ಮಂಗಳೂರು | ಅಸಮರ್ಪಕ ರಸ್ತೆಯಿಂದಾಗಿ ಸ್ಕಿಡ್ ಆಗಿ ಬಿದ್ದ ಬೈಕ್: ಟ್ಯಾಂಕರ್ ಹರಿದು ಮಹಿಳೆ ಮೃತ್ಯು

Date:

ಅಸಮರ್ಪಕ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ದ್ವಿಚಕ್ರ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ವೇಳೆ ಟ್ಯಾಂಕರ್‌ವೊಂದರ ಅಡಿಗೆ ಬಿದ್ದ ಪರಿಣಾಮ, ಹಿಂಬದಿ ಸವಾರರಾಗಿದ್ದ ಮಹಿಳೆಯೋರ್ವರು ಮೃತಪಟ್ಟ ಘಟನೆ ಮಂಗಳೂರು ನಗರದ ಸಮೀಪದ ತೊಕ್ಕೊಟ್ಟುವಿನಲ್ಲಿ ಶನಿವಾರ ಸಂಜೆ 5ರ ಸುಮಾರಿಗೆ ನಡೆದಿದೆ.

- Advertisement -

ಘಟನೆಯು ತೊಕ್ಕೊಟ್ಟು – ಚೆಂಬುಗುಡ್ಡೆ ರಸ್ತೆಯಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಸುರತ್ಕಲ್ ಸಮೀಪದ ಕೃಷ್ಣಾಪುರದ ಮಹಿಳೆ ರಹಮತ್(47) ಎಂದು ಗುರುತಿಸಲಾಗಿದೆ. ಬೈಕ್ ಸವಾರರಾಗಿದ್ದ ಅವರ ಪತಿ ಅಬ್ದುಲ್ ರಶೀದ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಘಟನೆ ನಡೆದ ಕೂಡಲೇ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಘಟನೆಯ ಬಳಿಕ ಸ್ಥಳದಲ್ಲಿ ನೂರಾರು ಸಾರ್ವಜನಿಕರು ಆಕ್ರೋಶಗೊಂಡು ಸೇರಿದ್ದರಿಂದ, ಟ್ರಾಫಿಕ್ ಜಾಮ್ ಉಂಟಾಯಿತು.

ಇದನ್ನು ಓದಿದ್ದೀರಾ? ಚೀನಾ ಕಂಪನಿಯ ಲಾಭಕ್ಕಾಗಿ ಬಿಎಸ್‌ವೈ, ಶ್ರೀರಾಮುಲು ಭ್ರಷ್ಟಾಚಾರ!

ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಉಳ್ಳಾಲ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಸದ್ಯ ಮಹಿಳೆಯ ಮೃತದೇಹವನ್ನು ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದ್ದು, ಪೊಲೀಸರ ಪ್ರಕ್ರಿಯೆ ಮುಗಿದ ಬಳಿಕ ಕುಟುಂಬಕ್ಕೆ ಹಸ್ತಾಂತರಿಸಲಿದ್ದೇವೆ ಎಂದು ಆಸ್ಪತ್ರೆಯ ಸಿಬ್ಬಂದಿ ಈ ದಿನ.ಕಾಮ್‌ಗೆ ಮಾಹಿತಿ ನೀಡಿದ್ದಾರೆ.

pilar

“ಮಂಗಳೂರು ನಗರದಿಂದ ದೇರಳಕಟ್ಟೆಗೆ ತೆರಳುವ ತೊಕ್ಕೊಟ್ಟು – ಚೆಂಬುಗುಡ್ಡೆಯ ರಸ್ತೆಯು ಪ್ರಮುಖ ರಸ್ತೆಯಾಗಿದ್ದು, ಪ್ರಮುಖ ಮೂರು ನಾಲ್ಕು ಆಸ್ಪತ್ರೆ, ಕಾಲೇಜು, ವಿವಿಗಳನ್ನು ಸಂಪರ್ಕಿಸುತ್ತದೆ. ಇಲ್ಲಿನ ರಸ್ತೆಯು ಸಂಪೂರ್ಣ ಹಾಳಾಗಿ, ಸುಮಾರು ವರ್ಷಗಳೇ ಕಳೆದಿದೆ. ಆದರೂ ಕೂಡ, ಉಳ್ಳಾಲದ ಶಾಸಕರಾದ ಸ್ಪೀಕರ್ ಯು ಟಿ ಖಾದರ್ ಅಗಲೀ, ಉಳ್ಳಾಲ ನಗರಸಭೆಯ ಅಧಿಕಾರಿಗಳಾಗಲೀ ಈವರೆಗೆ ಕ್ರಮ ಕೈಗೊಂಡಿಲ್ಲ. ಚೊಂಬುಗುಡ್ಡೆ ರಸ್ತೆ ಸರಿಯಾಗಲು ಇನ್ನೆಷ್ಟು ಜನರ ಪ್ರಾಣ ಹೋಗಬೇಕು” ಎಂದು ಈ ದಿನ.ಕಾಮ್‌ ಜೊತೆಗೆ ಮಾತನಾಡಿದ ಸ್ಥಳೀಯ ನಿವಾಸಿ ನಿಝಾಮುದ್ದೀನ್ ಆಕ್ರೋಶ ಹೊರಹಾಕಿದ್ದಾರೆ.

“ಇಂದಿನ ಘಟನೆಗೆ ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯವೇ ಕಾರಣ. ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ಪರಿಹಾರ ನೀಡಬೇಕು. ಕೂಡಲೇ ಚೊಂಬುಗುಡ್ಡೆ ರಸ್ತೆಯನ್ನು ಸರಿಪಡಿಸಲು ಶಾಸಕ ಯು ಟಿ ಖಾದರ್ ಮುತುವರ್ಜಿ ವಹಿಸಬೇಕು” ಎಂದು ಸ್ಥಳೀಯ ತರಕಾರಿ ವ್ಯಾಪಾರಿಯೋರ್ವರು ಈ ದಿನ.ಕಾಮ್ ಮೂಲಕ ಒತ್ತಾಯಿಸಿದ್ದಾರೆ.

ಮಮಮಮ
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...