ಮಂಗಳೂರು | ಸಂಭಾವ್ಯ ಮಳೆ ಅನಾಹುತ ಪ್ರದೇಶಗಳನ್ನು ಗುರುತಿಸಲು ಜಿಲ್ಲಾಧಿಕಾರಿ ಸೂಚನೆ

Date:

Advertisements

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪಗಳಿಂದ ಅಪಾಯದ ಸಾಧ್ಯತೆ ಇರುವ ಪ್ರದೇಶಗಳನ್ನು ಮುಂದಿನ ಎರಡು ದಿನಗಳಲ್ಲಿ ಗುರುತಿಸಿ ವರದಿ ನೀಡಲು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೂಚಿಸಿದ್ದಾರೆ.

ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಭೂಕುಸಿತ, ನೀರು ಮುಳುಗಡೆ, ಸೇರಿದಂತೆ ತೀವ್ರ ಮಳೆಯಿಂದಾಗಿ ದುರಂತ ಘಟನೆಗಳು ನಡೆಯುವ ಸಾಧ್ಯತೆ ಇರುವ ಪ್ರದೇಶಗಳನ್ನು ಮೊದಲೇ ಗುರುತಿಸಬೇಕು. ರೆಡ್ ಅಲರ್ಟ್ ಅವಧಿಯಲ್ಲಿ ಅಲ್ಲಿನ ನಿವಾಸಿಗಳನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು. ಅಪಾಯಗಳ ಬಗ್ಗೆ ಅಲ್ಲಿನ ನಿವಾಸಿಗಳಿಗೆ ನೋಟಿಸ್ ನೀಡಿ ತಿಳಿಸಬೇಕು. ಸಂಭಾವ್ಯ ಭೂಕುಸಿತ ಅನಾಹುತ ಸ್ಥಳಗಳನ್ನು ಗುರುತಿಸದೆ ಅನಾಹುತ ಸಂಭವಿಸಿದರೆ ಆಯಾ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಅವರು ಎಚ್ಚರಿಸಿದರು.

Advertisements

ಸ್ಥಳೀಯ ಮಟ್ಟದಲ್ಲಿ ವಿಪತ್ತು ನಿರ್ವಹಣಾ ಯೋಜನೆ ರಚಿಸಬೇಕು. ಸಂಬಂಧಪಟ್ಟ ತಹಶೀಲ್ದಾರ್ ಮತ್ತು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಪರಿಶೀಲಿಸಬೇಕು ಎಂದು ಅವರು ತಿಳಿಸಿದರು.

ಪ್ರಾಕೃತಿಕ ದುರಂತದಲ್ಲಿ ನಡೆಯುವ ಜೀವಹಾನಿ ತಪ್ಪಿಸುವುದೇ ಮೊದಲ ಆದ್ಯತೆಯಾಗಿದೆ. ಪ್ರಮುಖವಾಗಿ ಜನವಸತಿ ಪ್ರದೇಶ ಮತ್ತು ಮನೆಗಳಲ್ಲಿ ವಾಸಿಸುವ ಸಾರ್ವಜನಿಕರ ರಕ್ಷಣೆ ಪ್ರಮುಖ ಗುರಿಯಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯ ಪ್ರತಿಯೊಂದು ಪ್ರದೇಶಕ್ಕೆ ಭೇಟಿ ನೀಡಿ ಸ್ಥೂಲವಾಗಿ ಪರಿಶೀಲಿಸಬೇಕು. ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿ ಹಾಗೂ ನಗರ ಪಟ್ಟಣ ಪಂಚಾಯತ್‍ನ ಪ್ರತಿ ವಾರ್ಡು ವ್ಯಾಪ್ತಿಯಲ್ಲಿ ಪರಿಶೀಲನೆ ನಡೆಸಿ ವಿಪತ್ತು ನಿರ್ವಹಣೆ ಯೋಜನೆ ತಯಾರಿಸಬೇಕು ಎಂದು ಅವರು ಹೇಳಿದರು.

WhatsApp Image 2025 06 10 at 6.05.27 PM

ಗುಡ್ಡ ಕಡಿದು ಮನೆ ನಿರ್ಮಿಸುವುದು ಅಪಾಯಕಾರಿಯಾಗಿದ್ದು, ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಪ್ರಾಕೃತಿಕ ನೀರಿನ ಹರಿವನ್ನು ತಿರುಗಿಸುವುದು ಕೂಡ ಪ್ರಾಕೃತಿಕ ದುರಂತಗಳಿಗೆ ಕಾರಣವಾಗಬಲ್ಲದು ಎಂದು ಜಿಲ್ಲಾಧಿಕಾರಿ ಹೇಳಿದರು.

