ಮಂಗಳೂರು | ಕಲ್ಲಿದ್ದಲು ಬಳಸುತ್ತಿರುವ ಉಳ್ಳಾಲದ ಫಿಶ್‌ಮಿಲ್‌ ಮುಚ್ಚದಿದ್ದಲ್ಲಿ ಹೋರಾಟ : ಬಿ.ಕೆ ಇಮ್ತಿಯಾಝ್

Date:

ಉಳ್ಳಾಲದಲ್ಲಿ ಕಲ್ಲಿದ್ದಲು ಬಳಸುತ್ತಿರುವ ಫಿಶ್‌ಮಿಲ್‌ಗಳಿಂದಾಗಿ ಕೋಟೆಪುರ, ಮುಳಿಹಿತ್ಲು ಭಾಗದಲ್ಲಿ ವ್ಯಾಪಕವಾಗಿ ಆರೋಗ್ಯ ಸಮಸ್ಯೆಗಳು ಕಾಣಿಸುತ್ತಿದೆ. ಕಲ್ಲಿದ್ದಲು ಬಳಸುತ್ತಿರುವ ಉಳ್ಳಾಲದ ಫಿಶ್‌ಮಿಲ್‌ ಮುಚ್ಚದಿದ್ದಲ್ಲಿ ಹೋರಾಟ ನಡೆಸಲಾಗುವುದು ಎಂದು ಡಿವೈಎಫ್‌ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಬಿ.ಕೆ.ಇಮ್ತಿಯಾಝ್ ಎಚ್ಚರಿಕೆ ನೀಡಿದ್ದಾರೆ.

- Advertisement -

ತೊಕ್ಕೊಟ್ಟು ಸೇವಾಸೌಧದಲ್ಲಿರುವ ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಿಆರ್‌ಝೆಡ್ ಕಾನೂನು ಉಲ್ಲಂಘಿಸಿ ನಿರ್ಮಿಸಲಾಗಿರುವ ಕಟ್ಟಡಗಳಿಂದಾಗಿ ನದಿಯೇ ಮುಚ್ಚಿಹೋಗಿದೆ. ಕೋಟೆಪುರ-ಮುಳಿಹಿತ್ಲು ನಡುವೆ ದೋಣಿ ಸಂಪರ್ಕ ಇಲ್ಲದಂಥ ಸ್ಥಿತಿ ನಿರ್ಮಾಣವಾಗಲಿದೆ. ಜಿಲ್ಲಾಡಳಿತ ಕಾನೂನು ಕ್ರಮ ಕೈಗೊಳ್ಳದೆ ಇದ್ದರೆ ನಿರಂತರವಾಗಿ ಚಳವಳಿ ನಡೆಸಲಾಗುವುದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಕಲ್ಲಿದ್ದಲು ಬಳಕೆಯಿಂದಾಗಿ ದೀರ್ಘಕಾಲದ ಶ್ವಾಸಕೋಶದ ಕಾಯಿಲೆ, ರಕ್ತದೊತ್ತಡ ಹೃದ್ರೋಗ , ತುರಿಕೆ ಅಲರ್ಜಿ, ಚರ್ಮ ಕೆಂಪಾಗುವ ರೋಗ ಸಾಧ್ಯತೆಗಳಿವೆ ಅನ್ನುವುದು ಮಾಹಿತಿ ಹಕ್ಕಿನಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಪಡೆದ ವರದಿಯಿಂದ ಬಹಿರಂಗವಾಗಿದೆ. ಯುನೈಟೆಡ್ ಮೆರೈನ್ ಮತ್ತು ಇಂಡೋ ಫಿಶ್ ಮಿಲ್ ಕಲ್ಲಿದ್ದಲು ಬಳಸುವ ಮೂಲಕ ಸ್ಥಳೀಯರ ಆರೋಗ್ಯದೊಂದಿಗೆ ಚೆಲ್ಲಾಟವಾಡುತ್ತಿದೆ. ಪೊಲೀಸ್ ಇಲಾಖೆಗೆ ಪ್ರಕರಣ ದಾಖಲಿಸುವಂತೆ ಆರೋಗ್ಯದ ವರದಿಯನ್ನು ನೀಡಿದರೂ ಕ್ರಮಗಳನ್ನು ಕೈಗೊಳ್ಳಲಾಗುತ್ತಿಲ್ಲ” ಎಂದು ದೂರಿದರು.

