ಮಂಗಳೂರಿನ ಕಾವೂರು ಮತ್ತು ಬಂದರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾದಕ ದ್ರವ್ಯ ಸೇವನೆ ಮಾಡಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ನಗರದ ಆಕಾಶಭವನದ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ಶಾಂತಿನಗರ ನಿವಾಸಿ ಮಹಮ್ಮದ್ ಸುಹೈಬ್ (29) ಎಂಬಾತನ್ನು ಕಾವೂರು ಠಾಣೆ ಪೊಲೀಸರು ವಿಚಾರಣೆ ನಡೆಸಿದ ಸಂದರ್ಭದಲ್ಲಿ ಆತ ಮಾದಕ ದ್ರವ್ಯ ಸೇವನೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಬಳಿಕ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮಾದಕ ದ್ರವ್ಯ ಸೇವನೆ ಮಾಡಿರುವುದು ದೃಢಪಟ್ಟಿದೆ.
ಇದನ್ನೂ ಓದಿ: ದ.ಕ. | ಕೇಂದ್ರ ಸರ್ಕಾರದಿಂದ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್: ಸಂಸದ ಚೌಟ
ಮತ್ತೊಂದು ಪ್ರಕರಣದಲ್ಲಿ ಮಂಗಳೂರಿನ ಸೆಂಟ್ರಲ್ ಮಾರ್ಕೆಟ್ ಬಳಿ ಮಾದಕ ದ್ರವ್ಯ ಸೇವನೆ ಮಾಡಿರುವ ಖಚಿತ ಮಾಹಿತಿ ಮೇರೆಗೆ ಬಡಗ ಮಿಜಾರು, ತೋಡಾರು ನಿವಾಸಿ ಅಬ್ದುಲ್ ಉವೇಸ್ ಅಲಿಯಾಸ್ ಉವೇಸ್ (30) ಮತ್ತು ಮಡಿಕೇರಿ ಗಣಪತಿ ಸ್ಟ್ರೀಟ್ ನಿವಾಸಿ ಅಸ್ವನ್ (24) ಎಂಬವರನ್ನು ಬಂದರು ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮಾದವ ದ್ರವ್ಯ ಸೇವನೆ ದೃಢಪಟ್ಟಿದೆ. ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
