ದಕ್ಷಿಣ ಕನ್ನಡದ ನೂತನ ಜಿಲ್ಲಾಡಳಿತ ಕೇಂದ್ರ ‘ಪ್ರಜಾ ಸೌಧ’ ಉದ್ಘಾಟನಾ ಸಮಾರಂಭಕ್ಕೆ ಮಂಗಳೂರಿಗೆ ಆಗಮಿಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಿಜೆಪಿಯ ಕೆಲವು ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ, ಬೆಂಗಾವಲಿಗೆ ಅಡ್ಡಿಪಡಿಸಿದ ಘಟನೆ ನಡೆದಿದೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪಡೀಲ್‌ನಲ್ಲಿ ನಡೆಯಲಿದ್ದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಯೆಯ್ಯಾಡಿಯಲ್ಲಿ ದಿಢೀರನೇ ಪ್ರತ್ಯಕ್ಷರಾದ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಲು ಆರಂಭಿಸಿದರು.
ಬಜಪೆಯಲ್ಲಿ ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆಯಲ್ಲಿ ಉಗ್ರ ಕೈವಾಡವಿದೆ. ಹಾಗಾಗಿ, ತನಿಖೆಯನ್ನು ಎನ್‌ಐಎಗೆ ವಹಿಸಬೇಕು ಹಾಗೂ ಸುಹಾಸ್ ಕುಟುಂಬಕ್ಕೆ ಸರಕಾರದಿಂದ ಪರಿಹಾರ ಘೋಷಣೆ ಮಾಡಬೇಕು ಎಂದು ಬಿಜೆಪಿ ಮಂಗಳೂರು ಉತ್ತರ ಮಂಡಲ ಯುವಮೋರ್ಚಾ ಕಾರ್ಯಕರ್ತರು ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ನಡೆಸಲು ಮುಂದಾದರು.
ಇದನ್ನು ಓದಿದ್ದೀರಾ? ಪುತ್ತೂರು | ‘ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರ’ದ ಹೇಳಿಕೆ: ರೌಡಿಶೀಟರ್ ಭರತ್ ಕುಮ್ಡೇಲು ವಿರುದ್ಧ ಎಫ್‌ಐಆರ್
ಈ ವೇಳೆ ತಕ್ಷಣ ಕಾರ್ಯ ಪ್ರವೃತ್ತರಾದ ಬಂದೋಬಸ್ತ್‌ನಲ್ಲಿದ್ದ ಪೊಲೀಸರು, ಪ್ರತಿಭಟನಾಕಾರರನ್ನು ಬಂಧಿಸಿ, ಕರೆದೊಯ್ದರು.


