ಬೋಳಿಯಾರ್ ಸರ್ಕಾರಿ ಶಾಲೆಯ ಅವ್ಯವಸ್ಥೆಯನ್ನು ಸರಿಪಡಿಸಲು ಆಗ್ರಹಿಸಿ ಡಿವೈಎಫ್ಐ ಸಲ್ಲಿಸಿದ್ದ ಮನವಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರ್ ಅವರು ಸ್ಪಂದಿಸಿದ್ದು, ಇಂದು ಜಾರದಗುಡ್ಡೆ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೋಳಿಯಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಾರದಗುಡ್ಡೆ ಪ್ರದೇಶದಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲೆ (ಕರಿಸಾಲೆ)ಯ ಆವರಣ ಗೋಡೆಯು ಬಿರುಕು ಬಿಟ್ಟಿದ್ದು, ಬೀಳುವ ಸ್ಥಿತಿಯಲ್ಲಿರುವುದನ್ನು ಗಮನಿಸಿದ ಅಧಿಕಾರಿಗಳು ಶಾಲೆಯ ಅವ್ಯವಸ್ಥೆಯನ್ನು ಸರಿಪಡಿಸಲು ಇಂದೇ ವರದಿ ಸಲ್ಲಿಸುವುದಾಗಿ ಭರವಸೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲೆಯ ಜಾರದಗುಡ್ಡೆ ಸರ್ಕಾರಿ ಶಾಲೆಯ ಅವ್ಯವಸ್ಥೆಯನ್ನು ಸರಿಪಡಿ ಆಗ್ರಹಿಸಿ ಡಿವೈಎಫ್ಐಯಿಂದ ಬೋಳಿಯಾರ್ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿದ್ದರು. ಈ ಹಿನ್ನೆಲೆಯಲ್ಲಿ ಈ ದಿನ.ಕಾಮ್ ಆಗಸ್ಟ್ 2ರಂದು ದಕ್ಷಿಣ ಕನ್ನಡ | ಜಾರದಗುಡ್ಡೆ ಶಾಲೆಯ ಅವ್ಯವಸ್ಥೆ ಸರಿಪಡಿಸುವಂತೆ ಡಿವೈಎಫ್‌ಐ ಆಗ್ರಹ ಎಂಬ ಶಿರ್ಷಿಕೆಯಡಿ ವರದಿ ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರ್ ಅವರು ಭೇಟಿ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗ್ರಾಮ ಪಂಚಾಯತಿಯ ಅರಿವು ಕೇಂದ್ರಗಳಲ್ಲಿ ʼಭಾರತದ ಸ್ವಾತಂತ್ರ್ಯ ಸಂಭ್ರಮೋತ್ಸವʼ : ಸಚಿವ ಪ್ರಿಯಾಂಕ್ ಖರ್ಗೆ
ಈ ಸಂದರ್ಭದಲ್ಲಿ ಬೋಳಿಯಾರ್ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಧಾರಾಣಿ, ಡಿವೈಎಫ್ಐ ಉಳ್ಳಾಲ ತಾಲೂಕು ಕಾರ್ಯದರ್ಶಿ ರಿಝ್ವಾನ್ ಹರೇಕಳ, ಉಪಾಧ್ಯಕ್ಷ ರಝಾಕ್ ಮುಡಿಪು, ರಫೀಕ್ ಹರೇಕಳ, ಇಬ್ರಾಹಿಂ ಮದಕ, ಅಬೂಬಕರ್ ಜಲ್ಲಿ, ಶಮೀರ್ ಜಾರದಗುಡ್ಡೆ, ರಿಯಾಝ್ ಕೆಬಿ, ಸಿದ್ದೀಕ್ ಕೆಕೆ, ಶಂಶೀರ್ ಓಕೆ, ನಿಯಾಝ್, ಮಿಸ್ಬಾಹ್, ಮರ್ಷಾದ್ ಇದ್ದರು.
