ಮಂಗಳೂರು | ಕಟ್ಟಡ ನಿರ್ಮಾಣಕ್ಕೆ ಪೂರಕವಾಗಿ ಕರಾವಳಿ ಮರಳು ನೀತಿ ಜಾರಿಗೆ ಬರಲಿ: ವಸಂತ ಆಚಾರಿ

Date:

Advertisements

ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಕಳೆದ ಒಂದು ತಿಂಗಳಿಂದ ಕೆಂಪು ಕಲ್ಲು ಮತ್ತು ಮರಳು ಪೂರೈಕೆಯಾಗದೆ ನಿರ್ಮಾಣ ವಲಯ ಸ್ಥಬ್ಧವಾಗಿದೆ. ಕಾರ್ಮಿಕರು ಕೆಲಸವಿಲ್ಲದೆ ಜೀವನ ನಿರ್ವಹಿಸಲಾಗದೆ ಅತಂತ್ರ ಪರಿಸ್ಥಿತಿಯಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಜಿಲ್ಲೆಯಾದ್ಯಂತ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಯಿತು.

ಇಂದು ಉಳ್ಳಾಲ ತಾಲೂಕಿನ ದೇರಳಕಟ್ಟ ಸಮೀಪದಿಂದ ನೂರಾರು ಕಾರ್ಮಿಕರು, ಜಿಲ್ಲಾಡಳಿತದ ಈ ದಿಡೀರ್ ಕ್ರಮವನ್ನ ಖಂಡಿಸಿ ಘೋಷಣೆಗಳನ್ನು ಕೂಗುತ್ತಾ ಸಾಗಿದರು. ಬಳಿಕ ನಾಟೆಕಲ್ ನಲ್ಲಿರುವ ತಾಲೂಕು ಕಚೇರಿ ಎದುರು ಪ್ರತಿಭಟನಾ ಸಭೆಯನ್ನು ನಡೆಸಲಾಯಿತು.

ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಫೆಡರೇಶನ್‌ನ ಜಿಲ್ಲಾಧ್ಯಕ್ಷರಾದ ವಸಂತ ಆಚಾರಿ, ಕಳೆದ ಒಂದು ತಿಂಗಳಿಂದ ಮರಳು ಮತ್ತು ಕೆಂಪು ಕಲ್ಲು ನಿಷೇಧದಿಂದ ಜಿಲ್ಲೆಯ ಯಾವುದೇ ನಿರ್ಮಾಣ ಯೋಜನೆಗಳು ನಡೆಯದೆ ಅಭಿವೃದ್ಧಿಯಲ್ಲಿ ಕುಂಠಿತವಾಗಿದೆ. ಬಿಜೆಪಿ ಸರ್ಕಾರದ ಆಡಳಿತ ಅವಧಿಯಲ್ಲಿ ಇಂತಹ ಅಕ್ರಮ ಮರಳುಗಾರಿಕೆಗೆ ಮತ್ತು ಅಕ್ರಮ ಚಟುವಟಿಕೆಗಳಿಗೆ ಆರಂಭ ದೊರೆಯಿತು. ಅಕ್ರಮ ದಂಧೆಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ಸಿಗರ ಸಮಾನ ಪಾಲು ಇದೆ. ಜಿಲ್ಲೆಯಲ್ಲಿ ಕೆಂಪುಕಲ್ಲು ಮತ್ತು ಮರಳು ಅಭಾವದ ಈ ಪರಿಸ್ಥಿತಿಗೆ ಇಲ್ಲಿನ ಬಿಜೆಪಿಯ ಸಂಸದರು ಮತ್ತು ಶಾಸಕರು ನೇರ ಹೊಣೆಯಾಗಿದ್ದಾರೆ. ಕಳೆದ ಹಲವು ಮೂರು ದಶಕಗಳಿಂದ ಜಿಲ್ಲೆಯಿಂದ ಗೆದ್ದು ಹೋದಂತಹ ಸಂಸದರು ಎಂಎಲ್ಎಗಳು ಇದರ ಬಗ್ಗೆ ಇಷ್ಟರವರೆಗೆ ಚಕಾರವೆತ್ತುತ್ತಿಲ್ಲ. ಆದ್ದರಿಂದ ಅವರಿಗೆ ಇದನ್ನು ಪ್ರತಿಭಟಿಸುವ ಯಾವುದೇ ನೈತಿಕತೆ ಇಲ್ಲ ಎಂದರು. ಇಂತಹ ಬೆಳವಣಿಗೆಗಳಿಂದ ಜಿಲ್ಲೆಯ ಲಕ್ಷಕ್ಕೂ ಮಿಕ್ಕಿದ ಕಾರ್ಮಿಕರು ಕೆಲಸವಿಲ್ಲದೆ ಪರಿತಪಿಸುತ್ತಿದ್ದಾರೆ. ಅಂತಹ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ರೂಪಾಯಿ 10,000 ಪರಿಹಾರ ಧನ ನೀಡಬೇಕೆಂದು ಅವರು ಹೇಳಿದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾರ್ ಮಾತನಾಡಿ, ಜಿಲ್ಲೆಯಲ್ಲಿ ಅವ್ಯಾವತವಾಗಿ ಅಡೆತಡೆ ಇಲ್ಲದೆ ನಡೆಯುತ್ತಿದ್ದ ಅಕ್ರಮ ದಂಧೆಗಳಿಗೆ ಈಗ ಅಧಿಕಾರ ವಹಿಸಿಕೊಂಡಿರುವ ದಕ್ಷ ಮತ್ತು ನಿಷ್ಠಾವಂತ ಪೊಲೀಸ್ ಅಧಿಕಾರಿ ಮತ್ತು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ವಹಿಸಿರುವ ಕಾರಣ ಮರಳು ಮತ್ತು ಕೆಂಪು ಕಲ್ಲು ಅಭಾವ ಉಂಟಾಗಿದೆ. ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯೂ ಅಕ್ರಮವಾಗಿ ಅನೇಕ ವರ್ಷಗಳಿಂದ ನಡೆಯುತ್ತಲೇ ಇದೆ. ಇದೊಂದು ಪ್ರಬಲ ಮಾಫಿಯವಾಗಿದೆ . ಇದರ ನಿಯಂತ್ರಣ ಅಗತ್ಯವಾಗಿ ಆಗಬೇಕಿದೆ. ಆದರೆ ಇಂತಹ ದಿಡೀರ್ ಕ್ರಮಗಳನ್ನು ಕೈಗೊಳ್ಳುವಾಗ ದೂರ ದೃಷ್ಟಿಯ ಯೋಜನೆಯನ್ನು ಹಮ್ಮಿಕೊಂಡಿದ್ದರೆ ಒಳ್ಳೆಯದು. ಕೆಂಪು ಕಲ್ಲು ಮತ್ತು ಮರಳು ಕಾಲ ಸಂತೆಯಲ್ಲಿ ದುಬಾರಿ ಬೆಲೆಗಳಿಗೆ ಬಿಕರಿಯಾಗುತ್ತಿವೆ. ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಂಡು ಕಾಮಗಾರಿಗಳು ಸರಾಗವಾಗಿ ನಡೆಯುವಂತೆ ಕಾರ್ಮಿಕರ ಉದ್ಯೋಗ ನಷ್ಟವಾಗದಂತೆ ಸರಳವಾಗಿ ಕಚ್ಚಾ ವಸ್ತುಗಳು ಪೂರೈಕೆ ಮಾಡಲು ಸಾಧ್ಯವಾಗಬೇಕು ಎಂದರು.

