ಮಂಗಳೂರು | ಪಾರ್ಟ್‌ ಟೈಮ್‌ ಕೆಲಸದ ಹೆಸರಿನಲ್ಲಿ ₹6.50 ಲಕ್ಷ ವಂಚನೆ

Date:

ಮನೆಯಿಂದಲೇ ಪಾರ್ಟ್‌ಟೈಮ್‌ ಕೆಲಸ ಮಾಡಿ ಹಣಗಳಿಸಬಹುದು ಎನ್ನುವ ಜಾಹೀರಾತನ್ನು ನಂಬಿ ₹6.50 ಲಕ್ಷ ಕಳೆದುಕೊಂಡಿರುವ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ದೂರುದಾರರಿಗೆ ಜೂ. 25ರಂದು ವಾಟ್ಸ್ಆ್ಯಪ್ ಮೂಲಕ ಪಾರ್ಟ್‌ಟೈಮ್ ಕೆಲಸದ ಬಗ್ಗೆ ಸಂದೇಶ ಬಂದಿತ್ತು. ಅದರಲ್ಲಿದ್ದ ಲಿಂಕ್ ಕ್ಲಿಕ್ ಓಪನ್‌ ಮಾಡಿದ ಬಳಿಕ ಟೆಲಿಗ್ರಾಂ ಆ್ಯಪ್ ಡೌನ್ಲೋಡ್ ಮಾಡುವಂತೆ ಸೂಚಿಸಲಾಗಿದೆ. ಅನಂತರ ಅದರ ಜತೆ ಮತ್ತೆರಡು ಲಿಂಕ್ ಕಳುಹಿಸಿ 20 ವರ್ಕ್ ಟಾಸ್ಕ್‌ಗಳನ್ನು ಪೂರ್ಣಗೊಳಿಸುವಂತೆ ತಿಳಿಸಿದ್ದರು. ಅದಕ್ಕೂ ಮೊದಲು ವರ್ಕಿಂಗ್ ಐಡಿ ನಂಬ‌ರ್ ಕೊಟ್ಟಿದ್ದು, ಅಕೌಂಟ್ ವಿವರಗಳನ್ನು ಪಡೆದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಇದನ್ನೂ ಓದಿ: ಮಂಗಳೂರು | ʼಸಿಂಧೂರ ವಿಜಯʼ ಉದ್ಯಾನವನ ಉದ್ಘಾಟನೆ

ಮೊದಲ ಟಾಸ್ಕ್ ಪೂರ್ಣಗೊಳಿಸಿದ ಬಳಿಕೆ ಖಾತೆಗೆ ₹180, ಬಳಿಕ ₹200 ಪಾವತಿಯಾಗಿದೆ. ಜೂ. 26ರಂದು ಟ್ರೇಡ್ ಟಾಸ್ಕ್ ನೀಡಿದ್ದು, ಈ ಟಾಸ್ಕ್‌ಗೆ ₹800 ಪಾವತಿಸುವಂತೆ ಸೂಚನೆ ನೀಡಿದ್ದಾರೆ. ಅದರಂತೆ ದೂರುದಾರರು ಹಣ ಪಾವತಿಸಿದ್ದರು. ಬಳಿಕ ಅದೇ ರೀತಿ ಜೂ.28ರ ವರೆಗೆ ಹಂತ ಹಂತವಾಗಿ ಒಟ್ಟು ₹6,50,801 ಹಣ ವರ್ಗಾವಣೆ ಮಾಡಿದ್ದಾರೆ. ಬಳಿಕ ಹಣವನ್ನು ವಾಪಸ್ ಕೇಳಿದಾಗ ಹಣವನ್ನು ನೀಡದೆ ಮೋಸ ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...