ಮಂಗಳೂರು | ಬಾಲಕರ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ: ಮೊಹಮ್ಮದ್ ಮಿಕ್ದಾದ್‌ಗೆ ಪ್ರಥಮ ಸ್ಥಾನ

Date:

Advertisements

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ದ.ಕ. ಶಾಲಾ ಶಿಕ್ಷಣ ಇಲಾಖೆಯು 2025-2026ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಜಿಲ್ಲಾಮಟ್ಟದಲ್ಲಿ ಆಟೋಟ ಸ್ಪರ್ಧೆಗಳನ್ನು ಉಳ್ಳಾಲ ತಾಲೂಕಿನ ಉಚ್ಚಿಲಗುಡ್ಡೆಯ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಲಾಗಿತ್ತು.

ಜಿಲ್ಲಾಮಟ್ಟದ ಈ ಕ್ರೀಡಾಕೂಟದಲ್ಲಿ ಅಂಡರ್ -14 ಬಾಲಕರಿಗಾಗಿ ಆಯೋಜಿಸಿದ್ದ ಕರಾಟೆ ಸ್ಪರ್ಧೆಯಲ್ಲಿ ಬಂಟ್ವಾಳ ತಾಲೂಕಿನ ಅಮ್ಟೂರು ಕರಿಂಗಾಣದಲ್ಲಿರುವ ದೇವಮಾತ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ಎಂ.ಎಚ್. ಮೊಹಮ್ಮದ್ ಮಿಕ್ದಾದ್‌ ಪ್ರಥಮ ಸ್ಥಾನ ಪಡೆದಿದ್ದಾರೆ.

miqdad karate 1

ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿರುವ ಹಿನ್ನೆಲೆಯಲ್ಲಿ ರಾಜ್ಯಮಟ್ಟದ ಸ್ಪರ್ಧೆಗೂ ಮೊಹಮ್ಮದ್ ಮಿಕ್ದಾದ್‌ ಆಯ್ಕೆಯಾಗಿದ್ದಾರೆ. ಕಳೆದ ಜುಲೈ ತಿಂಗಳಲ್ಲಿ ಬಂಟ್ವಾಳ ತಾಲೂಕು ಮಟ್ಟದಲ್ಲಿ ನಡೆದಿದ್ದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ, ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದರು.

Advertisements

ಇದನ್ನು ಓದಿದ್ದೀರಾ? ಬಂಟ್ವಾಳ | ತಾಲೂಕು ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಆರೋಗ್ಯಾಧಿಕಾರಿಯನ್ನು ಭೇಟಿಯಾದ ಎಸ್‌ಡಿಪಿಐ ನಿಯೋಗ

ಪ್ರತಿಭಾನ್ವಿತ ವಿದ್ಯಾರ್ಥಿಯಾಗಿರುವ ಮೊಹಮ್ಮದ್ ಮಿಕ್ದಾದ್‌, ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಮೆಲ್ಕಾರ್ ಸಮೀಪದ ಬೋಳಂಗಡಿ ನಿವಾಸಿ ಮುಸ್ತಫಾ ಎಂ ಎಚ್ ಹಾಗೂ ಫಾಮಿದಾ ದಂಪತಿಯ ಪುತ್ರ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಶಾಸಕ ಯಶ್ಪಾಲ್ ಸುವರ್ಣರವರ ಮೇಲೆ ಕಠಿಣ ಸಾಂವಿಧಾನಿಕ ಕ್ರಮ ಜರುಗಿಸಿ – ಕೆ ಫಣಿರಾಜ್

ತಮ್ಮ ಶಾಸಕ ಸ್ಥಾನದ ಸಂವಿಧಾನಿಕ ಮರ್ಯಾದೆಯನ್ನು ಮೀರಿ ವರ್ತಿಸಿರುವ ಉಡುಪಿಯ ಶಾಸಕ...

ಭಾಲ್ಕಿ | ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮ ಅರಿವು ಅಭಿಯಾನ

ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದಲ್ಲಿ ಎನ್‌ಆರ್‌ಎಲ್‌ಎಂ ಇಲಾಖೆ ಹಾಗೂ ಜೈ ಕರ್ನಾಟಕ...

ಗುಬ್ಬಿ | ಕಾಡುಗೊಲ್ಲರು ಶ್ರೀ ಕೃಷ್ಣನ ಆರಾಧಕರಲ್ಲ : ಬಿ.ದೊಡ್ಡಯ್ಯ

ವಿಶಿಷ್ಟ ಆಚರಣೆ ಸಂಸ್ಕೃತಿಯಲ್ಲಿ ಬುಡಕಟ್ಟು ಎಂದು ಗುರುತಿಸಿಕೊಂಡ ಕಾಡು ಗೊಲ್ಲರು...

ತುಮಕೂರು | ನೂತನ ವಿದ್ಯಾರ್ಥಿನಿಲಯ ನಿರ್ಮಾಣ : ಸಚಿವರಿಂದ ಶಂಕುಸ್ಥಾಪನೆ

ತುಮಕೂರು ನಗರದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಶ್ರೀ ಡಿ. ದೇವರಾಜ ಅರಸು...

Download Eedina App Android / iOS

X