪಜೀರ್‌ ಗ್ರಾಮ ಪಂಚಾಯತ್‌ ಅಧ್ಯಕ್ಷ ರಫೀಕ್‌ ಪಜೀರ್‌ ಅವರು ಮಾತನಾಡಿ, ಪಜೀರ್‌ ಪಂಚಾಯತಿನ ಗ್ರಂಥಾಲಯದಲ್ಲಿ ತುಳು ಭಾಷೆಯ ಪುಸ್ತಕ ವಿಭಾಗವನ್ನು ಆಂಭಿಸುವುದಾಗಿ ತಿಳಿಸಿದರು. ಪಂಚಾಯತ್ ವತಿಯಿಂದ ತುಳು ಕಾರ್ಯಕ್ರಮವನ್ನು ಆಯೋಜಿಸುವುದಾಗಿ ತಿಳಿಸಿದರು.

WhatsApp Image 2025 04 27 at 7.29.13 PM

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್‌ ಗಟ್ಟಿ ಕಾಪಿಕಾಡ್‌ ಅವರು ಮಾತನಾಡಿ, ತುಳುವಿಗಾಗಿ ಸೇವೆ ಸಲ್ಲಿಸಿದ ಹಿರಿಯ ಸಾಧಕರ ಮನೆಗೆ ತೆರಳಿ, ಊರವರ ಸಮ್ಮುಖದಲ್ಲಿ ಅಕಾಡೆಮಿಯ ಚಾವಡಿ ತಮ್ಮನದ ಗೌರವವನ್ನು ಅರ್ಪಿಸುವ ಕಾರ್ಯಕ್ರಮವನ್ನು ಅಕಾಡೆಮಿ ಆಯೋಜಿಸುತ್ತಿದೆ, ಆ ಮೂಲಕ ಅಕಾಡೆಮಿಯು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಿಲು ಮುಂದಾಗಿದೆ ಎಂದು ತಿಳಿಸಿದರು.

ಸಮಾರಂಭದಲ್ಲಿ ನಿವೃತ್ತ ಪ್ರಾಂಶುಪಾಲ ಡಾ. ಎನ್.‌ ಇಸ್ಮಾಯಿಲ್‌, ಹಿರಿಯ ಲೆಕ್ಕ ಪರಿಶೋಧಕ ಪುಂಡರಿಕಾಕ್ಷ , ಪಜೀರ್‌ ಪಂಚಾಯತ್‌ ಸದಸ್ಯರಾದ ಇಮ್ತಿಯಾಜ್‌ , ಸೀತಾರಾಮ ಶೆಟ್ಟಿ ಮುಗುಳಿ, ಭರತ್‌ ರಾಜ್‌ ಶೆಟ್ಟಿ , ಮಾಜಿ ತಾಲೂಕು ಪಂಚಾಯತ್ ಸದಸ್ಯ ಉಮೇಶ್‌ ಮೊದಲಾದವರು ಮಾತನಾಡಿದರು. ಪತ್ರಕರ್ತ ಶಶಿಧರ ಪೊಯ್ಯತ್ತಬೈಲ್‌ ಅಭಿನಂದನಾ ಭಾಷಣ ಮಾಡಿದರು.

ಬಳಿಕ ನಡೆದ ಸಂವಾದ ಕಾರ್ಯಕ್ರಮದಲ್ಲಿ ಲೇಖಕರಾದ ಚಂದ್ರಹಾಸ ಕಣಂತೂರು, ಶಶಿಧರ್‌ ಮಂಟಮೆ, ಬಾಬು ಪಿಲಾರ್‌ , ಎಡ್ವರ್ಡ್‌ ತೊಕ್ಕೊಟ್ಟು , ಅಮಿತಾ ಮೊದಲಾದವರು ಪಾಲ್ಗೊಂಡರು. ಡಾ. ರಾಜರಾಮ್‌ ಆಳ್ವ ಉಪಸ್ಥಿತರಿದ್ದರು.

ಕೆ.ಟಿ. ಆಳ್ವರು ಶಿಕ್ಷಣಕ್ಕಾಗಿ ನೀಡುತ್ತಿದ್ದ ಆದ್ಯತೆ ಹಾಗೂ ಪ್ರೋತ್ಸಾವನ್ನು ಎಲ್ಲರೂ ತಮ್ಮ ಮಾತಿನಲ್ಲಿ ಉಲ್ಲೇಖಿಸಿದರು. ಮುಡಿಪು ಸರಕಾರಿ ಪ.ಪೂ ಕಾಲೇಜಿನ ಹಳೆ ವಿದ್ಯಾರ್ಥಿ ಬಳಗದ ಪ್ರವೀಣ್‌ ಅಮ್ಮೆಂಬಳ ಕಾರ್ಯಕ್ರಮ ನಿರ್ವಹಿಸಿದರು, ಇಸ್ಮತ್‌ ಪಜೀರ್‌ ಸ್ವಾಗತಿಸಿದರು. ಅನ್ನಪೂರ್ಣೇಶ್ವರಿ ವಂದಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

Download Eedina App Android / iOS

X