ಮಂಗಳೂರು | ಇಲಾಖಾಧಿಕಾರಿಗಳ ಹರಸಾಹಸ, ದಡ ಸೇರಿದ ಜೋಡಿ ಕಾಡಾನೆಗಳು

Date:

ಕೆಲವು ದಿನಗಳಿಂದ ನೆಕ್ಕಿಲಾಡಿ ಬಿಳಿಯೂರು ಭಾಗದಲ್ಲಿ ಕಾಣಿಸಿಕೊಂಡಿದ್ದ ಜೋಡಿ ಕಾಡಾನೆಗಳು ಭಾನುವಾರ ಬೆಳಿಗ್ಗೆ ಉಪ್ಪಿನಂಗಡಿಯ ನೇತ್ರಾವತಿ ನದಿಯಲ್ಲಿ ವಿಹರಿಸುತ್ತಿದ್ದವು. ಇತ್ತ ನದಿಯ ದಂಡೆಯ ಮೇಲೆ ಸೇರಿದ್ದ ಜನ ಸಮೂಹದಿಂದಾಗಿ ನದಿಯಲ್ಲೇ ದಿಗಂಧನಕ್ಕೀಡಾದ ಘಟನೆ ಜರುಗಿದೆ.

- Advertisement -

ಶನಿವಾರ ರಾತ್ರಿ ಸುರ್ಯದ ಸುಬ್ರಹ್ಮಣ್ಯ ಭಟ್ ಎಂಬವರ ತೋಟದ ಬಳಿ ಪ್ರತ್ಯಕ್ಷಗೊಂಡ ಕಾಡಾನೆಗಳು ರಾತ್ರಿ ಸರಳೀಕಟ್ಟೆ ಪಿಲಿಗೂಡು, ಅಂಬೊಟ್ಟು ಮಾರ್ಗವಾಗಿ ಇಳಂತಿಲ ಗ್ರಾಮದ ಅಂಡೆತಡ್ಕ ಎಂಬಲ್ಲಿಂದ ನೇತ್ರಾವತಿ ನದಿಗಿಳಿದಿದೆ. ಮುಂಜಾನೆ ಉಪ್ಪಿನಂಗಡಿ ಬಳಿಯ ಕೂಟೇಲುವಿನ ನೇತ್ರಾವತಿ ನದಿಯಲ್ಲಿ ಕಾಡಾನೆಗಳು ಇರುವುದನ್ನು ಕಂಡು ಆನೆಗಳನ್ನು ನೋಡಲು ನದಿ ಕಡೆಗೆ ಜನ ತಂಡೋಪತಂಡವಾಗಿ ಆಗಮಿಸಿದರು. ಜನಸಂದಣಿ ಕಂಡು ಅತ್ತಿತ್ತ ಹೋಗಲಾಗದೇ ನದಿಯ ಮಧ್ಯದ ದಿನ್ನೆಯಲ್ಲಿ ನಿಂತುಕೊಂಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಉಪ್ಪಿನಂಗಡಿಯಲ್ಲಿದ್ದ ಗೃಹರಕ್ಷಕ ದಳದ ಪ್ರವಾಹ ರಕ್ಷಣಾ ತಂಡದ ಬೋಟನ್ನು ಬಳಸಿಕೊಂಡು ನದಿಗಿಳಿದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಗಾಳಿಯಲ್ಲಿ ಗುಂಡು ಹಾರಿಸಿ ಆನೆಗಳು ಜನವಸತಿಯತ್ತ ಬಾರದಂತೆ ಬೆದರಿಸಲು ಯತ್ನಿಸಿದರು. ಒಟ್ಟಿನಲ್ಲಿ ದಿನವಿಡೀ ನದಿಯಲ್ಲಿ ಬೋಟ್‌ ಮೂಲಕ ಗುಂಡು ಹಾರಿಸುತ್ತಾ ದಡದಲ್ಲಿ ಸುಡುಮದ್ದು ಸಿಡಿಸುವ ಮೂಲಕ ಆನೆಗಳನ್ನು ಉಪ್ಪಿನಂಗಡಿ ಪೇಟೆಯತ್ತ ಸಂಚರಿಸದಂತೆ ಅಧಿಕಾರಿಗಳು ನಿರಂತರ ಪ್ರಯತ್ನ ನಡೆಸಿದರು. ಸಂಜೆ ಹೊತ್ತಿಗೆ ಆನೆ ನದಿಯಲ್ಲೇ ಕೂಟೇಲು ಕಡೆಯಿಂದ ಪಂಜಳ ತನಕ ಸಂಚರಿಸುವುದು ಹಿಂದಿರುಗುವುದು ಮಾಡುತ್ತಲೇ ಇದ್ದ ಕಾರಣ ಇಲಾಖಾಧಿಕಾರಿಗಳು ಆನೆ ಓಡಿಸುವ ಪ್ರಯತ್ನ ಮಾಡುತ್ತಿದ್ದರು. ಈ ಹರಸಾಹಸದಿಂದ ಕಾಡಾನೆಗಳು ಪಂಜಳ ತಲುಪಿವೆ.

ಸ್ಥಳದಲ್ಲಿ ಮಂಗಳೂರು ಉಪ ವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಶಿಕಾಂತ್ ವಿಭೂತೆ, ಎಸಿಎಫ್‌ ಸುಬ್ಬಯ್ಯ ನಾಯ್ಕ ಪುತ್ತೂರು ವಲಯ ಅರಣ್ಯಾಧಿಕಾರಿ ಕಿರಣ್, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ರಾಘವೇಂದ್ರ, ಪೆಲೀಸ್ ಅಧಿಕಾರಿಗಳು, ಸುಖಿತಾ ಶೆಟ್ಟಿ, ದಿನೇಶ್ ಬಿ. ನೇತೃತ್ವದ ಗೃಹರಕ್ಷಕ ದಳದ ತಂಡ ಘಟನಾ ಸ್ಥಳದಲ್ಲಿದ್ದು, ಆನೆಗಳ ಸಂಚಾರ ನಿಗಾವಹಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...