ಮಂಗಳೂರು | ಚಲಿಸುತ್ತಿದ್ದ ಬಸ್‌ನಲ್ಲಿ ಯುವತಿ ಮೇಲೆ ಕಂಡಕ್ಟರ್‌ನಿಂದ ಲೈಂಗಿಕ ದೌರ್ಜನ್ಯ

Date:

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುವ ವೇಳೆ ನಿದ್ದೆಯಲ್ಲಿದ್ದ ಯುವತಿಯ ಮೇಲೆ ಬಸ್‌ನ ಕಂಡಕ್ಟರ್ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಘಟನೆಯ ವಿಡಿಯೋ ಬೆಳಕಿಗೆ ಬಂದಿದ್ದು, ಆರೋಪಿ ಕಂಡಕ್ಟರ್‌ನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

- Advertisement -

ಆರೋಪಿ ಕಂಡಕ್ಟರ್‌ನನ್ನು ಬಾಗಲಕೋಟೆ ಮೂಲದ ಪ್ರದೀಪ್ ಎಂದು ಹೆಸರಿಸಲಾಗಿದೆ. ಆತ ಮಂಗಳೂರು ಡಿಪೋದಲ್ಲಿ ಕೆಲಸ ಮಾಡುತ್ತಿದ್ದನೆಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

ಹಂತಕ ಗೋಡ್ಸೆಯ ಹೇಳಿಕೆಯೇ ಇತಿಹಾಸವಲ್ಲ; ಸ್ವಾತಂತ್ರ್ಯ ಹೋರಾಟಗಾರರ ಚಾರಿತ್ರ್ಯಹರಣಕ್ಕೆ...

ಅಡ್ಡಂಡ ಕಾರ್ಯಪ್ಪನವರ ‘ಗಾಂಧಿ ಹತ್ಯೆಯ ಸತ್ಯ’ ಪುಸ್ತಕ ಮತ್ತು ನಾಟಕವನ್ನು ನಿಷೇಧಿಸಬೇಕೆಂಬ ಆಗ್ರಹಕ್ಕೆ ಬಲವಾದ ಐತಿಹಾಸಿಕ ಕಾರಣಗಳಿವೆ. ಮನಶಾಸ್ತ್ರದ ದೃಷ್ಟಿಯಿಂದಲೂ ಹಂತಕನ ಸಮರ್ಥನೆಗೆ ಎಚ್ಚರಿಕೆ ಅಗತ್ಯ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಗೆ ಸಂಬಂಧಿಸಿದಂತೆ ಅಡ್ಡಂಡ...

ಕಲ್ಯಾಣ ಯೋಜನೆಗಳಿಗೆ ‘ಆಧಾರ್’ ಬದಲು ‘ಎಪಿಕ್’: ಬಡಜನರ ಹೊಟ್ಟೆಯ...

ರಾಜಕೀಯ ಮತ್ತು ಸಾಮಾಜಿಕ ವಿಶ್ಲೇಷಕರು ಎಚ್ಚರಿಸುವಂತೆ, ಕಳೆದ ಒಂದು ದಶಕದ ಡಿಜಿಟಲ್ ಪರಿಶೀಲನಾ ವ್ಯವಸ್ಥೆಯ ಇತಿಹಾಸವನ್ನು ನೋಡಿದರೆ, ಹೊಸ ತಂತ್ರಜ್ಞಾನಗಳು ಬಂದಾಗಲೆಲ್ಲ ಅತ್ಯಂತ ದುರ್ಬಲ ವರ್ಗದವರನ್ನು ವ್ಯವಸ್ಥೆಯಿಂದ ಹೊರಗಿಡುತ್ತಲೇ ಬರಲಾಗಿದೆ. ಆಧಾರ್ ಜೋಡಣೆ...

ಬುಧವಾರ, ಮಂಗಳೂರಿನಿಂದ ಮುಡಿಪು ಮಾರ್ಗದಲ್ಲಿ ಸಂಚರಿಸುವ ಕೆಎಸ್‌ಆರ್‌ಟಿಸಿ ನಗರ ಸಾರಿಗೆಯಲ್ಲಿ ಕಂಡಕ್ಟರ್‌ ಕೃತ್ಯ ಎಸಗಿದ್ದಾನೆ. ಆತನ ಕೃತ್ಯವನ್ನು ಸಹ ಪ್ರಯಾಣಿಕರೊಬ್ಬರು ವಿಡಿಯೋ ಮಾಡಿದ್ದಾರೆ. ವಿಡಿಯೋದಲ್ಲಿ ಆರೋಪಿ ಕಂಡಕ್ಟರ್‌ ಎಸಗಿರುವ ದುಷ್ಕೃತ್ಯ ಸೆರೆಯಾಗಿದೆ.

ವಿಡಿಯೋ ಬೆಳಕಿಗೆ ಬಂದ ಕೂಡಲೇ, ಕೊಣಾಜೆ ಪೊಲೀಸ್‌ ಠಾಣೆಯ ಪೊಲೀಸರು ಬಿಎಸ್‌ಎನ್‌ ಸೆಕ್ಷನ್‌ 74, 75 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ.

“ಆರೋಪಿ ಕಂಡಕ್ಟರ್ ಹೆಸರು ಪ್ರದೀಪ್ ಎಂದಾಗಿದೆ. ಮಂಗಳೂರಿನಿಂದ ಮುಡಿಪುವಿಗೆ ತೆರಳುವ ಸರ್ಕಾರಿ ಬಸ್‌ನ ವಿಡಿಯೋ ಇದಾಗಿದೆ. ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿರುವ ಈ ವಿಡಿಯೋ ದೊರೆತ ಕೂಡಲೇ ಆರೋಪಿಯನ್ನು ಅಮಾನತು ಮಾಡಿದ್ದೇವೆ” ಎಂದು ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ಹೇಳಿದ್ದಾರೆ.

