ಮಂಗಳೂರು | ಕೋಮುವಾದದ ಹೆಸರಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ನಿಲ್ಲಲಿ: ರಾಧಾ ಮೂಡಬಿದ್ರೆ

Date:

Advertisements

ಕೋಮುವಾದದ ಹೆಸರಿನಲ್ಲಿ ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯಗಳು ನಿಲ್ಲಬೇಕು. ಇದರ ವಿರುದ್ಧ ಮಹಿಳೆಯರು ಸಂಘಟಿತ ಹೋರಾಟ ನಡೆಸಬೇಕು ಎಂದು ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್ (ಸಿಐಟಿಯು) ಕರ್ನಾಟಕ ರಾಜ್ಯ ಉಪಾಧ್ಯಕ್ಷರೂ ಆಗಿರುವ ಪುತ್ತಿಗೆ ಗ್ರಾಮ ಪಂಚಾಯತಿ ಅಧ್ಯಕ್ಷಿ ರಾಧಾ ಮೂಡಬಿದ್ರೆ ಅಭಿಪ್ರಾಯಪಟ್ಟರು.

ಮಂಗಳೂರಿನ ಮಿನಿ ವಿಧಾನಸೌಧದ ಎದುರು ಸಿಐಟಿಯು ಸಂಯೋಜಿತಗೊಂಡಿರುವ ʼದುಡಿಯುವ ಮಹಿಳೆಯರ ಸಮನ್ವಯ ಸಮಿತಿʼ ಆಶ್ರಯದಲ್ಲಿ ಜರುಗಿದ 117ನೇ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ದೇಶದ ಐಕ್ಯತೆಯನ್ನು ಒಡೆಯಲು ಸಂಚು ರೂಪಿಸುತ್ತಿರುವ ಕೋಮುವಾದಿ ಶಕ್ತಿಗಳು ತಮ್ಮ ಬೇಳೆ ಬೇಯಿಸಿಕೊಳ್ಳಲು ಮಹಿಳೆಯರನ್ನು ಪ್ರಧಾನ ಅಸ್ತ್ರವನ್ನಾಗಿಸಿದೆ ಮಾತ್ರವಲ್ಲದೆ ಕೋಮುವಾದದ ಪಿಡುಗಿಗೆ ಮೊದಲ ಬಲಿ ಮಹಿಳೆಯೇ ಆಗಿದ್ದಾಳೆ. ಎಲ್ಲಾ ಕ್ಷೇತ್ರಗಳಲ್ಲೂ ಸದೃಢವಾಗಿ ಬೆಳೆಯುತ್ತಿರುವ ಮಹಿಳೆಗೆ ರಕ್ಷಣೆ ಇಲ್ಲದಂತಾಗಿದೆ. ಮಹಿಳೆ ಅಬಲೆ ಎನ್ನುವ ಮನಸ್ಥಿತಿ ದೂರಗಬೇಕು” ಎಂದರು.

Advertisements

ದುಡಿಯುವ ಮಹಿಳೆಯರ ಸಮನ್ವಯ ಸಮಿತಿಯ ಜಿಲ್ಲಾ ನಾಯಕಿ ಜಯಂತಿ ಬಿ ಶೆಟ್ಟಿಯವರು ಮಾತನಾಡಿ, “ಪ್ರತಿಯೊಂದು ಸಂದರ್ಭದಲ್ಲಿಯೂ ಮಹಿಳೆಯರನ್ನು ಅತ್ಯಂತ ತುಚ್ಛವಾಗಿ ಕಾಣುವ ಈ ಸಮಾಜದಲ್ಲಿ ಮಹಿಳಾ ಸಬಲೀಕರಣದ ಬಗ್ಗೆ ಹೆಚ್ಚೆಚ್ಚು ಚರ್ಚಿಸುವ ಮೂಲಕ ಮಹಿಳಾ ಸಮುದಾಯವನ್ನು ಮುಖ್ಯವಾಹಿನಿಗೆ ತರುವ ಕೆಲಸವನ್ನು ಸಮಾಜದ ಪ್ರತಿಯೊಬ್ಬರೂ ಮಾಡಬೇಕಾಗಿದೆ” ಎಂದು ಹೇಳಿದರು.

