ಮಂಗಳೂರು | ಕಟ್ಟಡ ನಿರ್ಮಾಣ ಕಾರ್ಮಿಕರ ಪ್ರತಿಭಟನೆ; ಕೆಂಪು ಕಲ್ಲು, ಮರಳು ವಿತರಣೆಗೆ ತುರ್ತು ಕ್ರಮಕ್ಕೆ ಆಗ್ರಹ

Date:

ಕಳೆದ ಮೂರ್ನಾಲ್ಕು ತಿಂಗಳಿನಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವದ ತೀವ್ರತೆ ಹೆಚ್ಚಾಗಿದೆ. ಜಿಲ್ಲಾಡಳಿತದ ಕಠಿಣ ನಿಯಮಗಳಿಂದ ಕಟ್ಟಡ ಮತ್ತು ನಿರ್ಮಾಣ ರಂಗಕ್ಕೆ ತೀವ್ರವಾದ ತೊಂದರೆಯಾಗಿದೆ ಎಂದು ಕಾರ್ಮಿಕರ ಫೆಡರೇಶನ್‌ನ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಅಧ್ಯಕ್ಷ ಕೆ.ಯಾದವ ಶೆಟ್ಟಿ ಹೇಳಿದ್ದಾರೆ

- Advertisement -

ಸೋಮವಾರ ನಗರದ ಮಿನಿ ವಿಧಾನ ಸೌಧದ ಮುಂಭಾಗ ಸಿಐಟಿಯು ಮತ್ತು ಎಐಟಿಯುಸಿ ನೇತೃತ್ವದ ಕಟ್ಟಡ ಕಾರ್ಮಿಕರ ಸಂಘಟನೆಯ ವತಿಯಿಂದ ನಡೆದ ಬೃಹತ್ ಪ್ರತಿಭಟನಾ ಪ್ರದರ್ಶನವನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಇದನ್ನೂ ಓದಿ: ಎಫ್‌ಎಸ್ಎಲ್ ವರದಿ ಬರುವವರೆಗೆ ಧರ್ಮಸ್ಥಳದಲ್ಲಿ ಶೋಧ ಕಾರ್ಯ ಸ್ಥಗಿತ: ಗೃಹ ಸಚಿವ ಡಾ. ಜಿ ಪರಮೇಶ್ವರ್

ಜಿಲ್ಲಾಡಳಿತದ ನೀತಿಯಿಂದ ಕಟ್ಟಡ ಕಾರ್ಮಿಕರು ಮತ್ತು ಅವರ ಕುಟುಂಬ ಈಗ ಸಂಪೂರ್ಣವಾಗಿ ಬೀದಿ ಪಾಲಾಗಿದ್ದು, ಇದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆಯಾಗಿದೆ. ಅಕ್ರಮ ದಂಧೆ ತಡೆಯುವ ಕ್ರಮವು ಸ್ವಾಗತಾರ್ಹವಾಗಿದ್ದರೂ ಅದರಿಂದ ಸೃಷ್ಟಿಯಾಗಿರುವಂತಹ ಇತರೆ ಸಮಸ್ಯೆಗಳಿಗೆ ಸರ್ಕಾರದಿಂದ ಯಾವುದೇ ರೀತಿಯ ಪರಿಹಾರ ಇಲ್ಲದಿರುವುದು ಖಂಡನೀಯ ಎಂದರು.

ಕಟ್ಟಡ ಕಾರ್ಮಿಕರ ರಂಗದ ಕೆಂಪು ಕಲ್ಲಿನ ಕೋರೆ ಪರವಾನಿಗೆ ಪದ್ಧತಿಯಲ್ಲಿ ಸರಳೀಕರಣ ಮತ್ತು ನ್ಯಾಯಯುತವಾಗಿರಲಿ. ಕೇರಳದ ಮಾದರಿಯಲ್ಲಿ ರಾಜಧನ ಪದ್ಧತಿ ಜಿಲ್ಲೆಯಲ್ಲಿ ಜಾರಿಯಾಗಲಿ, ಕರಾವಳಿಗೆ ಮರಳು ನೀತಿ ಜಾರಿಯಾಗಲು ರಾಜ್ಯ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಫೆಡರೇಶನ್ ಖಜಾಂಚಿ ಯೋಗೀಶ್ ಜಪ್ಪಿನಮೊಗರು, ಮುಂದಾಳುಗಳಾದ ಜನಾರ್ದನ ಕುತ್ತಾರ್, ಶಂಕರ ಮೂಡಬಿದರೆ, ಚಂದ್ರಹಾಸ ಪಿಲಾರ್, ವಿಶ್ವನಾಥ ಸುಳ್ಯ, ನೋಣಯ್ಯ ಗೌಡ ಕೈಕಂಭ, ರಾಮಚಂದ್ರ ಪಜೀರು, ಕಟ್ಟಡ ಮತ್ತು ಕೋರೆ ಕಾರ್ಮಿಕರ ಸಂಘ ಎಐಟಿಯುಸಿ ಮುಂದಾಳುಗಳಾದ ಎಚ್.ವಿ.ರಾವ್, ಕರುಣಾಕರ ಮಾರಿಪಳ್ಳ, ಶೇಖರ್ ಬಿ, ಸುರೇಶ್ ಬಿ, ವಿ.ಕುಕ್ಯಾನ್ ಮುಂತಾದವರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...