ದೇಶದ ಪುರೋಗಾಮಿ ಮಹಿಳಾ ಚಳವಳಿಯಾದ ಜನವಾದಿ ಮಹಿಳಾ ಸಂಘಟನೆಯ 9ನೇ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನವು ಜುಲೈ 27ರಂದು ಮಂಗಳೂರು ನಗರದ ಬಲ್ಮಠದಲ್ಲಿರುವ ಬಿಷಪ್ ಜತ್ತನ್ನ ಸಭಾಂಗಣದಲ್ಲಿ ನಿರ್ಮಿಸಿರುವ ನಾಡೋಜ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯಲಿದೆ.
ಅಂದು ಬೆಳಿಗ್ಗೆ 10:00 ಗಂಟೆಗೆ ಸಮ್ಮೇಳನವನ್ನು ಲೇಖಕಿ, ಪ್ರಾಧ್ಯಾಪಕಿ ಡಾ. ಸಬಿತಾ ಬನ್ನಾಡಿ ಉದ್ಘಾಟಿಸಲಿದ್ದಾರೆ. ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾದ ಖ್ಯಾತ ರಂಗ ಕಲಾವಿದೆ ಗೀತಾ ಸುರತ್ಕಲ್ ಸ್ವಾಗತ ಭಾಷಣ ಮಾಡಲಿದ್ದಾರೆ. ಬರಹಗಾರರು, ಚಿಂತಕರೂ ಆಗಿರುವ ಚಂದ್ರಕಲಾ ನಂದಾವರ, ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಕಾರ್ಯದರ್ಶಿ ದೇವಿ, ಉಪಾಧ್ಯಕ್ಷೆ ಕೆ ಎಸ್ ಲಕ್ಷ್ಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಸ್ವಾಗತ ಸಮಿತಿ ಅಧ್ಯಕ್ಷರಾದ ಫ್ಲೇವಿ ಕ್ರಾಸ್ತಾ ಅತ್ತಾವರರವರು ವಹಿಸಲಿದ್ದಾರೆ. ಉದ್ಘಾಟನಾ ಗೋಷ್ಟಿಯ ತರುವಾಯ ಪ್ರತಿನಿಧಿ ಅಧಿವೇಶನ ಜರುಗಲಿದ್ದು, ಜಿಲ್ಲೆಯಲ್ಲಿ ಮಹಿಳೆಯರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಕುರಿತು ಗಂಭೀರ ಚರ್ಚೆ ನಡೆದು, ಮುಂಬರುವ ದಿನಗಳಲ್ಲಿ ಕರಾವಳಿ ಜಿಲ್ಲೆಯಲ್ಲಿ ಬಲಿಷ್ಠವಾದ ಮಹಿಳಾ ಚಳವಳಿ ಕಟ್ಟಲು ನೂತನ ನಾಯಕತ್ವವೂ ಕೂಡ ಈ ಸಮ್ಮೇಳನದಲ್ಲಿ ಹೊರಹೊಮ್ಮಲಿದೆ ಎಂದು JMS ಸಂಘಟನೆಯ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ: ಮಂಗಳೂರು | ಸಾಹಿತ್ಯ ಕ್ಷೇತ್ರದಲ್ಲಿ ಫಗು ಹಳಕಟ್ಟಿಯವರ ಸಾಧನೆ ಅಪಾರ: ಪ್ರಭಾಕರ್ ನೀರ್ಮಾರ್ಗ