ಮಂಗಳೂರು | ಕುಪ್ಪೆಪದವು, ಇರುವೈಲು ಮಾರ್ಗದಲ್ಲಿ ಸರ್ಕಾರಿ ಬಸ್ ಸೇವೆಗೆ ಒತ್ತಾಯ

Date:

ಮಂಗಳೂರು ನಗರದಿಂದ ಸುಮಾರು 30 ಕಿಮೀ ದೂರದಲ್ಲಿರುವ, ಮಂಗಳೂರು ತಾಲೂಕಿನ ಕುಪ್ಪೆಪದವು ಗ್ರಾಮಕ್ಕೆ ಸರ್ಕಾರಿ ಬಸ್ ಸೇವೆ ಒದಗಿಸುವಂತೆ ಕುಪ್ಪೆಪದವು ವಲಯ ಕಟ್ಟಡ ಹಾಗೂ ನಿರ್ಮಾಣ ಕಾರ್ಮಿಕರ ಸಂಘ ಒತ್ತಾಯಿಸಿದೆ.

- Advertisement -

ಬಿಜೈನಲ್ಲಿರುವ ಕೆಎಸ್ಆರ್ಟಿಸಿ ವಿಭಾಗೀಯ ಕಚೇರಿ ಅಧಿಕಾರಿಗಳಿಗೆ ಈ ಕುರಿತು ಮನವಿ ಸಲ್ಲಿಸಿರುವ ಸಂಘವು, “ಗ್ರಾಮಸ್ಥರು ಬಸ್ ಪ್ರಯಾಣ ಸೇವೆಯಿಂದ ವಂಚಿತರಾಗಿದ್ದಾರೆ. ಖಾಸಗಿ ಬಸ್ಗಳು ಮಂಗಳೂರು ನಗರದಿಂದ ಕುಪ್ಪೆಪದವು ಗ್ರಾಮಕ್ಕೆ ಸಂಚರಿಸುತ್ತಿದ್ದರೂ, ಅದರ ಪ್ರಮಾಣ ಸಾಲದು” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

“ವಿದ್ಯಾರ್ಥಿಗಳು, ಕೂಲಿಕಾರರು, ವಿವಿಧ ಉದ್ಯೋಗಳಲ್ಲಿ ತೊಡಗಿಸಿಕೊಂಡವರು ನಿತ್ಯವು ಕೈಕಂಬ, ಮಂಗಳೂರು, ಮೂಡಬಿದ್ರೆಯನ್ನು ದೊಡ್ಡ ಪ್ರಮಾಣದಲ್ಲಿ ಅವಲಂಬಿಸಿದ್ದು, ಕುಪ್ಪೆಪದವು, ಇರುವೈಲು ಹಾಗೂ ಸುತ್ತಮುತ್ತಲಿನ ಜನತೆ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದಾರೆ. ಬೆಳಿಗ್ಗೆ ಹಾಗೂ ಸಂಜೆಯ ಹೊತ್ತು ಈಗಿರುವ ಬಸ್ಗಳಲ್ಲಿ ವಿಪರೀತ ನೂಕುನುಗ್ಗಲು ಇರುತ್ತದೆ. ಮಹಿಳೆಯರು, ವಿದ್ಯಾರ್ಥಿಗಳಿಗೆ ಪ್ರಯಾಣಿಸುವುದೇ ತೀರಾ ತ್ರಾಸದಾಯಕ ಆಗಿರುತ್ತದೆ” ಎಂದು ವಿವರಿಸಿದೆ.

“ಮಧ್ಯಾಹ್ನ, ಭಾನುವಾರ ಸೇರಿದಂತೆ ರಜಾದಿನಗಳಲ್ಲಿ, ದಿನದ ಕೊನೆಯ ಟ್ರಿಪ್ಗಳಲ್ಲಿ ಖಾಸಗಿ ಬಸ್ಗಳು ಟ್ರಿಪ್ ಕಟ್ ಮಾಡುವುದರಿಂದ ಗ್ರಾಮಸ್ಥರು ಅನುಭವಿಸುವ ಸಮಸ್ಯೆ ದೊಡ್ಡದಿದೆ. ಇದಲ್ಲದೆ, ಸರ್ಕಾರದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಅವಕಾಶದಿಂದಲೂ ನಮ್ಮ ಗ್ರಾಮದ ಮಹಿಳೆಯರು ವಂಚಿತರಾಗಿದ್ದಾರೆ” ಎಂದು ಸಂಘವು ಬೇಸರ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಮಂಗಳೂರು | ವ್ಯಕ್ತಿಗಿಂತ ಮೌಲ್ಯ ಮುಖ್ಯವಾಗಬೇಕು: ಸುಧೀರ್ ಕುಮಾರ್ ಮುರೊಳ್ಳಿ

“ಗ್ರಾಮಸ್ಥರ ಸಮಸ್ಯೆಗಳನ್ನು ಪರಿಗಣಿಸಿ ಮಂಗಳೂರು, ಕುಪ್ಪೆಪದವು ಇರುವೈಲು, ಮೂಡಬಿದ್ರೆ ಮಾರ್ಗವಾಗಿ ಕೆಎಸ್ಆರ್ಟಿಸಿ ವತಿಯಿಂದ ತಲಾ ಎರಡು ಬಸ್ಗಳ ಸೇವೆ ಒದಗಿಸಬೇಕು” ಎಂದು ಬೇಡಿಕೆ ಸಲ್ಲಿಸಲಾಗಿದೆ.

ಅಧಿಕಾರಿಗಳಿಗೆ ಮನವಿ ಸಲ್ಲಿಸುವ ವೇಳೆ ಸಂಘದ ಕಾರ್ಯದರ್ಶಿ ವಸಂತಿ ಕುಪ್ಪೆಪದವು, ಅಧ್ಯಕ್ಷ ದಿನೇಶ ಇರುವೈಲು, ಕೋಶಾಧಿಕಾರಿ ಜನಾರ್ದನ ಗೌಡ ಎಡಪದವು, ಪದಾಧಿಕಾರಿಗಳಾದ ಭಾಸ್ಕರ ಶೆಟ್ಟಿ ಮುತ್ತೂರು, ಇಬ್ರಾಹಿಂ, ಭವಾನಿ ಕುಪ್ಪೆಪದವು, ಗಣೇಶ್ ಕಾಪಿಕಾಡ್ ಮತ್ತು ಕಟ್ಟಡ ಕಾರ್ಮಿಕ ಸಂಘದ ಇತರೆ ಮುಖಂಡರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಗದಗ | ಕರ್ನಾಟಕ ಏಕೀಕರಣಕ್ಕಾಗಿ ನಾರಾಯಣರಾವ್ ಕೋಡುಗೆ ಅಪಾರ: ಹನುಮಂತಪ್ಪ ಅಬ್ಬಿಗೇರಿ

"ಕರ್ನಾಟಕ ಏಕೀಕರಣಕ್ಕಾಗಿ ಗದಗ ಜಿಲ್ಲೆಯ ಹುಯಿಲಗೋಳ ನಾರಾಯಣರಾವ್ ಅವರ ಕೊಡುಗೆ ಅಪಾರವಾಗಿದೆ....