ಮಂಗಳೂರು | ಬೀಫ್ ಸಾಗಾಟ ಆರೋಪ: ತಂದೆ, ಮಗಳ ಮೇಲೆ ಸಂಘಪರಿವಾರದ ಕಾರ್ಯಕರ್ತರಿಂದ ಹಲ್ಲೆ; ಎಫ್‌ಐಆರ್

Date:

ದನದ‌ ಮಾಂಸ ಕೊಂಡು ಹೋಗುತ್ತಿದ್ದ ಆರೋಪದ ಮೇಲೆ ಅಪ್ರಾಪ್ತ ಮಗಳು ಹಾಗೂ ತಂದೆಗೆ ಸಂಘಪರಿವಾರದ ಕಾರ್ಯಕರ್ತರು ಗಂಭೀರ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಗಂಜಿಮಠ ಸಮೀಪದ ನಾರ್ಲ ಪದವು ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

- Advertisement -

ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮಳಲಿ ನಾರ್ಲಪದವು ರಸ್ತೆಯಲ್ಲಿ ಶನಿವಾರ ಬೆಳಿಗ್ಗೆ ಬೀಫ್ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ತಡೆದು ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಘಟನೆಯಲ್ಲಿ 11 ವರ್ಷದ ಬಾಲಕಿಯೊಬ್ಬಳು ಗಾಯಗೊಂಡಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಶನಿವಾರ ಬೆಳಗ್ಗೆ ಸುಮಾರು 10 ಗಂಟೆಯ ವೇಳೆಗೆ ಅಬ್ದುಲ್ ಸತ್ತಾರ್ ಮುಲ್ಲರಪಟ್ನ ಎಂಬುವವರು ತಮ್ಮ 11 ವರ್ಷದ ಮಗಳೊಂದಿಗೆ ಬೈಕ್‌ನಲ್ಲಿ ಸುಮಾರು 19 ಕೆಜಿ ದನದ ಮಾಂಸವನ್ನು ಸಾಗಿಸುತ್ತಿದ್ದರು. ಮಳಲಿ ನಾರ್ಲಪದವು ರಸ್ತೆಯಲ್ಲಿ ಹೋಗುತ್ತಿದ್ದಾಗ, ಟಾಟಾ ಸುಮೋ ವಾಹನದಲ್ಲಿ ಬಂದ ಎಡಪದವು ನಿವಾಸಿಗಳಾದ ಸುಮಿತ್ ಭಂಡಾರಿ (21) ಮತ್ತು ರಜತ್ ನಾಯ್ಕ್ (30) ಎಂಬುವವರು ಬೈಕನ್ನು ಅಡ್ಡಗಟ್ಟಿದ್ದಾರೆ.

ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ಬಿದ್ದಿದ್ದು, ಸೈಲೆನ್ಸರ್ ತಗುಲಿ ಬಾಲಕಿಯ ಕಾಲಿಗೆ ಸುಟ್ಟ ಗಾಯಗಳಾಗಿವೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಸತ್ತಾರ್ ಅವರು ಬೈಕ್ ಬಿಟ್ಟು ಸ್ಥಳದಿಂದ ಓಡಿಹೋಗಿದ್ದಾರೆ. ತಕ್ಷಣ ಸ್ಥಳೀಯರು ಧಾವಿಸಿ ಗಾಯಗೊಂಡ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

