ಮಂಗಳೂರು | ಕಾರ್‌ ಸ್ಟ್ರೀಟ್‌ ಚಿನ್ನದ ಗಟ್ಟಿ ದರೋಡೆ ಪ್ರಕರಣ; ಆರೋಪಿಗಳ ಬಂಧನ

Date:

ಮಂಗಳೂರು ನಗರದ ಹೃದಯ ಭಾಗದಲ್ಲಿರುವ ಕಾರ್ ಸ್ಟ್ರೀಟ್ ಬಳಿ ಸೆಪ್ಟೆಂಬರ್ 26ರಂದು ನಡೆದ ಸಿನಿಮೀಯ ಶೈಲಿಯ ಚಿನ್ನದ ಗಟ್ಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳು ಮತ್ತು ಒಬ್ಬ ಬಾಲಕನನ್ನು ಮಂಗಳೂರು ಉತ್ತರ ಠಾಣೆ ಪೊಲೀಸರು ಬಂಧಿಸಿದ್ದು, ದರೋಡೆಗೆ ಬಳಸಿದ ಒಂದು ಸ್ಕೂಟರನ್ನು ವಶಪಡಿಸಿಕೊಳ್ಳಲಾಗಿದೆ.

- Advertisement -

ಹಂಪನಕಟ್ಟೆಯಲ್ಲಿರುವ ಚಾಯ್ಸ್ ಗೋಲ್ಡ್ ಚಿನ್ನಾಭರಣದ ಅಂಗಡಿಯ ಕೆಲಸಗಾರ ಮುಸ್ತಾಫಾ ಸೆ. 26ರಂದು ರಾತ್ರಿ 8:45ರ ಸುಮಾರಿಗೆ ತಮ್ಮ ಸ್ಕೂಟರ್ (ನಂ. KA-19EZ-2079) ಸೀಟಿನ ಅಡಿಯಲ್ಲಿ ಚಿನ್ನದ ಗಟ್ಟಿಯನ್ನು ಇಟ್ಟುಕೊಂಡು ಹೋಗುತ್ತಿದ್ದರು. ಅವರು ಕಾರ್ ಸ್ಟ್ರೀಟ್‌ನ ವೆಂಕಟರಮಣ ದೇವಸ್ಥಾನದ ಎದುರಿನ ರಸ್ತೆಗೆ ಬರುತ್ತಿದ್ದಂತೆ, ಮತ್ತೊಂದು ಸ್ಕೂಟರ್‌ನಲ್ಲಿ ಬಂದ ಇಬ್ಬರು ಆಗಂತುಕರು ಅವರನ್ನು ಅಡ್ಡಗಟ್ಟಿದ್ದಾರೆ. ಇದೇ ವೇಳೆ, ಕಾರೊಂದರಲ್ಲಿ ಬಂದ ಉಳಿದ ಆರೋಪಿಗಳು ಮುಸ್ತಾಫಾ ಅವರನ್ನು ಬಲವಂತವಾಗಿ ಕಾರಿನಲ್ಲಿ ಅಪಹರಣ ಮಾಡಿಕೊಂಡು ಹೋಗಿದ್ದಾರೆ. ಅಪಹರಣದ ನಂತರ ಹಲ್ಲೆ ನಡೆಸಿ, ಅವರನ್ನು ಮಂಗಳೂರಿನ ಎಕ್ಕೂರು ಎಂಬಲ್ಲಿ ಕಾರಿನಿಂದ ಇಳಿಸಿ ಚಿನ್ನದ ಗಟ್ಟಿಯನ್ನು ದರೋಡೆ ಮಾಡಿಕೊಂಡು ಪರಾರಿಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಫಾರಿಶ್ (18 ), ಸಫ್ವಾನ್ (23 ), ಅರಾಫತ್ ಆಲಿ (18 ), ಫರಾಝ್ (19) ಮತ್ತು ಕಾನೂನು ಸಂಘರ್ಷಕ್ಕೊಳಗಾದ ಬಾಲಕ ಬಂಧಿತ ಆರೋಪಿಗಳು.

ಈ ದರೋಡೆ ಪೂರ್ವಯೋಜಿತ ಕೃತ್ಯವಾಗಿದ್ದು, ದರೋಡೆಗೆ ಒಳಗಾದ ಚಾಯ್ಸ್ ಗೋಲ್ಡ್ ಅಂಗಡಿಯಲ್ಲೇ ಹಿಂದೆ ಕೆಲಸ ಮಾಡಿದ್ದ ಆರೋಪಿ ಫಾರಿಶ್ ಈ ಪಿತೂರಿ ಯೋಜಿಸಿದ ಪ್ರಮುಖನಾಗಿದ್ದಾನೆ. ಇದೇ ಅಂಗಡಿಯಲ್ಲಿ ಪ್ರಸ್ತುತ ಕೆಲಸ ಮಾಡುತ್ತಿದ್ದ ಬಾಲಕನು, ಮುಸ್ತಾಫಾ ಅವರು ಚಿನ್ನದ ಗಟ್ಟಿಯನ್ನು ತೆಗೆದುಕೊಂಡು ಹೋಗುವ ಸಮಯದ ಬಗ್ಗೆ ಫಾರಿಶ್‌ಗೆ ಖಚಿತ ಮಾಹಿತಿ ನೀಡಿದ್ದ. ಈ ಮಾಹಿತಿಯನ್ನೇ ಆಧರಿಸಿ ಉಳಿದ ಆರೋಪಿಗಳೊಂದಿಗೆ ಸೇರಿ ಫಾರಿಶ್ ಈ ದರೋಡೆ ಸಂಚನ್ನು ರೂಪಿಸಿದ್ದಾನೆ. ಆರೋಪಿ ಸಫ್ವಾನ್ ಕೃತ್ಯಕ್ಕೆ ಕಾರನ್ನು ಒದಗಿಸಿದ್ದಾನೆ.

ಇದನ್ನೂ ಓದಿ: ಮಂಗಳೂರು | ಕೆಲಸ ನಿರಾಕರಣೆ; ಪ್ರತಿಭಟನೆಗಿಳಿದ ಹಳೆ ಬಂದರು ಹಮಾಲಿ ಕಾರ್ಮಿಕರು

ಕೃತ್ಯಕ್ಕೆ ಉಪಯೋಗಿಸಿದ ಕಾರು ಹಾಗೂ ದರೋಡೆ ಮಾಡಿದ ಚಿನ್ನದ ಗಟ್ಟಿಯನ್ನು ಸ್ವಾಧೀನಪಡಿಸಿಕೊಳ್ಳಲು ಮತ್ತು ಉಳಿದ ಆರೋಪಿಗಳನ್ನು ದಸ್ತಗಿರಿ ಮಾಡಲು ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...