ಮಂಗಳೂರು | BSWT ವರ್ಷದ ವ್ಯಕ್ತಿ-25 ಪ್ರಶಸ್ತಿಗೆ ಹಿರಿಯ ಸಮಾಜ ಸೇವಕ ಉಡುಪಿ ಮೂಲದ ದಿನೇಶ್ ಪೈ ಆಯ್ಕೆ

Date:

ಭಾರತ್ ಸೋಶಿಯಲ್ ವೆಲ್ಫೇರ್ ಟ್ರಸ್ಟ್ ಮಂಗಳೂರು (BSWT) ಇದರ 2025ನೇ ಸಾಲಿನ BSWT ವರ್ಷದ ವ್ಯಕ್ತಿ ಪ್ರಶಸ್ತಿಗೆ ಹಿರಿಯ ಸಮಾಜ ಸೇವಕ ಉಡುಪಿ ಮೂಲದ ದಿನೇಶ್ ಪೈ ಅವರನ್ನು ಆಯ್ಕೆ ಮಾಡಲಾಗಿದೆ.

- Advertisement -

ನಿಸ್ವಾರ್ಥ ಸಮಾಜ ಸೇವಕರಾದ ದಿನೇಶ್ ಪೈಯವರು ಸರಕಾರದ ಸಹಾಯಧನ ಮತ್ತು ದಾನಿಗಳ ನೆರವಿನಿಂದ ಗ್ರಾಮಾಂತರ ಪ್ರದೇಶದಲ್ಲಿ ಹಾಗೂ ನಗರಸಭಾ ವ್ಯಾಪ್ತಿಯಲ್ಲಿ ಬಡವರಿಗೆ ಮನೆಗಳನ್ನು ನಿರ್ಮಿಸಿಕೊಟ್ಟಿದ್ದಾರೆ.18 ವರ್ಷಗಳಿಂದ ಸುಮಾರು 700 ಕ್ಕೂ ಹೆಚ್ಚು ಮಕ್ಕಳಿಗೆ ಪುಸ್ತಕಗಳನ್ನು ವಿತರಿಸುತ್ತಿದ್ದಾರೆ. ಕಡುಬಡವರಿಗೆ, ವಿಶಿಷ್ಟ ಚೇತನರಿಗೆ, ವೃದ್ಧರಿಗೆ ಸಹಾಯ ಮಾಡುವುದು ಅಪಘಾತಗೊಂಡ ಬಡ / ನಿರುದ್ಯೋಗಿಗಳಿಗೆ 15 ದಿನಗಳವರೆಗೆ ಆಹಾರ ಸಾಮಗ್ರಿಗಳನ್ನು ವಿತರಿಸುತ್ತಾರೆ ಮತ್ತು ಬೇಸಿಗೆಯ ಸಮಯದಲ್ಲಿ ನೀರಿನ ಸೌಲಭ್ಯವನ್ನು ಒದಗಿಸುವ ಕಾರ್ಯವನ್ನು ಮಾಡಿದ್ದಾರೆ. ಕೊರೋನಾ ಸಂದರ್ಭ ಅರ್ಹ ಕುಟುಂಬಗಳಿಗೆ ದಾನಿಗಳಿಂದ ಹಣ ಸಂಗ್ರಹಿಸಿ ಆಹಾರ ಕಿಟ್ ವಿತರಿಸಿದ್ದಾರೆ. ತನ್ನ ವ್ಯಾಪ್ತಿಯಲ್ಲಿ ಈವರೆಗೆ 400 ಕ್ಕೂ ಅಧಿಕ ಅರ್ಹರಿಗೆ BPL Card ವಿತರಿಸುವ ಕೆಲಸ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

2008 ರಲ್ಲಿ ಆರಂಭವಾದ ಇವರ ಸಮಾಜ ಸೇವೆಯಲ್ಲಿ ಮುಖ್ಯವಾಗಿ ಪ್ರತಿ ದಿನ ಬೆಳಿಗ್ಗೆ 10 ರಿಂದ 1 ರವರೆಗೆ ಮೂರು ತಾಸು ನಗರಸಭೆಯಲ್ಲಿ ಲಭ್ಯರಿರುತ್ತಾರೆ. ಅಲ್ಲಿಗೆ ಬರುವ ಎಲ್ಲರಿಗೂ ತನ್ನಿಂದಾಗುವ ಸೇವೆಯನ್ನು ಉಚಿತವಾಗಿ ನೀಡುತ್ತಾರೆ. 75 ವರ್ಷ ವಯಸ್ಸಿನ ಇವರು ಪ್ರತಿದಿನ ಪ್ರತಿ ಮನೆಗೆ ಭೇಟಿ ನೀಡಿ ಅವರ ಸಮಸ್ಯೆಗನ್ನು ಆಲಿಸಿ ಪರಿಹಾರ ಸೂಚಿಸುತ್ತಾರೆ.
ಊರಿನ ಅರ್ಹರಿಗೆ ಸರ್ಕಾರದ ಸೌಲಭ್ಯವನ್ನು ತಲುಪಿಸುವ ಪ್ರಯತ್ನ ಮಾಡುತ್ತಾರೆ.

ಎಲೆಮರೆಯ ಕಾಯಿಯಂತೆ ಇಷ್ಟು ವರ್ಷಗಳ ಕಾಲ ಇವರು ಮಾಡಿದ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್ 2025 ನೇ ಸಾಲಿನ “BSWT ವರ್ಷದ ವ್ಯಕ್ತಿ”ಯಾಗಿ ಆಯ್ಕೆ ಮಾಡಿದೆ. ಈ ಪ್ರಶಸ್ತಿಯೂ 25 ಸಾವಿರ ರೂ ನಗದು ಮತ್ತು ಸನ್ಮಾನ ಪತ್ರ, ಫಲಕ, ಫಲ ಹಾಗೂ ಉಡುಗೊರೆಯನ್ನು ಒಳಗೊಂಡಿರುತ್ತದೆ. ದಿನಾಂಕ 24 ಜನವರಿ 2026 ರಂದು ಮಂಗಳೂರು ವಿಶ್ವ ವಿದ್ಯಾಲಯ ಕಾಲೇಜು ಹಂಪನಕಟ್ಟೆ ಇಲ್ಲಿನ ರವೀಂದ್ರ ಕಲಾ ಭವನದಲ್ಲಿ 200 ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸುವ ಹಾಗೂ BSWT ದಶಮಾನೋತ್ಸವದ ‌ಸಮಾರೋಪ ಸಮಾರಂಭದ ಶುಭ ಸಂದರ್ಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಕಾರ್ಯದರ್ಶಿ ಆಕಿಫ್ ಇಂಜಿನಿಯರ್ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...

ಕೋಲಾರ | ಹಾಲು ಉತ್ಪಾದಕರಿಗೆ ಕೋಮುಲ್, ಕೆಎಂಎಫ್ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಚಂಚಿಮಲೆ ರಮೇಶ್

ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 10ನೇ ವಾರ್ಡ್‌ನ ಹಾರ್ಜೇನಹಳ್ಳಿ...