ಮಂಗಳೂರು | ಕೇರಳ ಮೂಲದ ಇಬ್ಬರು ಸೈಬರ್‌ ವಂಚಕರ ಸೆರೆ

Date:

Advertisements

ಷೇರುಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಪಡೆಯಬಹುದು ಎಂಬ ವಾಟ್ಸ್ಯಾಪ್‌ ಸಂದೇಶ ಕಳುಹಿಸಿ ಲಕ್ಷಾಂತರ ರೂಪಾಯಿ ವಂಚಿಸಿದ್ದ ಕೇರಳ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಸುಳ್ಳು ವಾಟ್ಸ್ಯಾಪ್‌ ಮೆಸೇಜ್‌ ನೋಡಿ ವ್ಯಕ್ತಿಯೊಬ್ಬರು ಹಂತ ಹಂತವಾಗಿ ₹77,96,322.08 ಹಣ ಪಾವತಿಸಿದ್ದರು. ಆದರೆ ಆರೋಪಿಗಳು ಲಾಭಾಂಶ ನೀಡದೆ ವಂಚಿಸಿದ್ದರು. ಈ ಬಗ್ಗೆ ಹಣ ಕಳೆದುಕೊಂಡ ವ್ಯಕ್ತಿಯು ಸೆನ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಮಂಗಳೂರು | ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿ ಕೇರಳದ ಶವಾಗಾರದಲ್ಲಿ ಜೀವಂತ!

Advertisements

ವ್ಯಕ್ತಿಯಿಂದ ಪಾವತಿಯಾಗಿದ್ದ ಹಣದ ವಿವರಕ್ಕೆ ಸಂಬಂಧಿಸಿ ಬ್ಯಾಂಕ್ ಖಾತೆಯನ್ನು ಪರಿಶೀಲಿಸಿದಾಗ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿಗೆ ₹26,27,114.4 ವರ್ಗಾವಣೆಯಾಗಿತ್ತು. ಬಳಿಕ ಈ ಖಾತೆಯಿಂದ ಉಮರ್ ವಲಿಯ ಪರಂಬತ್ ಎಂಬಾತನ ಬ್ಯಾಂಕ್ ಖಾತೆಗೆ ₹6 ಲಕ್ಷ ಪಾವತಿಯಾದುದು ಬೆಳಕಿಗೆ ಬಂದಿತ್ತು. ತನಿಖೆ ಕೈಗೊಂಡಾಗ ರಿಯಾಝ್ ಎಂ ವಿ ಎಂಬಾತ ಹಣವನ್ನು ವರ್ಗಾವಣೆ ಮಾಡಿಸಿದ್ದ ಎಂದು ತಿಳಿದುಬಂದಿದೆ. ಸದ್ಯ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X