magalu

ಘಟನೆಗೆ ಸಂಬಂಧಿಸಿದಂತೆ ಸುಮಿತ್ ಮತ್ತು ರಜತ್ ಅವರನ್ನು ಪೊಲೀಸರು ಠಾಣೆಗೆ ಕರೆಸಿ ಪ್ರತ್ಯೇಕವಾಗಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಇಬ್ಬರೂ ಗೊಂದಲಕಾರಿ ಹೇಳಿಕೆ ನೀಡಿದ್ದಾರೆ. ಮೆಡಿಕಲ್ ರೆಪ್ ಆಗಿರುವ ರಜತ್ ನಾಯ್ಕ್, ನಾವು ಮಹರ್ಷಿ ಕ್ಲಿನಿಕ್‌ಗೆ ಔಷಧಿ ನೀಡಲು ಹೋಗಿದ್ದೆವು ಎಂದು ತಿಳಿಸಿದ್ದಾನೆ. ಆದರೆ ಪೊಲೀಸರು ವೈದ್ಯರನ್ನು ಸಂಪರ್ಕಿಸಿದಾಗ ಅವರು ಯಾವುದೇ ಔಷಧಿ ವಿತರಣೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬಳಿಕ ದೇವಸ್ಥಾನವೊಂದಕ್ಕೆ ಹೋಗಲು ದಾರಿ ಕೇಳುತ್ತಿದ್ದೆವು ಎಂದು ಹೇಳಿದರೂ, ಯಾವ ದೇವಸ್ಥಾನ ಎಂಬ ಪ್ರಶ್ನೆಗೆ ಆರೋಪಿಗಳು ಉತ್ತರಿಸಲು ತಡಬಡಾಯಿಸಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿಯ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. “ನಮ್ಮನ್ನು ಅಡ್ಡಗಟ್ಟಿದವರು ತಂದೆಯ ಮೇಲೆ ಕೈಯಿಂದ ಹಲ್ಲೆ ನಡೆಸಿದ್ದಾರೆ” ಎಂದು ಬಾಲಕಿ ಪೊಲೀಸರ ವಿಚಾರಣೆಯ ವೇಳೆ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಮೆಕ್ಕಾ | ಕಾಬಾದ ಮಸೀದಿಯಲ್ಲಿ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವಕ: ಜೀವದ ಹಂಗು ತೊರೆದು ರಕ್ಷಿಸಿದ ಭದ್ರತಾ ಸಿಬ್ಬಂದಿ

ಹಲ್ಲೆ ಮತ್ತು ದಾರಿ ತಡೆದ ಆರೋಪದ ಮೇಲೆ ಸುಮಿತ್ ಮತ್ತು ರಜತ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಬಿಲ್ ಇಲ್ಲದೆ ಬೀಫ್ ಸಾಗಿಸುತ್ತಿದ್ದ ಆರೋಪದ ಮೇಲೆ ಅಬ್ದುಲ್ ಸತ್ತಾರ್ ವಿರುದ್ಧವೂ ಪೊಲೀಸರು ಸುವೊ ಮೋಟೋ ಪ್ರಕರಣ ದಾಖಲಿಸಿಕೊಂಡಿದ್ದು, ಬಜಪೆ ಪೊಲೀಸರು ಈ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಖಂಡಿಸಿ ಕೃಷ್ಣರಾಜ...

ಕಾರವಾರ | ಚುನಾವಣಾ ಆಯೋಗ ಸುಧಾರಣೆಗೆ ಆಗ್ರಹ: ಜ್ಞಾನೇಶ್ ಕುಮಾರ್‌ ಪದಚ್ಯುತಿಗೆ KPRS ಒತ್ತಾಯ

ಕಾರವಾರ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಹಾಗೂ...

ಹಾಸನ | ಹೇಮಾವತಿ ನಾಲೆ: ಯುವಕನ ಮೃತ ದೇಹ ಪತ್ತೆ 

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಹೇಮಾವತಿ ನಾಲೆಯಲ್ಲಿ ಯುವಕನ ಮೃತ ದೇಹ...

ಹಾಸನ | ‘ಪ್ರಜಾಸೇವಾ’ ಇಬ್ಬರ ಅಧಿಕಾರಿಗಳು ಅಮಾನತು; ಡಿಸಿ ಆದೇಶ 

ಹಾಸನ ಜಿಲ್ಲೆ  ಸಕಲೇಶಪುರ ತಾಲೂಕಿನಲ್ಲಿ ನಡೆದ ‘ಪ್ರಜಾಸೇವಾ’ ಆಂದೋಲನದಲ್ಲಿ ಸಾರ್ವಜನಿಕರಿಂದ ಸಾಲು...