ಮಂಗಳೂರು | ಫಲಾನುಭವಿಗಳ ಆಯ್ಕೆ ತ್ವರಿತವಾಗಿ ನಡೆಸಲು ಜಿಲ್ಲಾಧಿಕಾರಿ ಸೂಚನೆ

Date:

Advertisements

ವಿವಿಧ ನಿಗಮಗಳ ಸೌಲಭ್ಯಗಳಿಗೆ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಸಂಬಂಧಪಟ್ಟ ಇಲಾಖೆಗಳು ತ್ವರಿತವಾಗಿ ಪೂರ್ಣಗೊಳಿಸಿ ಸೌಲಭ್ಯವನ್ನು ಮಂಜೂರು ಮಾಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ.

ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಫಲಾನುಭವಿಗಳ ದಾಖಲೆ ಪರಿಶೀಲನೆ, ಸ್ಥಳ ಪರಿಶೀಲನೆ, ಮತ್ತಿತರ ಪ್ರಕ್ರಿಯೆಗಳನ್ನು ವಿಳಂಬವಾಗಿ ನಡೆಸುವುದು ಸರಿಯಲ್ಲ. ಇದರಿಂದ ಅರ್ಹ ಫಲಾನುಭವಿಗಳಿಗೆ ಸಕಾಲದಲ್ಲಿ ಸೌಲಭ್ಯಗಳು ಸಿಗುವುದಿಲ್ಲ. ಈ ನಿಟ್ಟಿನಲ್ಲಿ ಅಗತ್ಯವಿದ್ದರೆ ಮಾತ್ರ ಫಲಾನುಭವಿಗಳ ವಾಸಸ್ಥಳ ಪರಿಶೀಲನೆ ನಡೆಸಿ ತ್ವರಿತಗತಿಯಲ್ಲಿ ಸೌಲಭ್ಯಗಳನ್ನು ಮಂಜೂರು ಮಾಡಬೇಕು ಎಂದು ಅವರು ತಿಳಿಸಿದರು.

Advertisements
WhatsApp Image 2025 06 20 at 5.20.49 PM

ಫಲಾನುಭವಿಗಳ ಆಯ್ಕೆಯನ್ನು ಎಲ್ಲರಿಗೂ ಸಮಾನವಾಗಿ ದೊರಕಿಸಲು ತಾಲೂಕುವಾರು ಆಯ್ಕೆ ಪ್ರಕ್ರಿಯೆ ನಡೆಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಅವರು ಹೇಳಿದರು.

ಬ್ಯಾಂಕ್ ಆಧಾರಿತ ಸಾಲ ಸೌಲಭ್ಯಗಳಲ್ಲಿ ಫಲಾನುಭವಿಗಳಿಗೆ ಸೌಲಭ್ಯ ಮಂಜೂರು ಮಾಡುವಾಗ ಬ್ಯಾಂಕುಗಳು ಸಿಬಿಲ್ ಕಡಿಮೆ ನೆಪದಲ್ಲಿ ಅರ್ಜಿಗಳನ್ನು ತಿರಸ್ಕರಿಸುವುದರ ಬಗ್ಗೆ ಬ್ಯಾಂಕರ್ಸ್‍ಗಳೊಂದಿಗೆ ಚರ್ಚಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಯಾವುದೇ ಪೌರ ಕಾರ್ಮಿಕರು ಅಪಘಾತಕ್ಕೀಡಾದರೆ ಅಥವಾ ಮರಣ ಹೊಂದಿದರೆ ಆ ಬಗ್ಗೆ 24 ಗಂಟೆಯೊಳಗೆ ಜಿಲ್ಲಾಧಿಕಾರಿ ಕಚೇರಿಗೆ ವರದಿ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚಿಸಿದರು. ನಗರ ಪೌರಕಾರ್ಮಿಕರಿಗೆ ಸಿಗುವ ಸೌಲಭ್ಯಗಳು ಗ್ರಾಮ ಪಂಚಾಯತ್ ಪೌರಕಾರ್ಮಿಕರಿಗೂ ದೊರಕಿಸಬೇಕು. ಪೌರ ಕಾರ್ಮಿಕರ ಪರಿಹಾರ ಮೊತ್ತವನ್ನು ಬೇರೆ ಉದ್ದೇಶಕ್ಕೆ ಬಳಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಡಾ.ಜಿ.ಸಂತೋಷ್ ಮಾತನಾಡಿ, ಎಲ್ಲಾ ಇಲಾಖೆಗಳು ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಗಳಿಗೆ ತ್ವರಿತವಾಗಿ ಫಲಾನುಭವಿಗಳನ್ನು ಆಯ್ಕೆ ಮಾಡಿ ಕಾಲಮಿತಿಯಲ್ಲಿ ಅನುದಾನವನ್ನು ವೆಚ್ಚ ಮಾಡಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ 2025 ನೇ ಇಸವಿಯಲ್ಲಿ ಮೇ ಅಂತ್ಯದವರೆಗೆ 24 ದೌರ್ಜನ್ಯ ಪ್ರಕರಣ ದಾಖಲಾಗಿದ್ದು, ಈ ಪೈಕಿ 16 ಪ್ರಕರಣಗಳಲ್ಲಿ 22.10 ಲಕ್ಷ ರೂ. ಪರಿಹಾರವನ್ನು ನೀಡಲಾಗಿದೆ ಎಂದು ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಹೇಮಲತಾ ತಿಳಿಸಿದರು.

ಇದನ್ನು ಓದಿದ್ದೀರಾ? ಕುಂದಾಪುರ | ಪತ್ನಿಯ ರೀಲ್ಸ್ ನೋಡುವ ಹವ್ಯಾಸಕ್ಕೆ ಕೋಪಗೊಂಡ ಪತಿ: ಹಲ್ಲೆಗೈದು ಕೊಲೆ!

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಯಲಕ್ಷ್ಮಿ, ಉಪ ಪೊಲೀಸ್ ಆಯುಕ್ತ ಸಿದ್ದಾರ್ಥ್ ಗೋಯಲ್, ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗಿಸ್ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X