ಮಂಗಳೂರು

ಹೋರಾಟ ನಡೆಸುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸಿ ದಬ್ಬಾಳಿಕೆ ನಡೆಸಲಾಗುತ್ತಿದೆ. 2007ರ ವರದಿಯಲ್ಲಿಯೂ ಕೋಟೆಪುರದಲ್ಲಿನ ಫಿಶ್ ಆಯಿಲ್ ಮಿಲ್ ಎಲ್ಲವೂ ಅನಧಿಕೃತ ಅನ್ನುವ ಉಲ್ಲೇಖ ಸರಕಾರ ನೀಡಿರುವ ವರದಿಯಲ್ಲಿದೆ. ಇಂದು ಕೂಡಾ ಅದೇ ಅನಧಿಕೃತ ಮುಂದುವರಿದು ಸಿಆರ್‌ಝೆಡ್ ಕಾನೂನುಗಳನ್ನು ಉಲ್ಲಂಘಿಸಿ ವರ್ಷ ಕಳೆದ ಹಾಗೆ ಹೊಸ ಕಟ್ಟಡಗಳ ನಿರ್ಮಾಣವಾಗುತ್ತಿದೆ. ಬಾಯ್ಲರ್ ಸ್ಥಾಪನೆ ನಡೆಸುವಾಗಲೂ ಇಲಾಖೆಗಳೆಲ್ಲವೂ ಫಿಶ್‌ಮಿಲ್‌ನವರಿಗೆ ಬೇಕಾದಂತಹ ರೀತಿಯಲ್ಲಿ ವರದಿಯನ್ನು ರಚಿಸಿ ನೀಡಿದ್ದಾರೆ ಅಲ್ಲದೆ ಖಾಸಗಿ ಆಸ್ಪತ್ರೆಯಿಂದ ವರದಿ ದಾಖಲಿಸಿ ಸ್ಥಳೀಯಾಡಳಿತದಿಂದ ನಿರಾಕ್ಷೇಪಣಾ ಪತ್ರ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಕಳ್ಳತನವಾಗಿದ್ದ 672 ಮೊಬೈಲ್ ಪತ್ತೆ ಹಚ್ಚಿ ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸರು

ಶಬ್ದಮಾಲಿನ್ಯದ ಜೊತೆಗೆ ದುರ್ವಾಸನೆಯೂ ವ್ಯಾಪಕವಾಗಿ ಹಬ್ಬಿ, ಸಾರ್ವಜನಿಕರಿಂದ ದೂರುಗಳ ಸರಮಾಲೆ ಜಿಲ್ಲಾಡಳಿತಕ್ಕೆ ಹೋದರೂ ಕ್ರಮ ಈವರೆಗೆ ಕೈಗೊಂಡಿಲ್ಲ. ಕಲ್ಲಿದ್ದಲು ಬಳಸುವ ಮೀನಿನ ಕಾರ್ಖಾನೆಗಳು ಮುಚ್ಚಲು ಜಿಲ್ಲಾಡಳಿತ ವಿಫಲವಾದಲ್ಲಿ ಸಾರ್ವಜನಿಕರು, ಸಂಘ ಸಂಸ್ಥೆಗಳ ಸಹಕಾರದಲ್ಲಿ ಜಿಲ್ಲಾಡಳಿತ, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ವಿವಿಧ ಹಂತದ ಹೋರಾಟಗಳನ್ನು ನಡೆಸಲಿದೆ ಎಂದು ಎಚ್ಚರಿಸಿದರು.

ಈ ಸಂದರ್ಭ ಉಳ್ಳಾಲ ತಾಲೂಕು ಕಾರ್ಯದರ್ಶಿ ರಿಝ್ವಾನ್ ಹರೇಕಳ, ಮೊಹಮ್ಮದ್ ಅಶ್ರಫ್, ರಝಾಕ್ ಮುಡಿಪು, ಮೊಹಮ್ಮದ್ ಮುಸಾಫಿರ್ ವಾಕರ್, ನೌಫಾಲ್ ಕೋಟೆಪುರ ಅಶ್ಫಾಕ್ ಕೋಟೆಪುರ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...