ಪ್ರತಿ ಶಾಲಾ ಕಟ್ಟಡಗಳು ಸುಸ್ಥಿತಿಯಲ್ಲಿರುವ ಬಗ್ಗೆ ಸಂಬಂಧಪಟ್ಟ ಮುಖ್ಯೋಪಾಧ್ಯಾಯರಿಂದ ವರದಿ ಪಡೆಯಬೇಕು. ಅಂಗನವಾಡಿ ಕಟ್ಟಡಗಳ ಕ್ಷಮತೆಯನ್ನು ಪರಿಶೀಲಿಸಬೇಕು. ರಾಷ್ಟ್ರೀಯ ಹೆದ್ದಾರಿ ಕೆತ್ತಿಕಲ್‍ನಲ್ಲಿ ಭೂಕುಸಿತ ತಡೆಯುವ ಕಾಮಗಾರಿ ವಿಳಂಬವಾಗುತ್ತಿರುವ ಬಗ್ಗೆ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಈ ಕಾಮಗಾರಿಗೆ ಕೇಂದ್ರದಿಂದ ಅನುಮೋದನೆ ಸಿಕ್ಕಿದ್ದು ಶೀಘ್ರವೇ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

ಮಂಗಳೂರು ವಿಮಾನ ನಿಲ್ದಾಣದ ಸುತ್ತಮುತ್ತ ಇರುವ ಜನವಸತಿ ಪ್ರದೇಶಗಳಿಗೆ ವಿಮಾನ ನಿಲ್ದಾಣದಿಂದ ಮಳೆ ನೀರು ಹರಿದು ಹೋಗಿ ಸಮಸ್ಯೆಯಾಗುತ್ತಿರುವ ಬಗ್ಗೆ ಕ್ರಮ ಕೈಗೊಳ್ಳಲು ಒಂದು ವರ್ಷ ಮೊದಲೇ ತಿಳಿಸಲಾಗಿದ್ದರೂ, ಕ್ರಮಕೈಗೊಳ್ಳದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಈ ಬಗ್ಗೆ ಬುಧವಾರ ಮಧ್ಯಾಹ್ನದೊಳಗೆ ವರದಿ ನೀಡುವಂತೆ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಸೂಚಿಸಿದರು. ಈ ಬಗ್ಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಹಾಗೂ ಮುಂದಿನ ಯೋಜನೆಗಳ ಬಗ್ಗೆ ವರದಿ ನೀಡಬೇಕು. ತಪ್ಪಿದ್ದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ತೀವ್ರ ಗಾಳಿ ಮಳೆಗಳ ಸಂದರ್ಭದಲ್ಲಿ ಮೀನುಗಾರಿಕೆಗೆ ತೆರಳಿದ ದೋಣಿಗಳು ಎನ್.ಎಂ.ಪಿ.ಟಿ ಬಂದರು ಪ್ರವೇಶಿಸುವ ಕುರಿತು ಎನ್.ಎಂ.ಪಿ.ಎ ಮತ್ತು ಮೀನುಗಾರಿಕೆ ಇಲಾಖೆ ಜಂಟಿಯಾಗಿ ಸೂಕ್ತ ಕಾರ್ಯವಿಧಾನ ರೂಪಿಸುವಂತೆ ಅವರು ಸೂಚಿಸಿದರು.

ಇದನ್ನು ಓದಿದ್ದೀರಾ? ಪರಿಸರ ಸ್ನೇಹಿ ಹೆಜ್ಜೆ: ‘ಬಯೋಡಿಗ್ರೇಡೆಬಲ್’ ಪ್ಲಾಸ್ಟಿಕ್ ಪೊಟ್ಟಣದಲ್ಲಿ ನಂದಿನಿ ಹಾಲಿನ ಪೂರೈಕೆ ಆರಂಭಿಸಿದ ಬಮೂಲ್

ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್ ಕೆ ಮಾತನಾಡಿ, ಪ್ರಾಕೃತಿಕ ದುರಂತಗಳ ನಂತರ ಸಂತ್ರಸ್ತರನ್ನು ಸ್ಥಳಾಂತರಿಸುವ ಬದಲು, ರೆಡ್ ಅಲರ್ಟ್ ಸಮಯದಲ್ಲಿಯೇ ಸಂಭಾವ್ಯ ಅನಾಹುತಗಳ ಪ್ರದೇಶದಲ್ಲಿ ನಾಗರಿಕರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಬೇಕು. ಅಂತಹ ಸ್ಥಳಗಳ ಮನೆಗಳಿಗೆ ನೋಟಿಸ್ ಕೊಡಬೇಕು ಎಂದು ತಿಳಿಸಿದರು.

ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಟನಿ ಮರಿಯಪ್ಪ, ಉಪ ಪೊಲೀಸ್ ಆಯುಕ್ತ ಸಿದ್ದಾರ್ಥ್ ಗೋಯಲ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X