ಮಂಗಳೂರು | ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಬ್ಯಾಗ್‌ನಿಂದ ಚಿನ್ನಾಭರಣ ಕಳವು: ಸಿಬ್ಬಂದಿ ಸಹಿತ ಐವರ ಬಂಧನ

Date:

Advertisements

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್ ತೆರೆದು 4.5 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಕಳ್ಳತನ ಪ್ರಕರಣದಲ್ಲಿ 4 ಮಂದಿ ಲಗೇಜ್ ಲೋಡಿಂಗ್ ಸಿಬ್ಬಂದಿ ಸೇರಿ ಐವರನ್ನು ಬಜಪೆ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಏರ್ ಇಂಡಿಯಾ ಎಕ್ಸ್ ಪ್ರೆಸ್ ನ ಲೋಡಿಂಗ್ – ಅನ್ ಲೋಡಿಂಗ್ ಮಾಡುವ ಸಾಟ್ಸ್ ನೌಕರರಾದ ನಿತಿನ್, ಮೂಡುಪೆರಾರದ ನಿವಾಸಿಗಳಾದ ಸದಾನಂದ, ರಾಜೇಶ್, ಬಜ್ಪೆ ನಿವಾಸಿ ಪ್ರವೀಣ್ ಫೆರ್ನಾಂಡಿಸ್ ಮತ್ತು ಚಿನ್ನಾಭರಣ ಪಡೆದುಕೊಂಡು ಚಿನ್ನದ ಗಟ್ಟಿಯಾಗಿಸಿದ್ದ ಬಜ್ಪೆ ಮೂಡುಪೆರಾರ ನಿವಾಸಿ ರವಿರಾಜ್ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಿಆರ್‌ಪಿಎಫ್ ಜವಾನರಾಗಿರುವ ಹರಿಕೇಶ್ ಎಂಬುವವರ ಪತ್ನಿ ರಾಜೇಶ್ವರಿ ಪದ್ಮಶಾಲಿಯವರು ಕಳೆದ ಆಗಸ್ಟ್‌ 30ರಂದು ಬೆಂಗಳೂರಿನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಈ‌ ವೇಳೆ ಅವರ‌ ಲಗೇಜ್ ಟ್ರೋಲಿ ಬ್ಯಾಗನ್ನು ತೆರೆದು 4.5 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಕಳವು ಮಾಡಲಾಗಿತ್ತು. ಈ ಸಂಬಂಧ ಅವರು ಬಜ್ಪೆ ಪೊಲೀಸರಿಗೆ ದೂರು ನೀಡಿದ್ದರು‌.

mangalore airport theft case

ದೂರು ದಾಖಲಿಸಿಕೊಂಡ ಬಜ್ಪೆ ಪೊಲೀಸ್ ನಿರೀಕ್ಷಕ ಸಂದೀಪ್ ಅವರು ತನಿಖೆ ಆರಂಭಿಸಿ ವಿಮಾನ ನಿಲ್ದಾಣದ ಲೋಡ್ ಮತ್ತು ಅನ್ ಲೋಡ್ ಮಾಡುತ್ತಿದ್ದ ನಾಲ್ಕು ಮಂದಿ ಸಿಬ್ಬಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಚಿನ್ನಾಭರಣ ಕದ್ದು ಬಜ್ಪೆ ಮೂಡುಪೆರಾರ ನಿವಾಸಿ ರವಿರಾಜ್ ಎಂಬಾತನಿಗೆ ಮಾರಿರುವುದಾಗಿ ತಪ್ಪೊಪ್ಪಿಕೊಂಡಿದ್ದರು.

ಇದನ್ನು ಓದಿದ್ದೀರಾ? ಬೆಳ್ತಂಗಡಿ | ಸೆ.7: ಜಮಾಅತೆ ಇಸ್ಲಾಮೀ ಹಿಂದ್‌ನಿಂದ ‘ಧಾರ್ಮಿಕ ಸೌಹಾರ್ದ; ಸವಾಲುಗಳು ಮತ್ತು ಅವಕಾಶ’ ವಿಚಾರಗೋಷ್ಠಿ

ಆರೋಪಿಗಳ ಹೇಳಿಗೆ ಅನುಸರಿಸಿ ರವಿರಾಜ್‌ನನ್ನು ಬಂಧಿಸಿದ ಬಜ್ಪೆ ಪೊಲೀಸರು, ಆತನ ಬಳಿಯಿಂದ ಮಹಿಳೆಯ ಚಿನ್ನಾಭರಣವನ್ನು ಕರಗಿಸಿ ಮಾಡಿದ್ದ ಸುಮಾರು 5 ಲಕ್ಷ ರೂ. ಮೌಲ್ಯದ ಚಿನ್ನದ ಗಟ್ಟಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಈ ಘಟನೆ ಮೊದಲನೇಯದಲ್ಲ!

