ಮಂಗಳೂರು | ಗ್ಯಾರಂಟಿ ಯೋಜನೆಗಳಿಂದ ಜನತೆಗೆ ಆರ್ಥಿಕ ಶಕ್ತಿ ದೊರಕಿದೆ: ಹೆಚ್ ಎಂ ರೇವಣ್ಣ

Date:

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹ ಜ್ಯೋತಿ, ಯುವನಿಧಿ, ಅನ್ನಭಾಗ್ಯ, ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆಯನ್ನು ರಾಜ್ಯದ ಪ್ರತಿಯೊಬ್ಬ ಕಟ್ಟಕಡೆಯ ವ್ಯಕ್ತಿಗೆ ತಲುಪಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ. ಈ ಯೋಜನೆಗಳ ಸದುಪಯೋಗದಿಂದ ರಾಜ್ಯದ ಜನರ ಜೀವನ ಮಟ್ಟ ಸುಧಾರಿಸಲು ಸಹಾಯವಾಗಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್ ಎಂ ರೇವಣ್ಣ ತಿಳಿಸಿದರು.

- Advertisement -

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಮಂಗಳವಾರ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಆಯೋಜಿಸಲಾಗಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಭಾರತ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಗಾಂಧೀಜಿಯವರ ಪಾತ್ರ ಎಷ್ಟು ಮುಖ್ಯವೋ ಅದೇ ರೀತಿ ಆರ್ಥಿಕ ಸ್ವಾತಂತ್ರ್ಯದಲ್ಲಿ ಇಂದಿರಾ ಗಾಂಧಿಯವರ ಕೊಡುಗೆ ಸ್ಮರಣೀಯ. ರಾಜ್ಯದ ಜನತೆಗೆ ಕನಿಷ್ಠ ಆರ್ಥಿಕ ಭದ್ರತೆಯನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದನ್ನು ಮೂದಲಿಸುವುದು ಸರಿಯಲ್ಲ ಎಂದು ಅವರು ಹೇಳಿದರು.

WhatsApp Image 2025 12 23 at 6.15.11 PM

ರಾಜ್ಯ ಸರಕಾರ ಜನಸಾಮಾನ್ಯರ ಆರ್ಥಿಕ ಬದುಕಿಗೆ ಒತ್ತುಕೊಟ್ಟು, ಅವರನ್ನು ಆರ್ಥಿಕ ಸಬಲರನ್ನಾಗಿಸಿದೆ. ಈ ಗ್ಯಾರಂಟಿ ಯೋಜನೆಗಳಿಂದಾಗಿ ಜನತೆಗೆ ಕೊಂಡುಕೊಳ್ಳುವ ಶಕ್ತಿ ಹೆಚ್ಚಳವಾಗಿದೆ ಎಂದು ಹೇಳಿದರು.

ಜಾಗೃತ ಕರ್ನಾಟಕದ ಸಂಚಾಲಕ ಡಾ. ವಾಸು ಹೆಚ್.ವಿ ಮಾತನಾಡಿ, ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿಯಾಗುತ್ತದೆಯೇ ವಿನಃ ರಾಜ್ಯದ ಅಭಿವೃದ್ಧಿ ಕುಂಠಿತಗೊಳ್ಳಲು ಸಾಧ್ಯವಿಲ್ಲ. ಜನಸಮುದಾಯಕ್ಕೆ ಕೊಳ್ಳುವ ಶಕ್ತಿ ಜಾಸ್ತಿ ಬಂದರೆ ಮಾತ್ರ ರಾಜ್ಯ ಅಭಿವೃದ್ಧಿಯಾಗುತ್ತದೆ. ಈ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳು ಜನರ ಜೀವನದ ಅವಶ್ಯಕತೆಗಳಿಗೆ ನೆರವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಪ್ಪಾ ಅಮರನಾಥ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಕಹ ಅಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ, ಅಪರ ಜಿಲ್ಲಾಧಿಕಾರಿ ರಾಜು ಕೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜಾ, ಮಂಜುನಾಥ ಭಂಡಾರಿ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತ ಡಿ.ಎಸ್. ಗಟ್ಟಿ, ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಾಹೀದ್ ತೆಕ್ಕಿಲ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ವಿವಿಧ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಜಯಂತಿ ಬಿ.ಎ, ಉಮಾನಾಥ ಶೆಟ್ಟಿ, ಪದ್ಮನಾಭ ಸಾಲ್ಯಾನ್, ಆಲ್ವಿನ್ ಕ್ಲೆಮೆಂಟ್ ಕುಟಿನ, ಶಾಹುಲ್ ಹಮೀದ್, ಸುಧೀರ್ ಕುಮಾರ್ ಶೆಟ್ಟಿ, ಸುರೇಂದ್ರ ಬಿ. ಕಂಬಳಿ, ಅರುಣ್ ಕುಮಾರ್ ಶೆಟ್ಟಿ, ಎಸ್.ರಫೀಕ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಸದಸ್ಯರು ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನು ಓದಿದ್ದೀರಾ? ದ.ಕ. | ಪಾಸ್‌ಪೋರ್ಟ್‌ ವೆರಿಫಿಕೇಶನ್‌ ವೇಳೆ ಸುಳ್ಳು ದಾಖಲೆ ಸೃಷ್ಟಿ: ಪೊಲೀಸ್ ಸಿಬ್ಬಂದಿಯನ್ನೇ ಬಂಧಿಸಿದ ಪೊಲೀಸರು!

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ಸ್ವಾಗತಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...