ಈ ವರದಿ ಓದಿದ್ದೀರಾ?: ಜನಿವಾರ ಮತ್ತು ಹಿಜಾಬ್‌: ಯಾರದ್ದು ಪಕ್ಷಪಾತ?

“ಇಂತಹ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ. ಹಾಗಾಗಿಯೇ ತಕ್ಷಣ ಅವರನ್ನು ಅಮಾನತು ಮಾಡಿದ್ದೇವೆ. ಮುಂದೆ ಆತನ ಮೇಲೆ ವಿಚಾರಣೆ ನಡೆಯಲಿದ್ದು, ವಿಚಾರಣೆಯಲ್ಲಿ ಕಂಡಕ್ಟರ್ ತಪ್ಪಿತಸ್ಥ ಎಂಬುದು ಸಾಬೀತಾದರೆ, ಆತ ನೌಕರಿ ಕಳೆದುಕೊಳ್ಳಲಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಆತ ಲೈಂಗಿಕ ದೌರ್ಜನ್ಯ ಎಸಗುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದ್ದು, ಉದ್ದೇಶಪೂರ್ವಕವಾಗಿ ಯುವತಿಯ ಮೇಲೆ ದೌರ್ಜನ್ಯ ಎಸಗುತ್ತಿದ್ದಾನೆ. ಹಾಗಾಗಿ ಇದು ಗಂಭೀರ ವಿಚಾರವಾಗಿದ್ದು, ಆತನಿಗೆ ತನ್ನನ್ನು ಸಮರ್ಥಿಸಿಕೊಳ್ಳಲು ಕಾರಣಗಳೇ ಇಲ್ಲ” ಎಂದು ರಾಜೇಶ್ ಹೇಳಿದ್ದಾರೆ.

“ಪ್ರಯಾಣಿಕರೊಂದಿಗೆ ಹೇಗೆ ವರ್ತಿಸಬೇಕು ಎಂಬ ಬಗ್ಗೆ ನಮ್ಮ ಸಿಬ್ಬಂದಿಗೆ ಪ್ರತಿದಿನ ನಿರ್ದೇಶನ ನೀಡುತ್ತೇವೆ. ಅದನ್ನು ಡಿಪೋಗಳಲ್ಲಿ ಪುನರಾವರ್ತಿತವಾಗಿ ನೀಡುತ್ತಲೆ ಇರುತ್ತೇವೆ. ಆದರೆ ಎಲ್ಲಾ ಕಡೆಯೂ ಒಬ್ಬರಿಬ್ಬರು ಇಂತವರು ಇದ್ದೇ ಇರುತ್ತಾರೆ. ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಿದೆ. ಈ ಘಟನೆಯು ವಿಡಿಯೊ ಮಾಡದೆ ಇದ್ದರೆ ನಮಗೆ ತಿಳಿದು ಬರುತ್ತಲೆ ಇರಲಿಲ್ಲ. ಆದ್ದರಿಂದ ಈ ವಿಡಿಯೊ ಮಾಡಿದವರಿಗೆ ಸೆಲ್ಯೂಟ್. ವಿಡಿಯೊ ಸ್ಪಷ್ಟವಾಗಿದ್ದು, ಕಂಡಕ್ಟರ್ ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.” ಎಂದು ರಾಜೇಶ್ ಹೇಳಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ವಕೀಲ ವೃತ್ತಿ ಯಶಸ್ಸಿಗೆ ನಿರಂತರ ಅಧ್ಯಯನ, ಭಾಷಾ ಪ್ರೌಢಿಮೆ ಅಗತ್ಯ: ಪದ್ಮಾವತಿ ಮಾನೆ

ವಕೀಲ ವೃತ್ತಿಯು ಸಮಾಜದ ಎಲ್ಲ ವರ್ಗದ ಜನರಿಗೆ ನ್ಯಾಯ ಒದಗಿಸುವ ಶ್ರೇಷ್ಠ...

ವಿಜಯಪುರ | ನ.17, 18ರಂದು ಕಲಾ ಪ್ರತಿಭೋತ್ಸವ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಮಕ್ಕಳು ಮತ್ತು ಯುವಜನರಲ್ಲಿನ ಸುಪ್ತ ಕಲಾ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ...

ಕೋಲಾರ | ಸರ್ಕಾರಿ ಶಾಲೆಗಳ ವಿಲೀನ ಕೈಬಿಡಿ, ಶಾಲೆ–ಅಂಗನವಾಡಿಗಳ ದುರಸ್ತಿಗೆ ಅನುದಾನ ಬಿಡುಗಡೆ ಮಾಡಿ: ರೈತ ಸಂಘ ಆಗ್ರಹ

ಖಾಸಗಿ ಶಾಲೆಗಳೊಂದಿಗೆ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ಚಿಂತನೆ ಕೈಬಿಟ್ಟು, ಶಿಥಿಲಾವಸ್ಥೆಯಲ್ಲಿರುವ ಸರ್ಕಾರಿ...

ವಿಜಯಪುರ | ಮಾಹಿತಿ ಹಕ್ಕು ಕಾಯ್ದೆ ಉಲ್ಲಂಘನೆ; 186 ಅಧಿಕಾರಿಗಳಿಗೆ ದಂಡ!

ಮಾಹಿತಿ ಹಕ್ಕು ಕಾಯ್ದೆಯಡಿ ನಿಗದಿತ ಅವಧಿಯಲ್ಲಿ ಮಾಹಿತಿ ನೀಡದೆ ಕರ್ತವ್ಯ ಲೋಪ...