ಮಂಗಳೂರು | ದ.ಕ. ಜಿಲ್ಲೆಯ ಜನರ ಮೇಲೆ ಇಂದಿರಾ ಗಾಂಧಿಯ ಋಣಯಿದೆ: ರಮಾನಾಥ ರೈ

Date:

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ತುರ್ತು ಪರಿಸ್ಥಿತಿ ಹೆಸರಿನಲ್ಲಿ ಬಿಜೆಪಿ ನಾಯಕರು ಕರಾಳ ದಿನ ಆಚರಿಸುವ ಮೂಲಕ ಅವರಿಗೆ ಅವಮಾನ ಮಾಡುತ್ತಿದ್ದಾರೆ. ಬಿಜೆಪಿಯ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ದ.ಕ. ಜಿಲ್ಲೆಯ ಜನರ ಮೇಲೆ ಇಂದಿರಾ ಗಾಂಧಿಯ ಋಣವಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು.

- Advertisement -

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ತುರ್ತು ಪರಿಸ್ಥಿತಿಯಿಂದ ವಿಪಕ್ಷದವರಿಗೆ ತೊಂದರೆ ಆಗಿರಬಹುದು. ಆದರೆ ದುರ್ಬಲ ವರ್ಗದವರಿಗೆ ಯಾರಿಗೂ ಯಾವತ್ತಿಗೂ ಯಾವ ತೊಂದರೆ ಆಗಿಲ್ಲ. ಜೀತ ಪದ್ಧತಿ, ಋಣಭಾರ ಮುಕ್ತಿ ಸೇರಿದಂತೆ ಹಲವು ಜನಪರ ಕಾರ್ಯಕ್ರಮಗಳ ಫಲಾನುಭವಿಗಳು ದ.ಕ. ಜಿಲ್ಲೆಯವರು ಎಂಬುದು ವಾಸ್ತವ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಇಂದಿರಾ ಗಾಂಧಿಯವರ ಭೂ ಮಸೂದೆ ಕಾನೂನು ದ.ಕ. ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನವಾಗಿದೆ. ಬ್ಯಾಂಕ್‌ಗಳ ರಾಷ್ಟ್ರೀಕರಣದಿಂದಲೂ ಲಾಭವಾಗಿದೆ. ಇಂದಿರಾ ಗಾಂಧಿ ಕಾಲದಲ್ಲಿ ಜಿಲ್ಲೆಯ ಜನರಿಗೆ 20 ಅಂಶಗಳ ಕಾರ್ಯಕ್ರಮ, ನಿವೇಶನ, ದಖಾಸ್ತು ಭೂಮಿ ಹೀಗೆ ಹಲವು ಕಾರ್ಯಕ್ರಮ ಬಡವರ ಸಬಲೀಕರಣಕ್ಕೆ ಸಹಾಯವಾಗಿದೆ ಎಂಬುದು ತುರ್ತು ಪರಿಸ್ಥಿತಿಯ ಬಗ್ಗೆ ಮಾತನಾಡುವವರಿಗೆ ನೆನಪಿಸಬೇಕಾಗಿದೆ. ತುರ್ತು ಪರಿಸ್ಥಿತಿಯ ಬಳಿಕವೂ ದ.ಕ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವು ಭಾರೀ ಮತಗಳಿಂದ ಜಯಗಳಿಸಿದೆ. ಇದು ಇಂದಿರಾ ಗಾಂಧಿಯವರು ಮಾಡಿದ ಜನಪರ ಕಾರ್ಯಗಳನ್ನು ಜಿಲ್ಲೆಯ ಜನತೆ ಒಪ್ಪಿಕೊಂಡಿದ್ದಾರೆ ಎಂದು ಸಾಬೀತು ಮಾಡುತ್ತದೆ. ಇಂದಿರಾ ಗಾಂಧಿರವರು ದೇಶದ ಸಮಗ್ರತೆಗಾಗಿ ಪ್ರಾಣ ಕೊಟ್ಟ ಮಹಾನ್‌ ವ್ಯಕ್ತಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಒಬ್ಬ ಕಾರ್ಯಕರ್ತನಾಗಿ ಇಂದಿರಾ ಗಾಂಧಿಯವರ ಪ್ರಗತಿಪರ ಕಾರ್ಯಕ್ರಮಗಳನ್ನು ನೆನಪಿಸಿಕೊಳ್ಳುವುದು ನನ್ನ ಜವಾಬ್ದಾರಿ” ಎಂದರು.

ಇದನ್ನೂ ಓದಿ: ಮಂಗಳೂರು | ಕ್ಷಣಿಕ ಸುಖಕ್ಕೆ ಜೀವನ ಹಾಳು ಮಾಡಿಕೊಳ್ಳಬೇಡಿ: ಡಿಸಿ ದರ್ಶನ್

“ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುಜರಾತ್ ನರಮೇಧ, ಗೋಧ್ರಾ ಹತ್ಯಾಕಾಂಡ, ಭೀಮಾ ಕೊರೆಗಾಂವ್ ಪ್ರಕರಣ, ಈ.ಡಿ.ಯನ್ನು ಬಳಸಿಕೊಂಡು ವಿಪಕ್ಷ ನಾಯಕರನ್ನು ಜೈಲಿಗೆ ಹಾಕುವುದು, ಪತ್ರಕರ್ತರ ಮೇಲಿನ ದಬ್ಬಾಳಿಕೆ ಮಾಡಿರುವ ಬಿಜೆಪಿ ನಾಯಕರಿಗೆ ತುರ್ತು ಪರಿಸ್ಥಿತಿಯ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ” ಎಂದು ತಿರುಗೇಟು ನೀಡಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಶಶಿಧರ ಹೆಗ್ಡೆ, ನವೀನ್‌ ಡಿಸೋಜ, ಅಪ್ಪಿಲತಾ, ಪೃಥ್ವಿರಾಜ್, ಅಶೋಕ್ ಡಿ.ಕೆ., ಅಬ್ಬಾಸ್ ಅಲಿ, ಜಯಶೀಲ ಅಡ್ಯಂತಾಯ, ಜೆ. ಸಲೀಂ, ಇಬ್ರಾಹೀಂ ನವಾಝ್, ಸುಹಾನ್ ಆಳ್ವ ದಿನೇಶ್ಯುಮಾ‌ರ್, ನಿತ್ಯಾನಂದ ಶೆಟ್ಟಿ, ಶಬೀರ್, ಸುನೀಲ್ ಬಜಿಲಕೇರಿ, ಪ್ರಕಾಶ್ ಸಾಲ್ಯಾನ್ ಸೇರಿದಂತೆ ಮತ್ತಿತರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...