ಮಂಗಳೂರು ವಿಶ್ವವಿದ್ಯಾಲಯದ ಘಟಕ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಮಾ.7ರಂದು ʼಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ತಯಾರಿʼ ಎಂಬ ವಿಷಯದ ಕುರಿತಾಗಿ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ಕಾರ್ಯಾಗಾರವು ಮಾ.7ರಂದು ಬೆಳಗ್ಗೆ 10.30ಕ್ಕೆ ನಗರದ ಶಿವರಾಮ ಕಾರಂತ ಸಭಾಭವನದಲ್ಲಿ ಶುರುವಾಗಲಿದೆ.
ಕನ್ನಡ ಸಂಘ, ಉದ್ಯೋಗ ಮತ್ತು ವೃತ್ತಿ ಸಮಾಲೋಚನಾ ಕೋಶ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಮಂಗಳೂರು ನಗರ ಹೋಬಳಿ ಘಟಕದ ಸಹಯೋಗದೊಂದಿಗೆ ಆಯೋಜಿಸಿರುವ ಈ ಕಾರ್ಯಾಗಾರವನ್ನು ಮಂಗಳೂರು ವಿವಿ ಕುಲಸಚಿವ ರಾಜು ಮೊಗವೀರ ಉದ್ಘಾಟಿಸಲಿದ್ದು, ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.

ಇದನ್ನೂ ಓದಿ: ಮಂಗಳೂರು | ʼಮಿಲೇನಿಯಮ್ ಮೈನಾʼ ಬಿರುದು ಮುಡಿಗೇರಿಸಿಕೊಂಡ ಕೊಂಕಣ್ ಮೈನಾ ಮೀನಾ ರೆಬಿಂಬಸ್
ಕಾರ್ಯಾಗಾರದಲ್ಲಿ ಮೀನುಗಾರಿಕಾ ಇಲಾಖೆ ಸಹಾಯಕ ನಿರ್ದೇಶಕಿ ಮಿಲನ ಕೆ ಭರತ್, ಕಸಾಪ ಸಂಘಟನಾ ಕಾರ್ಯದರ್ಶಿ ಲ| ಚಂದ್ರಹಾಸ ಶೆಟ್ಟಿ, ಮಂಗಳೂರು ವಿವಿಯ ಕನ್ನಡ ಭಾಷಾ ವಿಭಾಗದ ಮುಖ್ಯಸ್ಥೆ ಡಾ. ಎಲ್ ಲಕ್ಷ್ಮೀದೇವಿ ಸೇರಿದಂತೆ ಅನೇಕ ಮುಖಂಡರು ಇರಲಿದ್ದಾರೆ.
