ಮಂಗಳೂರು | ಕೆನರಾ ಬ್ಯಾಂಕ್ ಲಾಕರ್‌ನಲ್ಲಿದ್ದ ನಗದು ನೋಟುಗಳಿಗೆ ಗೆದ್ದಲು; ಗ್ರಾಹಕನ ₹8 ಲಕ್ಷ ನಷ್ಟ

Date:

Advertisements

ಮಂಗಳೂ‌ರು ನಗರದ ಕೆನರಾ ಬ್ಯಾಂಕ್ ಶಾಖೆಯೊಂದರ ಲಾಕರ್‌ನಲ್ಲಿಟ್ಟಿದ್ದ ₹8 ಲಕ್ಷ ನಗದು ನೋಟುಗಳಿಗೆ ಗೆದ್ದಲು ಹಿಡಿದು ಪುಡಿಯಾಗಿರುವ ಸಂಬಂಧ ಗ್ರಾಹಕರೊಬ್ಬರು ನಗರದ ಕೆನರಾ ಬ್ಯಾಂಕ್ ಪ್ರಧಾನ ಕಚೇರಿಗೆ ಬಂದು ದೂರು ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕೋಟೆಕಾರ್‌ನ ಸಫಲ್‌ ಎಂಬ ಗ್ರಾಹಕರೊಬ್ಬರು ಹತ್ತಿರದ ಕೆನರಾ ಬ್ಯಾಂಕ್ ಶಾಖೆಯಲ್ಲಿ ₹8 ಲಕ್ಷ ಇಟ್ಟಿದ್ದರು. 6 ತಿಂಗಳ ಬಳಿಕ ಔಷಧಿಗಾಗಿ ದುಡ್ಡು ತೆಗೆಯಲು ಬ್ಯಾಂಕ್‌ಗೆ ಬಂದಿದ್ದಾರೆ. ಅಧಿಕಾರಿಗಳು ಖುದ್ದಾಗಿ ಲಾಕರ್ ತೆರೆದಿದ್ದಾರೆ. ಲಾಕರ್ ಒಳಗೆ ನೋಡಿದರೆ ಮಳೆನೀರಿನಲ್ಲಿ ಮಿಂದಿರುವ ಸ್ಥಿತಿಯಲ್ಲಿದ್ದ ಹಣ ಸಂಪೂರ್ಣವಾಗಿ ಕಪ್ಪಾಗಿತ್ತು. ಏನಿದು ಎಂದು ತೆಗೆದು ನೋಡಿದರೆ ಗೆದ್ದಲು ಹಿಡಿದು ನೋಟುಗಳು ಚೂರಾಗಿ ಬಿದ್ದಿದೆ. ಎಲ್ಲ ನೋಟುಗಳು ಇದೇ ರೀತಿ ಆಗಿವೆ.

ಈ ಸುದ್ದಿ ಓದಿದ್ದೀರಾ? ವಿಜಯನಗರ | ಕನ್ನಡ ವಿಶ್ವವಿದ್ಯಾಲಯ ತಳಸಮುದಾಯಗಳ ಅಧ್ಯಯನ ಕ್ಷೇತ್ರ: ಡಾ ಎಫ್ ಟಿ ಹಳ್ಳಿಕೇರಿ

Advertisements

ಆರ್‌ಬಿಐ ನಿಯಮದ ಪ್ರಕಾರ ಹಣವನ್ನು ಲಾಕರ್‌ನಲ್ಲಿ ಇಡುವಂತಿಲ್ಲ. ಹೀಗಾಗಿ ಇದಕ್ಕೂ ನಮಗೂ ಸಂಬಂಧವಿಲ್ಲವೆಂದು ಬ್ಯಾಂಕ್‌ನವರು ಹೇಳಿದ್ದಾರೆ. ಹೀಗಾಗಿ ಸಫಲ್ ಕುಟುಂಬಸ್ಥರು ಬೆಂಗಳೂರಿಗೆ ಆಗಮಿಸಿ ಪ್ರಧಾನ ಕಚೇರಿಗೆ ದೂರು ನೀಡಿ,
ಹಳೆಯ ಕಟ್ಟಡ ನಿರ್ವಹಣೆ ಕೊರತೆಯಿಂದ ಸಮಸ್ಯೆಯಾಗಿದೆ. ಹೀಗಾಗಿ ಸರಿಪಡಿಸಬೇಕೆಂದು ಮನವಿ ಮಾಡಿದ್ದಾರೆ.

“ಲಾಕರ್‌ನಲ್ಲಿ ಹಣ ಇಡಬಾರದು ನಿಜ. ಆದರೆ ಬ್ಯಾಂಕ್‌ನಲ್ಲಿ ಹಣ ಇಟ್ಟರೆ ಸೇಫ್ ಎಂಬ ನಂಬಿಕೆಯಿಂದ ಇಟ್ಟರೆ ಹೀಗಾಗಿದೆ” ಎಂದು ಸಫಲ್ ಬೇಸರ ವ್ಯಕ್ತಪಡಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X