ಮಂಗಳೂರು | ನಕಲಿ ಐಡಿ, ಮೀಡಿಯಾ ಸ್ಟಿಕ್ಕರ್‌ ದುರ್ಬಳಕೆ ತಡೆಗೆ ಕ್ರಮ: ಪೊಲೀಸ್‌ ಕಮಿಷನರ್‌

Date:

ಪತ್ರಕರ್ತರ ನಕಲಿ ಐಡಿ ಕಾರ್ಡ್‌ ದುರ್ಬಳಕೆ ಮಾಡುವ ಹಾಗೂ ಮೀಡಿಯಾ ನಕಲಿ ಸ್ಟಿಕ್ಕರ್‌ ಅಳವಡಿಸಿಕೊಂಡಿರುವ ವಾಹನಗಳನ್ನು ಪತ್ತೆ ಹಚ್ಚುವಂತೆ ಮಂಗಳೂರು ಸಂಚಾರಿ ಪೊಲೀಸರಿಗೆ ಕಮಿಷನರ್‌ ಅನುಪಮ್‌ ಅಗರ್ವಾಲ್ ಸೂಚಿಸಿದರು.

- Advertisement -

ನಕಲಿ ಪತ್ರಕರ್ತರಿಗೆ ಕಡಿವಾಣ ಹಾಕುವಂತೆ ಹಾಗೂ ಕರ್ತವ್ಯ ನಿರ್ವಹಿಸುವ ಸಂದರ್ಭ ಪತ್ರಕರ್ತರಿಗೆ ಭದ್ರತೆ ಖಾತ್ರಿ ಪಡಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮನವಿಗೆ ಸ್ಪಂದಿಸಿ ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇತ್ತೀಚಿನ ದಿನಗಳಲ್ಲಿ ಮಾಧ್ಯಮ ಐಡಿ ಕಾರ್ಡ್ ದುರ್ಬಳಕೆ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿವೆ. ಗುರುವಾರ ರಾತ್ರಿ ಕೊಡಿಯಾಲ್ ಬೈಲ್ ಬಳಿ ನಡೆದ ಸರಣಿ ಅಪಘಾತದ ಪ್ರಕರಣದಲ್ಲಿ ಮಾಧ್ಯಮ ಹೆಸರು ದುರ್ಬಳಕೆ ಮಾಡಿರುವುದಲ್ಲದೇ ಸ್ಥಳದಲ್ಲಿ ನಕಲಿ ಐಡಿ ಕಾರ್ಡ್ ಪತ್ತೆಯಾಗಿದೆ. ಜತೆಗೆ ಹಲವಾರು ವಾಹನಗಳಲ್ಲಿ ಮೀಡಿಯಾ ಹಾಗೂ ಪ್ರೆಸ್ ಸ್ಟಿಕರ್ ಬಳಸುತ್ತಿರುವುದು ಕಂಡು ಬರುತ್ತಿದೆ. ಈ ರೀತಿ ಕಾನೂನು ಬಾಹಿರ ಕೃತ್ಯ ನಡೆಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಇದನ್ನೂ ಓದಿ: ಮಂಗಳೂರು | ಮಹಾನಗರ ಪಾಲಿಕೆಯ ಮಾಜಿ ಉಪ ಮೇಯರ್ ಮುಹಮ್ಮದ್ ಕುಂಜತ್ತಬೈಲ್ ನಿಧನ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಪ್ರೆಸ್‌ ಕ್ಲಬ್‌ ಅಧ್ಯಕ್ಷ ಪಿ.ಬಿ. ಹರೀಶ್‌ ರೈ, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಪ್ರೆಸ್‌ ಕ್ಲಬ್‌ ಉಪಾಧ್ಯಕ್ಷ ಮುಹಮ್ಮದ್‌ ಆರೀಫ್‌ ಪಡುಬಿದ್ರಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಸುಖಪಾಲ್‌ ಪೊಳಲಿ, ರಾಜೇಶ್‌ ದಡ್ಡಂಗಡಿ, ಸದಸ್ಯರಾದ ಪ್ರಸನ್ನ ಪೂಜಾರಿ, ಶಶಿಕಾಂತ್‌ ಜೆ., ಸಂದೀಪ್‌ ಕುಮಾರ್‌ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...