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಬ್ಯಾಗ್‌ನಲ್ಲಿರುವ ಬೆಲೆಬಾಳುವ ವಸ್ತುಗಳನ್ನು ಅಕ್ರಮವಾಗಿ ತೆರೆದು ದೋಚುತ್ತಿರುವ ಪ್ರಕರಣ ಇದು ಮೊದಲನೇಯದ್ದಲ್ಲ. ಈ ಹಿಂದೆ ಕೂಡ ಚಿನ್ನಾಭರಣಗಳು ಮತ್ತು ಮೊಬೈಲ್ ಫೋನ್‌ಗಳಂತಹ ಬೆಲೆಬಾಳುವ ವಸ್ತುಗಳನ್ನು ಕಳವು ಮಾಡಿರುವ ಬಗ್ಗೆ ಹಲವಾರು ದೂರುಗಳು ಬಂದಿದ್ದವು.

ಕೆಲವು ಪ್ರಯಾಣಿಕರು ತಮ್ಮ ಲಗೇಜ್ ಬ್ಯಾಗ್ ಓಪನ್ ಆಗಿದ್ದ ಬಗ್ಗೆ ವಿಡಿಯೋ ಮಾಡಿ, ಸೋಷಿಯಲ್ ಮೀಡಿಯಾಗಳಲ್ಲಿ ಹಾಕುತ್ತಿದ್ದರು. ಅಲ್ಲದೇ, ವಿಮಾನ ನಿಲ್ದಾಣದ ಅಧಿಕಾರಿಗಳ ಮುಂದೆ ಪ್ರಯಾಣಿಕರು ಪದೇ ಪದೇ ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಳ್ಳತನವಾಗುತ್ತದೆ ಎಂಬ ಭಯ, ಆತಂಕದಿಂದಲೇ ಹಲವು ಮಂದಿ ಕರಾವಳಿಯಿಂದ ಸೌದಿ, ದುಬೈ ಸೇರಿದಂತೆ ಹೊರದೇಶಗಳಿಗೆ ಪ್ರಯಾಣಿಸುವ ಪ್ರಯಾಣಿಕರು ಪಕ್ಕದ ಕೇರಳದ ಕಣ್ಣೂರು ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು. ವಿಮಾನ ನಿಲ್ದಾಣದಲ್ಲಿನ ಕಳ್ಳತನದ ಬಗ್ಗೆ ಕೆಲವೇ ಕೆಲವು ಮಂದಿ ಮಾತ್ರ ಪೊಲೀಸ್ ದೂರುಗಳನ್ನು ನೀಡುತ್ತಿದ್ದರು ಎಂಬ ಅಂಶ ಈ ಪ್ರಕರಣದ ಬೆನ್ನಲ್ಲೇ ಬೆಳಕಿಗೆ ಬಂದಿದೆ. ಇನ್ನಾದರೂ ಮಂಗಳೂರು ವಿಮಾನ ನಿಲ್ದಾಣದ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

ಉಡುಪಿ | ಉಚ್ಚಿಲ ದಸರಾ : ಇಂದು ವೈಭವದ ಭವ್ಯ ಶೋಭಾ ಯಾತ್ರೆ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಶ್ರೀಕ್ಷೇತ್ರ ಉಚ್ಚಿಲದಲ್ಲಿ...

ಹಾವೇರಿ | ನಾಳೆ ‘ಮಾದಕ ಮುಕ್ತ ಸಮಾಜ ಮತ್ತು ಡಿಜಿಟಲ್ ಸ್ವಾತಂತ್ರ್ಯ’ ಕುರಿತು ಜಿಲ್ಲಾ ಮಟ್ಟದ ಯುವ ಸಮಾವೇಶ

"ಮಾದಕ ವಸ್ತುಗಳ ಸೇವನೆ ಹಾಗೂ ಡಿಜಿಟಲ್ ವ್ಯಸನದಿಂದ ಯುವಕರು ತಮ್ಮ ಜೀವನವನ್ನು...

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

Download Eedina App Android / iOS

X