WhatsApp Image 2025 03 15 at 4.32.19 PM

ಸಿಐಟಿಯು ಜಿಲ್ಲಾ ಹಿರಿಯ ನಾಯಕಿ ಪದ್ಮಾವತಿ ಶೆಟ್ಟಿಯವರು ಮಾತನಾಡುತ್ತಾ, “ಜಾಗತೀಕರಣದ ಕಪಿಮುಷ್ಠಿಯಲ್ಲಿ ನಲುಗುತ್ತಿರುವ ಭಾರತದಲ್ಲಿ ಮಹಿಳೆಯರ ದುಡಿಮೆಯನ್ನು ಅತ್ಯಂತ ಕೀಳಾಗಿ ಕಾಣಲಾಗುತ್ತಿದೆ. ಕಡಿಮೆ ಕೂಲಿಗೆ ಗರಿಷ್ಠ ಅವಧಿಯಲ್ಲಿ ಮಹಿಳೆಯರನ್ನು ದುಡಿಸುವ ಮೂಲಕ ಮತ್ತೆ ಮಹಿಳೆಯರನ್ನು ಗುಲಾಮರನ್ನಾಗಿಸುವ ವ್ಯವಸ್ಥೆಯನ್ನು ಸ್ಪಷ್ಟಸಲಾಗುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿ, “ಮಹಿಳೆಯರ ಭಾಗವಹಿಸುವಿಕೆಯಿಲ್ಲದೆ ಸಮಾಜದ ಅಭಿವೃದ್ಧಿ ಯಾವತ್ತೂ ಸಾಧ್ಯವಿಲ್ಲ. ಪ್ರತಿಯೊಂದು ದೇಶದ ಆರ್ಥಿಕತೆಯಲ್ಲಿ ಪ್ರಧಾನ ಪಾತ್ರ ವಹಿಸುವ ಮಹಿಳಾ ವಿಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಆಳುವ ವರ್ಗಗಳು ವಿಶೇಷ ಗಮನ ನೀಡಬೇಕಾಗಿದೆ” ಎಂದು ಹೇಳಿದರು.

ಕಾರ್ಯಕ್ರಮವನ್ನುದ್ದೇಶಿಸಿ ದುಡಿಯುವ ಮಹಿಳೆಯರ ಸಮನ್ವಯ ಸಮಿತಿಯ ಮುಖಂಡರಾದ ಈಶ್ವರಿ‌ ಬೆಳ್ತಂಗಡಿ, ನಳಿನಾಕ್ಷಿ ಶೆಟ್ಟಿ, ಭಾರತಿ ಬೋಳಾರ, ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಮುಖಂಡರಾದ ಕಿರಣಪ್ರಭಾ, ಅಸುಂತ ಡಿಸೋಜರವರು ಮಾತನಾಡಿದರು. ಮಹಿಳಾ ವಿಮೋಚನೆ ಹಾಗೂ ಮಹಿಳೆಯರ ಸಂಕಷ್ಟಗಳ ಬಗ್ಗೆ ಹಾಡುಗಳನ್ನು ಮಹಿಳಾ ಮುಖಂಡರಾದ ಗಿರಿಜಾ ಮೂಡಬಿದ್ರೆ, ಜಯಶ್ರೀ ಬೆಳ್ತಂಗಡಿ, ವಸಂತಿ ಕುಪ್ಪೆಪದವುರವರು ಹಾಡಿದರು.

ಇದನ್ನೂ ಓದಿ: ಮಂಗಳೂರು | ಜಾದೂ ಕಲಾವಿದ ಕುದ್ರೋಳಿ ಗಣೇಶ್‌ಗೆ ಆಂಧ್ರಪ್ರದೇಶದ ಪ್ರತಿಷ್ಠಿತ ಪ್ರಶಸ್ತಿ

ಕಾರ್ಯಕ್ರಮದಲ್ಲಿ ಸಿಐಟಿಯು ಜಿಲ್ಲಾ ನಾಯಕ ಜೆ ಬಾಲಕೃಷ್ಣ ಶೆಟ್ಟಿ, ವಸಂತ ಆಚಾರಿ, ರೈತ ನಾಯಕ ಸದಾಶಿವದಾಸ್, ರಿಜ್ವಾನ್ ಹರೇಕಳ, ಮಹಿಳಾ ಸಂಘಟನೆಗಳ ಮುಖಂಡರಾದ ಪ್ರಮೀಳಾ ದೇವಾಡಿಗ, ಫ್ಲೇವಿ ಕ್ರಾಸ್ತಾ ಅತ್ತಾವರ, ಗ್ರೆಟ್ಟಾ ಟೀಚರ್, ವಿಲಾಸಿನಿ ತೊಕ್ಕೋಟ್ಟು, ಪ್ರಮೋದಿನಿ, ಜಯಲಕ್ಷ್ಮಿ, ರೋಹಿಣಿ, ಗೀತಾ, ಭವಾನಿ ವಾಮಂಜೂರು, ಲಕ್ಷ್ಮಿ ಮೂಡಬಿದ್ರೆ, ಲೋಲಾಕ್ಷಿ ಬಂಟ್ವಾಳ, ಮೀಳಾ ಶಕ್ತಿನಗರ ಭಾಗವಹಿಸಿದ್ದರು.

WhatsApp Image 2025 05 16 at 6.54.26 PM
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X