ಸಿಡಬ್ಲ್ಯೂಎಫ್‌ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು ಮಾತನಾಡಿ, ಕಳೆದ ಕೆಲವು ವರ್ಷಗಳಿಂದ ಇಲ್ಲಿನ ಅಕ್ರಮ ದಂದೆಗಳ ವಿರುದ್ಧ ಹೋರಾಟ ನಡೆಸಿ ಮನವಿಗಳನ್ನು ಅರ್ಪಿಸುತ್ತಾ ಬಂದರು ಈ ಮೊದಲಿನ ಕಮಿಷನರ್ ಅನುಪಮ ಅಗರ್ವಾಲ್ ರಾಜಕಾರಣಿಗಳ ತಾಳಕ್ಕೆ ತಕ್ಕಂತೆ ಎಲ್ಲಾ ರೀತಿಯ ಅಕ್ರಮಗಳನ್ನು ಬೆಳೆಸಲು ಪ್ರತ್ಯಕ್ಷವಾಗಿ ದಂಧೆ ಕೋರರ ಬೆನ್ನಿಗೆ ನಿಂತರು. ಗಣಿ ಇಲಾಖೆಯು ಭ್ರಷ್ಟಾಚಾರದ ಕೂಪವಾಗಿದೆ. ಆದ್ದರಿಂದ ಇಂತಹ ಅಧಿಕಾರಿಗಳ ವಿರುದ್ಧ ಕಠಿಣವಾದ ಕ್ರಮಗಳನ್ನು ಜರುಗಿಸಿದರೆ ಮಾತ್ರ ಅಕ್ರಮಗಳಿಗೆ ಕಡಿವಾಣ ಹಾಕಬಹುದು. ಅಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳದ ಹೊರತು ಏಕಾಏಕಿಯಾಗಿ ಮರಳು ಮತ್ತು ಕೆಂಪು ಕಲ್ಲು ತೆಗೆಯುವುದನ್ನು ನಿಷೇಧಿಸುವುದು ಸರಿಯಾದ ಕ್ರಮ ಅಲ್ಲ. ಆದ್ದರಿಂದ ಜಿಲ್ಲಾಡಳಿತ ಈ ಕೂಡಲೇ ಮಧ್ಯ ಪ್ರವೇಶಿಸಿ ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಮರಳು ಮತ್ತು ಕಲ್ಲು ಪೂರೈಕೆ ಆಗುವಂತೆ ಅಗತ್ಯ ಕ್ರಮ ವಹಿಸಬೇಕೆಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಸಿದ್ದರಾಮಯ್ಯನವರೇ, ಸಾಮಾಜಿಕ ನ್ಯಾಯ ನಿಮ್ಮ ನುಡಿಯಲ್ಲಿದೆ, ಅದು ನಡೆಯಲ್ಲೂ ಇರಲಿ- ಪ್ರಕಾಶ್‌ ರಾಜ್‌

ಸಭೆಯನ್ನು ಉದ್ದೇಶಿಸಿ ಸಿಐಟಿಯು ಜಿಲ್ಲಾ ಉಪಾಧ್ಯಕ್ಷರಾದ ಸುಕುಮಾರ್ ತೊಕ್ಕೊಟ್ಟು ಕಟ್ಟಡ ಕಾರ್ಮಿಕರ ಸಂಘಟನೆಯ ಉಳ್ಳಾಲ ತಾಲೂಕು ಅಧ್ಯಕ್ಷರಾದ ಜನಾರ್ಧನ ಕುತ್ತಾರು ಮಾತನಾಡಿದರು. ಸಭೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಕೃಷ್ಣಪ್ಪ ಸಾಲಿಯಾನ್ , ಶೇಕರ್ ಕುಂದರ್, ತಾಲೂಕು ಕಾರ್ಯದರ್ಶಿ ರಿಜ್ವಾನ್ ಹರೇಕಳ, ಇದ್ದರು.

ಸಭೆ ನೇತೃತ್ವವನ್ನು ಇಬ್ರಾಹಿಂ ಮದಕ, ಜಯಂತ ನಾಯಕ್, ನವೀನ್ ಗಿರಿಯ ಮೂಲೆ, ಪೆನ್ಸನ್ ದಾರರ ಅಧ್ಯಕ್ಷರಾದ ಸುಧಾಕರ್ ಆಳ್ವಾ. ಮುಂತಾದವರು ವಹಿಸಿದ್ದರು. ರೋಹಿದಾಸ್ ಭಟ್ನಗರ ಸ್ವಾಗತಿಸಿ, ನಿರೂಪಿಸಿದರು , ರಾಮಚಂದ್ರ ಪಜೀರ್ ವಂದಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಡುಕೋಣ ದಾಳಿ ವ್ಯಕ್ತಿ ಗಂಭೀರ

ಕಾಡುಕೋಣ ದಾಳಿಯಿಂದ ವ್ಯಕ್ತಿ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಾಳೂರು...

ರಾಯಚೂರು | ರಕ್ತಹೀನತೆ, ತಾಯಿ ಶಿಶು ಮರಣ ನಿಯಂತ್ರಣಕ್ಕೆ ಒತ್ತಾಯಿಸಿ ಮಹಿಳಾ ಒಕ್ಕೂಟ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಹಿಳೆಯರಲ್ಲಿ ರಕ್ತ ಹೀನತೆ ಹಾಗೂ...

ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ,...

ಚಿಕ್ಕಮಗಳೂರು l 1% ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು; ಎದ್ದೇಳು ಕರ್ನಾಟಕ

ಬದುಕಿನ್ನುದ್ದಕ್ಕೂ ಅಲೆಯುತ್ತಲೇ ಬದುಕಿದ ಅಲೆಮಾರಿ ಬಂಧುಗಳು ಇಂದು ನ್ಯಾಯ ಅರೆಸುತ್ತಾ ದೆಹಲಿಗೆ...

Download Eedina App Android / iOS

X