ಮಂಗಳೂರು | ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಉಮರ್ ಯು ಹೆಚ್ ಅಧಿಕಾರ ಸ್ವೀಕಾರ

Date:

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಇತ್ತೀಚೆಗಷ್ಟೇ ನೇಮಕಗೊಂಡಿದ್ದ ಉಮರ್ ಯು ಹೆಚ್ ಅವರು ಇಂದು (ಜೂನ್ 13) ಮಂಗಳೂರಿನ ತಾಲೂಕು ಪಂಚಾಯಿತಿ ಕಟ್ಟಡದಲ್ಲಿರುವ ಅಕಾಡೆಮಿಯ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, “ಬ್ಯಾರಿ ಸಮುದಾಯದ ಬಹುವರ್ಷಗಳ ಕನಸಾಗಿರುವ ಬ್ಯಾರಿ ಭವನ ನಿರ್ಮಾಣವನ್ನು ನನ್ನ ಅವಧಿಯಲ್ಲಿ ನನಸಾಗಿಸುತ್ತೇನೆ” ಎಂದು ಉಮರ್ ಯು.ಹೆಚ್. ತಿಳಿಸಿದ್ದಾರೆ.

“ಬ್ಯಾರಿ ಭವನಕ್ಕೆ ಜಾಗ ಇದ್ದು 6 ಕೋಟಿ ರೂ. ಹಣವೂ ಇದೆ. ಭವನ ನಿರ್ಮಾಣದ ಜೊತೆಗೆ ಕೊಂಕಣಿ, ತುಳು ಅಕಾಡೆಮಿಯಲ್ಲಿ ಇರುವಂತೆ ವಸ್ತು ಸಂಗ್ರಹಾಲಯ ರೂಪಿಸಲೂ ಆದ್ಯತೆ ನೀಡಲಾಗುವುದು. ಪುಸ್ತಕ ಭಂಡಾರ, ಸುಸಜ್ಜಿತ ಗ್ರಂಥಾಲಯದ ನಿರ್ಮಾಣದ ಕನಸೂ ಇದೆ. ಅಕಾಡೆಮಿ ಸದಸ್ಯರ ಜೊತೆ ಚರ್ಚಿಸಿ ಇದನ್ನು ಅನುಷ್ಠಾನಗೊಳಿಸಲಾಗುವುದು” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಉಳಿದ ಅಕಾಡೆಮಿ ಜೊತೆ ಸಮನ್ವಯ ಸಾಧಿಸುವ ಜೊತೆಗೆ ತುಳುನಾಡಿನ ಬಹುತ್ವ ಸಹಬಾಳ್ವೆ ಗಟ್ಟಿಗೊಳಿಸುವ ದಿಸೆಯಲ್ಲಿ ಕೆಲಸ ಆಗಬೇಕಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮ, ಇತರ ಕಾರ್ಯಕ್ರಮಗಳ ಖರ್ಚು ಕಡಿತಗೊಳಿಸಿ ಸಂಶೋಧನೆಗೆ ಹೆಚ್ಚು ಒತ್ತು ನೀಡುವ ಉದ್ದೇಶ ಇದೆ” ಎಂದು ಉಮರ್ ಯು ಹೆಚ್ ಹೇಳಿದರು.

ಮಂಗಳೂರು ತಾಲೂಕು ಪಂಚಾಯತ್ ಕಟ್ಟಡದಲ್ಲಿರುವ ಬ್ಯಾರಿ ಅಕಾಡೆಮಿಯ ಕಚೇರಿಯಲ್ಲಿ ಅಕಾಡೆಮಿಯ ರಿಜಿಸ್ಟ್ರಾರ್ ರಾಜೇಶ್ . ಜಿ ಅವರು ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಡುವ ಸ್ಥಾನದಲ್ಲಿರುವವರು ಒಳ್ಳೆಯದನ್ನೇ ಕೊಡಬೇಕು ಎಂದು ರಾಜ್ ಹೇಳಿದ್ದು ಯಾರಿಗೆ?

ಈ ಸಂದರ್ಭ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ರಹೀಂ ಉಚ್ಚಿಲ್, ಮುಹಮ್ಮದ್ ಹನೀಫ್, ತುಳು ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ, ಕೊಂಕಣಿ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್‌ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ: ರೈತ ಮುಖಂಡ ಚಾಮರಸ ಮಾಲೀ ಪಾಟೀಲ್

"ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ, ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಹಗರಣಗಳ...

ಚಿಕ್ಕನಾಯಕನಹಳ್ಳಿ | ವೆಲ್ಡಿಂಗ್ ಮಾಲೀಕರ-ಕೆಲಸಗಾರರ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟನೆ

ಚಿಕ್ಕನಾಯಕನಹಳ್ಳಿ ಪಟ್ಟಣದ ಮತಿಘಟ್ಟ ಗೇಟ್ ಬಳಿಯಿರುವ ವೀರಭದ್ರೇಶ್ವರ ಇಂಜಿನಿಯರಿಂಗ್ ವರ್ಕ್ಸ್ ಆವರಣದಲ್ಲಿ...

ಶಿವಮೊಗ್ಗ | ವ್ಯಾಪಕ ಮಳೆ ಹಿನ್ನೆಲೆ: ಜು.16ರಂದು ಮೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ, ತೀರ್ಥಹಳ್ಳಿ ತಾಲೂಕಿನಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ...

ಕಲಬುರಗಿ | ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಸಾವು; ಕುಟುಂಬಸ್ಥರಿಂದ ಪ್ರತಿಭಟನೆ

ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೋರ್ವರು ಮೃತಪಟ್ಟಿದ್ದು, ವೈದ್ಯರು ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾರೆಂದು...