ಮಂಗಳೂರು | ಅಬ್ದುಲ್, ಅಶ್ರಫ್ ಕೊಲೆ ಪ್ರಕರಣವನ್ನು SITಗೆ ನೀಡಬೇಕು: ಅನ್ವರ್ ಸಾದತ್

Date:

Advertisements

ಕೊಳತ್ತಮಜಲು ಅಬ್ದುಲ್ ರೆಹಮಾನ್ ಮತ್ತು ವಯನಾಡುವಿನ ಮುಹಮ್ಮದ್ ಅಶ್ರಫ್ ಕೊಲೆ ಪ್ರಕರಣವನ್ನು ವಿಶೇಷ ತನಿಖಾ ತಂಡ‌ (ಎಸ್‌ಐಟಿ)ಗೆ ಒಪ್ಪಿಸುವಂತೆ ರಾಜ್ಯ ಸರ್ಕಾರವನ್ನು ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅನ್ವ‌ರ್ ಸಾದತ್ ಎಸ್ ಆಗ್ರಹಿಸಿದರು.

ಎಸ್‌ಡಿಪಿಐ ದ.ಕ.ಜಿಲ್ಲಾ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಕೊಲೆಯಾದ ಇಬ್ಬರ ಕುಟುಂಬಕ್ಕೂ ತಲಾ ರೂ.50 ಲಕ್ಷ ಪರಿಹಾರ ನೀಡಬೇಕು. ಅಬ್ದುಲ್ ಮತ್ತು ಅಶ್ರಫ್‌ ಕೊಲೆ ಪ್ರಕರಣದಲ್ಲಿ ಭಾಗಿಯಾದ ಪ್ರಮುಖ ಆರೋಪಿಗಳ ಬಂಧನಕ್ಕೆ ವಿಳಂಬ ಮಾಡುತ್ತಿರುವುದು ಮತ್ತು ಸಂತ್ರಸ್ತರ ಕುಟುಂಬಕ್ಕೆ ಪರಿಹಾರ ಘೋಷಿಸದಿರುವುದು ಖಂಡಿನೀಯವಾಗಿದ್ದು, ಇದನ್ನು ವಿರೋಧಿಸಿ ಶುಕ್ರವಾರ ಪ್ರತಿಭಟನೆ ಮಾಡಲಾಗುವುದು” ಎಂದರು.

“ಅಬ್ದುಲ್ ರೆಹಮಾನ್ ಹತ್ಯೆಗೆ ಸಂಚು ನಡೆಸಿದವರು ಯಾರೆಂದು ಎಲ್ಲರಿಗೂ ಗೊತ್ತಿದೆ. ಕೊಲೆಗೆ ಮುನ್ನ ಪ್ರಚೋದನೆ ನೀಡಿದ ಸಂಘ ಪರಿವಾರದ ಸಂಘಟನೆಯ ಭರತ್‌ ಕುಮ್ಮೇಲು ಮತ್ತು ಶ್ರೀಕಾಂತ್ ಶೆಟ್ಟಿಯನ್ನುಈವರೆಗೆ ಬಂಧನ ಮಾಡಿಲ್ಲ. ಇಬ್ಬರ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ, ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆಯಲ್ಲಿ ಕೋಮುದ್ವೇಷ ಇಲ್ಲ. ಆತನ ಕೊಲೆಗೆ ಕಾರಣವನ್ನು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದ ತನಿಖೆಯನ್ನು ಕೇಂದ್ರ ಸರ್ಕಾರದ ಮೇಲೆ ಪ್ರಭಾವ ಬೀರಿ ಎನ್‌ಐಎಗೆ ಒಪ್ಪಿಸುವಲ್ಲಿ ಬಿಜೆಪಿ ನಾಯಕರು ಯಶಸ್ವಿಯಾಗಿದ್ದಾರೆ. ಆದರೆ ಅಬ್ದುಲ್ ರೆಹಮಾನ್ ಮತ್ತು ಅಶ್ರಫ್ ಕೊಲೆ ಯಾವ ಕಾರಣಕ್ಕಾಗಿ ಆಗಿದೆ ಎನ್ನುವುದನ್ನು ಪೊಲೀಸರು ಈವರೆಗೊ ಬಹಿರಂಗಪಡಿಸಿಲ್ಲ” ಎಂದರು.

Advertisements

ಇದನ್ನೂ ಓದಿ: ಮಂಗಳೂರು | ಬಂಟ್ವಾಳ ತಾಲೂಕಿನ ಶಾಲೆ, ಕಾಲೇಜುಗಳಿಗೆ ಇಂದು ರಜೆ

ಈ ಎರಡೂ ಪ್ರಕರಣಗಳನ್ನು ಎನ್‌ಐಎಗೆ ಕೊಡಲು ಸಾಧ್ಯವಿಲ್ಲದಿದ್ದರೆ, ಕೊನೆಯ ಪಕ್ಷ ವಿಶೇಷ ತನಿಖಾ ತಂಡಕ್ಕೆ ನೀಡಲಿ. ವಿಶೇಷ ತನಿಖಾ ತಂಡದ ಮೂಲಕ ನಿಷ್ಪಕ್ಷಪಾತ ತನಿಖೆ ನಡೆಯಬಹುದು, ನ್ಯಾಯಸಿಗಬಹುದು ಎಂಬ ವಿಶ್ವಾಸ ನಮಗಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಎಸ್‌ಡಿಪಿಐ ರಾಜ್ಯ ಕಾರ್ಯಕಾರಿಣಿ ಸದಸ್ಯ ಅಥಾವುಲ್ಲಾ ಜೋಕಟ್ಟೆ, ಉಪಾಧ್ಯಕ್ಷ ಮೂನಿಷ್‌ ಅಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X