ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕುಡುಪು ಮೈದಾನದಲ್ಲಿ ಅಪರಿಚಿತ ವಲಸೆ ಕಾರ್ಮಿಕನ ಹತ್ಯೆಗೈದಿದ್ದ ಘಟನೆ ಇನ್ನೂ ಸುದ್ದಿಯಲ್ಲಿರುವಾಗಲೇ ಬಜಪೆಯಲ್ಲಿ ರೌಡಿಶೀಟರ್ ಓರ್ವನ ಕೊಲೆ ನಡೆದಿರುವ ಬಗ್ಗೆ ವರದಿಯಾಗಿದೆ.
ಸುಮಾರು 4ರಿಂದ 5 ಮಂದಿ ಇದ್ದ ತಂಡವು ಸಾರ್ವಜನಿಕರ ಎದುರಲ್ಲೇ ತಲವಾರಿನಿಂದ ದಾಳಿ ನಡೆಸಿರುವುದು ಮೊಬೈಲ್‌ನಲ್ಲಿ ಸೆರೆಯಾಗಿರುವುದಾಗಿ ತಿಳಿದುಬಂದಿದೆ. ಅಲ್ಲದೇ, ಹಲ್ಲೆ ನಡೆಸಿರುವ ಮಾರಕಾಸ್ತ್ರಗಳನ್ನು ಸ್ಥಳದಲ್ಲೇ ಬಿಟ್ಟು, ಪರಾರಿಯಾಗಿರುವುದಾಗಿ ತಿಳಿದುಬಂದಿದೆ.
ಈದಿನ ಡಾಟ್ ಕಾಮ್‌ಗೆ ಪ್ರಾಥಮಿಕವಾಗಿ ಸಿಕ್ಕಿರುವ ಮಾಹಿತಿಯ ಪ್ರಕಾರ ಕೊಲೆಯಾದವ ರೌಡಿಶೀಟರ್ ಸುಹಾಸ್ ಶೆಟ್ಟಿ ಎಂದು ತಿಳಿದುಬಂದಿದೆ. ಈತ ಸುರತ್ಕಲ್‌ನ ಮುಸ್ಲಿಂ ಯುವಕ ಮುಹಮ್ಮದ್ ಫಾಝಿಲ್‌ನ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಎಂದು ತಿಳಿದುಬಂದಿದೆ.
ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪೊಲೀಸರು ಇನ್ನಷ್ಟೇ ನೀಡಬೇಕಿದೆ.
