ಮಂಗಳೂರು | ಡಿವೈಡರ್‌ಗೆ ಕಾರು ಡಿಕ್ಕಿ; NSUI ಮುಖಂಡ ಸೇರಿ ಇಬ್ಬರು ಸಾವು

Date:

ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಎನ್ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷ ಸೇರಿ ಇಬ್ಬರು ಮೃತಪಟ್ಟಿರುವ ದುರ್ಘಟನೆ ಮಂಗಳೂರು ನಗರದ ಜಪ್ಪಿನಮೊಗರು ನಡುಮುಗೇರ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.

- Advertisement -

ಮೃತರನ್ನು ಎನ್ಎಸ್‌ಯುಐ ಮುಖಂಡ ದೇರೆಬೈಲ್ ನಿವಾಸಿ ಓಂ ಶ್ರೀ ಪೂಜಾರಿ (24) ಹಾಗೂ ಕದ್ರಿ ನಿವಾಸಿ ಅಮನ್ ರಾವ್ (23) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಓಂ ಶ್ರೀ ಪೂಜಾರಿ ಹಾಗೂ ನಾಲ್ವರು ಸ್ನೇಹಿತರು ನಿನ್ನೆ ತಡರಾತ್ರಿಯಲ್ಲಿ ತಲಪಾಡಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದರು‌. ಜಪ್ಪಿನಮೊಗರುವಿನಲ್ಲಿ ಚಾಲಕ ಅಮನ್ ರಾವ್ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಏರಿ ಬಳಿಕ ಪಲ್ಟಿಯಾಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಚಾಲಕ ಹಾಗೂ ಹಿಂಭಾಗದ ಸೀಟ್‌ನಲ್ಲಿದ್ದ ಓಂ ಶ್ರೀ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮಂಗಳೂರು | ಚಿಂತಕರು, ಸಾಮಾಜಿಕ ಕಾರ್ಯಕರ್ತರ ಜೊತೆ ಬಿ ಕೆ ಹರಿಪ್ರಸಾದ್‌ ಚರ್ಚೆ

ಕಾರಿನಲ್ಲಿ ಇನ್ನೂ ಮೂವರಿದ್ದು, ಓರ್ವನ ಬೆನ್ನು ಮೂಳೆ ಮುರಿದರೆ, ಮತ್ತೋರ್ವನ ಕಾಲು ಮುರಿದಿದೆ. ಮತ್ತೋರ್ವ ಅಪಾಯದಿಂದ ಪಾರಾಗಿದ್ದಾನೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...